ಪ್ರಧಾನಿ ಮೋದಿ ನನ್ನ ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ| Cmsiddaramaiah

ಸಂಡೂರು: ಪ್ರಧಾನಿ ಮೋದಿ ಅವರು ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ವ್ಯಂಗ್ಯವಾಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರರೆಗೂ ಸರಣಿ ಸುಳ್ಳು ಗಳನ್ನು ಹೇಳಿದರು. ನೀವು ಆರೋಪ ಸಾಬೀತಿಪಡಿಸಿ, ನಾನು ರಾಜಕೀಯ ನಿವೃತ್ತಿ ತಗೊತೀನಿ ಎಂದು ಮೋದಿಯವರಿಗೆ ಸವಾಲು ಹಾಕಿದ್ದೆ. ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದರು.

ನಾನು ಮೂರು ದಿನಗಳ ಕಾಲ ಸಂಡೂರಿನಲ್ಲಿ ಪ್ರಚಾರ ಮಾಡಿದೆ. ಈ ವೇಳೆ ತುಕಾರಾಮ್ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿದ್ದೇನೆ. ತುಕಾರಾಮ್ ಅವರಿಗೂ ಮೊದಲು ಸಂಡೂರು ಹೇಗಿತ್ತು ಎನ್ನುವುದೂ ನನಗೂ ಗೊತ್ತು. ಈಗ ತುಕಾರಾಮ್ ಅವರು ಒಳ್ಳೆ ಕೆಲಸಗಳನ್ನು ಮಾಡಿರುವುದನ್ನು ನಾನು ನೋಡಿದ್ದೇನೆ ಎಂದರು.

ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ. ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ ಇದನ್ನು ಪ್ರಶ್ನಿಸಬೇಕಿದೆ ಎಂದರು.

ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ ಮುಗಿಸಿ ಹೋದರು ಎಂದು ವಿವರಿಸಿದರು.

ರಿಪಬ್ಲಿಕ್ ಬಳ್ಳಾರಿ ಮಾಡಿದ ರೆಡ್ಡಿ

ಬಳ್ಳಾರಿ ಜಿಲ್ಲೆಯ ಜನತೆಯನ್ನು ಭಯದಲ್ಲಿಟ್ಟು ರಿಪಬ್ಲಿಕ್ ಬಳ್ಳಾರಿ ಮಾಡಿದ್ದ ಜನಾರ್ದನರೆಡ್ಡಿಯವರಿಗೆ ಬಿಜೆಪಿ ಈ ಚುನಾವಣೆಯ ಉಸ್ತುವಾರಿ ವಹಿಸಿತ್ತು. ಆದರೆ, ಸಂಡೂರಿನ ಜನತೆ ರೆಡ್ಡಿಯವರ ಹಣಕ್ಕೆ, ಭಯಕ್ಕೆ, ಆಮಿಷಕ್ಕೆ, ಸುಳ್ಳುಗಳಿಗೆ, ಅಪಪ್ರಚಾರಕ್ಕೆ ಸೋಲಲಿಲ್ಲ. ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿ ರಾಜಕಾರಣ ಮತ್ತು ಸತ್ಯದ ರಾಜಕಾರಣವನ್ನು ಗೆಲ್ಲಿಸಿದ್ದೀರಿ. ಇದು ಸಂಡೂರಿನ ಘನತೆಯನ್ನು ಹೆಚ್ಚಿಸಿದೆ ಎಂದರು.

ಇವತ್ತಿನವರೆಗೂ ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ. ಕೇವಲ ಆಪರೇಷನ್ ಕಮಲದ ಮೂಲಕವೇ ಬಿಜೆಪಿ ರಾಜ್ಯದಲ್ಲಿ ಅಧಿಕಾರ ನಡೆಸಿದೆ. ಆಪರೇಷನ್ ಕಮಲಕ್ಕೆ ಬಳಸಿದ ಹಣ ಕೂಡ ಕಪ್ಪು ಹಣ ಅಲ್ಲವೇ ಎಂದು ಪ್ರಶ್ನಿಸಿದರು.

ನಿಮ್ಮ ಆಶೀರ್ವಾದ ಇರುವವರೆಗೂ ಬಗ್ಗಲ್ಲ-ಜಗ್ಗಲ್ಲ

ಮೂರು ಉಪ ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ದೊಡ್ಡ ಆಶೀರ್ವಾದ ಮಾಡಿದ್ದಾರೆ. ನನ್ನ ವಿರುದ್ಧ ಸುಳ್ಳು ಕೇಸು, ಸುಳ್ಳು ಆರೋಪಗಳ ಮೂಲಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಬಿಜೆಪಿಗೆ ರಾಜ್ಯದ ಜನತೆ ತಕ್ಕ ಉತ್ತರ ನೀಡಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ಈ ಸಿದ್ದರಾಮಯ್ಯ ಯಾವುದೇ ಷಡ್ಯಂತ್ರ, ಸುಳ್ಳು ಕೇಸುಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು.

ನಾಚಿಕೆ ಇಲ್ಲದೆ ಸುಳ್ಳು ಹೇಳ್ತಾರೆ

ವಕ್ಫ್ ವಿಚಾರದಲ್ಲೂ ಬಿಜೆಪಿಯ ರಾಷ್ಟ್ರೀಯ ನಾಯಕರಿಂದ ಲೋಕಲ್ ಲೀಡರ್ ಗಳ ವರೆಗೂ ಎಲ್ಲರೂ ಸರಣಿ ಸುಳ್ಳು ಅಪಪ್ರಚಾರ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರು ಮಹಾರಾಷ್ಟ್ರ ಚುನಾವಣೆಯಲ್ಲಿ 700 ಕೋಟಿ ಭ್ರಷ್ಟಾಚಾರದ ಆರೋಪ ಹೊರಿಸಿ ಭಾಷಣ ಮಾಡಿದರು. ನಾನು ಪ್ರಧಾನಿಗೆ ಸವಾಲು ಹಾಕಿದೆ, ನಿಮ್ಮ ಆರೋಪ ಸಾಬೀತು ಮಾಡಿ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎನ್ನುವ ನನ್ನ ಸವಾಲು ಸ್ವೀಕರಿಸಲು ಪ್ರಧಾನಿ ಮೋದಿ ಧೈರ್ಯ ಮಾಡಲಿಲ್ಲ. ಅವರಿಗೆ ಸುಳ್ಳು ಹೇಳುವುದಕ್ಕೆ ಮಾತ್ರ ಧೈರ್ಯ ಬರುತ್ತದೆ ಎಂದು ವ್ಯಂಗ್ಯವಾಡಿದರು.

Box

ಸಂಡೂರಿಗೆ 2 ಸಾವಿರ ಮನೆ ಬಂಪರ್

ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸಂಡೂರು ಜನತೆಗೆ ಅಭಿನಂದಿಸಿ ಭಾಷಣ ಮಾಡುವ ವೇಳೆ ಸಂಡೂರು ಕ್ಷೇತ್ರಕ್ಕೆ ವಸತಿ ಇಲಾಖೆಯಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡುವುದಾಗಿ ಘೋಷಿಸಿದರು. ಈಗಾಗಲೇ 2172 ಮನೆಗಳನ್ನು ನೀಡಲಾಗಿದೆ‌. ಸಂಡೂರಿನಲ್ಲಿ ಬಡವರು ಹೆಚ್ಚಾಗಿರುವುದರಿಂದ ಮತ್ತು ನಂಜುಂಡಪ್ಪ ಅವರ ವರದಿಯಲ್ಲಿ ಹಿಂದುಳಿದ ತಾಲ್ಲೂಕಿನ ಪಟ್ಟಿಯಲ್ಲಿ ಇರುವುದರಿಂದ ಹೆಚ್ಚುವರಿಯಾಗಿ 2000 ಮನೆಗಳನ್ನು ನೀಡಲಾಗುವುದು ಎಂದು ಘೋಷಿಸಿದರು.‌

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!