ದೆಹಲಿ: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ (JDS) ಕರ್ನಾಟಕ ಘಟಕದ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶನಿವಾರ ಹೇಳಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿ, ಸದ್ಯ ಕುಮಾರಸ್ವಾಮಿ ಪಕ್ಷದ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಅವರು ಕೇಂದ್ರ ಸಚಿವರಾಗಿದ್ದು, ಪಕ್ಷದ ವ್ಯವಹಾರಗಳ ಮೇಲೆ ಕೇಂದ್ರೀಕರಿಸಲು ಸಾಧ್ಯವಾಗುತ್ತಿಲ್ಲ. ಮುಂದೆ ನಿಖಿಲ್ ಅವರು ಪಕ್ಷದ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಾರೆ ಎಂದರು.
ಇದನ್ನೂ ಓದಿ: ಚನ್ನಪಟ್ಟಣದಲ್ಲಿ JDS ಕಾರ್ಯಕರ್ತರಿಗೆ ಕಿರುಕುಳ ಆರೋಪ; ನಿಖಿಲ್ ಕುಮಾರಸ್ವಾಮಿ ಕಿಡಿ
ನಿಖಿಲ್ ಯುವ ನಾಯಕ ಮತ್ತು ಉಜ್ವಲ ಭವಿಷ್ಯ ಹೊಂದಿದ್ದಾರೆ. ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡುತ್ತೇವೆ ಮತ್ತು ಅವರ ನಾಯಕತ್ವದಲ್ಲಿ ಪಕ್ಷ ಬೇರು ಮಟ್ಟದಲ್ಲಿ ಬಲಪಡಿಸುತ್ತೇವೆ ಎಂದರು.