ದೊಡ್ಡಬಳ್ಳಾಪುರ ಪ್ರೌಢಶಾಲೆ ಸಹಶಿಕ್ಷಕರಿಂದ BEOಗೆ ಮನವಿ..! ಕಾರಣ ಏನ್ ಗೊತ್ತಾ..?

ದೊಡ್ಡಬಳ್ಳಾಪುರ: ಪ್ರೌಢಶಾಲಾ ಸಹ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ಮತ್ತು ಬೇಡಿಕೆಗಳಿಗೆ ಪರಿಹಾರ ನೀಡುವ ಕುರಿತು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ದೊಡ್ಡಬಳ್ಳಾಪುರ ತಾಲೂಕು ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (BEO) ಇಂದು ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ದೊಡ್ಡಬಳ್ಳಾಪುರ ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಆರ್.ಶಿವಕುಮಾರ್, ಪ್ರೌಢಶಾಲೆಯ ಸಹ ಶಿಕ್ಷಕರು ಇಲಾಖೆಯ ಜೊತೆಗೂಡಿ ಮಕ್ಕಳ ಗುಣಾತ್ಮಕ ಕಲಿಕೆಗಾಗಿ ವಿವಿಧ ರೀತಿಯ ಚಟುವಟಿಕೆಗಳನ್ನು ಕೈಗೊಂಡು ಫಲಿತಾಂಶ ಉತ್ತಮ ಪಡಿಸಲು ಪ್ರಯತ್ನಿಸುತ್ತಿದ್ದೇವೆ. ಪ್ರೌಢ ಶಿಕ್ಷಣ ಹಂತದಲ್ಲಿ ನಿಜವಾಗಿಯೂ ಗುಣಾತ್ಮಕ ಶಿಕ್ಷಣ ನೀಡುವುದು ಅತ್ಯಂತ ಮಹತ್ವದ ವಿಷಯವಾಗಿದೆ.

ಈ ವಿಚಾರವಾಗಿ ಈಗಾಗಲೇ ನಮ್ಮ ಸಂಘಟನೆಯು ಸಚಿವರು, ಅಧಿಕಾರಿಗಳಿಗೆ ಮನವಿಗಳನ್ನು ಸಲ್ಲಿಸಲಾಗಿದೆ. ಅದರ ಜೊತೆಗೆ ಪ್ರತ್ಯಕ್ಷವಾಗಿ ಭೇಟಿಯಾಗಿ ಸಮಸ್ಯೆ ಮತ್ತು ಬೇಡಿಕೆಗಳ ಬಗ್ಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಾಗಿದೆ.

ಆದರೆ ಸಹ ಗುಣಾತ್ಮಕ ಶಿಕ್ಷಣ ನೀಡಲು ರಾಜ್ಯ ಮತ್ತು ಜಿಲ್ಲಾ ಹಂತದ ಅಧಿಕಾರಿಗಳು ಪ್ರತ್ಯೇಕವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು (ಉದಾ: ಕಲಿಕಾ ಆಸರೆ, ಮರು ಸಿಂಚನ, ಎಪ್‌.ಎಲ್‌.ಎನ್. ಪ್ರತಿಬಿಂಬ ಇತ್ಯಾದಿ) ಈ ರೀತಿಯ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿ ದಾಖಲೀಕರಣ ಮಾಡಲು ಶಿಕ್ಷಕರ ಮೇಲಿನ ಒತ್ತಡದಿಂದ ಶಿಕ್ಷಕರಲ್ಲಿ ಗೊಂದಲ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಏಕರೂಪದ ಕಾರ್ಯಕ್ರಮಗಳನ್ನು ರೂಪಿಸಿ ಶಿಕ್ಷಕರ ಮೇಲಿನ ಒತ್ತಡ ಕಡಿಮೆ ಮಾಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗದಂತೆ ಅನುವು ಮಾಡಿಕೊಡುವುದು ಹಾಗೂ ಕೆಳಗಿನ ಸಮಸ್ಯೆ ಮತ್ತು ಬೇಡಿಕೆಗಳನ್ನು ಪರಿಹರಿಸಿ ಕೊಡುವಂತೆ ಇಲಾಖೆಯ ಉನ್ನತ ಅಧಿಕಾರಿಗಳ ಗಮನಕ್ಕೆ ತರಬೇಕೆಂದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಪ್ರೌಢಶಾಲಾ ಸಹಶಿಕ್ಷಕ ವಿಭಾಗ ರಾಜ್ಯ ಸರ್ಕಾರಿ ನೌಕರ ಸಂಘದ ಪ್ರತಿನಿಧಿಗಳಾದ ಟಿಕೆ ಪ್ರಕಾಶ್, ಚಿಕ್ಕೆಗೌಡ ಎಂ.ಎನ್., ಕಾರ್ಯದರ್ಶಿ ಸಿದ್ದಲಿಂಗಸ್ವಾಮಿ, ಪದಾಧಿಕಾರಿಗಳಾದ ಮಂಜುಳ, ಕೆಎನ್ ವೆಂಕಟೇಶ್ ಮೂರ್ತಿ, ದೇವರಾಜು, ಕೆಂಪೇಗೌಡ, ಚಂದ್ರಶೇಖರ್, ಪ್ರಕಾಶ್, ಬಸವರಾಜು, ಪುನೀತ್, ಜಬಿ ಉಲ್ಲಾಖಾನ್, ಶಕಿಲಾ ಕುಂದನ್, ಮಂಜುನಾಥ್, ದೇವರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವಲಿಂಗಯ್ಯ, ಜಿಲ್ಲಾ ಕಾರ್ಯದರ್ಶಿ ಜೈಕುಮಾರ್, ಎವಿ ಚಂದ್ರಪ್ಪ, ವಸಂತಗೌಡ, ಸೇರಿದಂತೆ ಸಂಘದ ಸದಸ್ಯರಿದ್ದರು.

ಬೇಡಿಕೆಗಳು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ 3 ಹಂತದ ಪರೀಕ್ಷೆಗಳ ಬದಲು ಈ ಹಿಂದಿನಂತೆ 2 ಪರೀಕ್ಷೆಗಳನ್ನು ಆಯೋಜಿಸುವುದು ಹಾಗೂ ಸಿಬಿಎಸ್‌ಇ ಮತ್ತು ಐಸಿಎಸ್‌ ಇ ಪರೀಕ್ಷಾ ಫ್ಲಿಂಪಾಶ ಮಾದರಿಯಂತೆ ಅಂತರಿಕ ಅಂಕಗಳನ್ನು ಪರಿಗಣಿಸಿ ಫಲಿತಾಂಶ ನೀಡುವುದು.

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆಯ ವಿನ್ಯಾಸವನ್ನು ಸರಳೀಕರಣಗೊಳಿಸುವುದು ಹಾಗೂ ಪರೀಕ್ಷೆ ಮತ್ತು ಮೌಲ್ಯ ಮಾಪನ ಕಾರ್ಯವನ್ನು ಏಪ್ರಿಲ್ 14ರ ಒಳಗಾಗಿ ಪೂರ್ಣಗೊಳಿಸುವುದು.

ಖಾಸಗಿ ಅನುದಾನಿತ ಶಾಲೆಗಳಲ್ಲಿ 01-01-2016 ರಿಂದ 31-12-2020 ವರೆಗಿನ ಖಾಲಿ ಹುದ್ದೆಗಳನ್ನು ತುಂಬಲು ಶೀಘ್ರದಲ್ಲಿ ಅನುಮತಿ ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸುವುದು.

ಕಲ್ಯಾಣ ಕರ್ನಾಟಕ ಭಾಗದಲ್ಲಿಯ ಕೆಕೆಆರ್‌ಡಿ ಮಂಡಳಿಯಿಂದ ನಡೆಯುವ ಪ್ರೌಢಶಾಲೆಗಳ ಸಿಬ್ಬಂದಿಗಳಿಗೆ ನಿಗಧಿತ ಸಮಯದಲ್ಲಿ ವೇತನ ಪಾವತಿಸುವುದು. ರಾಜ್ಯದಲ್ಲಿಯ ಉನ್ನತೀಕರಿಸಿದ ಪ್ರೌಢಶಾಲೆ ಮತ್ತು ಆರ್‌ಎಂಎಸ್‌ಎ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ನಿಯಮಿತವಾಗಿ ವೇತನ ನೀಡುವುದು. ಹಾಗೂ ಮುಖ್ಯ ಶಿಕ್ಷಕರು, ಬೋಧಕೇತರ ಸಿಬ್ಬಂದಿಗಳನ್ನು ನೇಮಕ ಮಾಡುವುದು.

ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ಹೊಂದಿದ ಶಿಕ್ಷಕರುಗಳಿಗೆ 15,20,25,30 ಕಾಲಮಿತಿ ವೇತನ ಬಡ್ತಿ ನೀಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಸಮಗ್ರ ತಿದ್ದುಪಡಿ ತರುವುದು.

ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳಿಗೆ ಬಡ್ತಿ ನೀಡಲು ಈಗಾಗಲೇ ಇರುವ ನಿಯಮಗಳಿಗೆ ತಿದ್ದುಪಡಿ ತಂದು ಈ ಹಿಂದೆ ಇದ್ದಂತೆ ಯಾವುದೇ ನಿಯಮ ಷರತ್ತುಗಳಿಲ್ಲದೇ 50:50 ರ ಅನುಪಾತದಲ್ಲಿ ಸಹ ಶಿಕ್ಷಕರಿಗೆ ಬಡ್ತಿ ನೀಡುವುದು.

ಶಾಲಾ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೌಢಶಾಲಾ ಶಿಕ್ಷಕರು ರಜೆ ಸಹಿತ ನೌಕರರಾಗಿದ್ದು, ಈ ಹಿಂದೆ ಜಾರಿಯಲ್ಲಿದ್ದಂತೆ ದಸರಾ ರಜೆಯನ್ನು ಅಕ್ಟೋಬರ್ 2 ರಿಂದ 29 ರವರೆಗೆ ಮತ್ತು ಬೇಸಿಗೆ ರಜೆಯನ್ನು ಏಪ್ರೀಲ್ 10 ರಿಂದ ಮೇ 30 ರವರಿಗೆ ನಿಗಧಿಗೊಳಿಸುವುದು ರಜೆಯ ಅವಧಿಯಲ್ಲಿ ತರಬೇತಿ, ಮೌಲ್ಯಮಾಪನ ಇನ್ನಿತರ ಕೆಲಸಗಳನ್ನು ನಿರ್ವಹಿಸಿದಲ್ಲಿ ಅದಕ್ಕೆ ಸಮಾನವಾಗಿ ಗಳಿಕೆ ರಜೆ ನೀಡುವುದು.

ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯ ನೌಕರರಿಗೆ ಓಪಿಎಸ್ ಜಾರಿಗೊಳಿಸುವುದು.

ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಹಿರಿಯ ಶಿಕ್ಷಕರಿಗೆ ಮುಖ್ಯ ಶಿಕ್ಷಕರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು (ಪ್ರಭಾರ ಭತ್ಯೆ, ಗಳಿಕೆ ರಜೆ, ಅರ್ಧ ದಿನದ ರಜೆ) ನೀಡುವುದು.

ರಾಜಕೀಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಬಜೆಟ್: ದೊಡ್ಡಬಳ್ಳಾಪುರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರು – ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Cm Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Budget) ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದಾರೆ.

[ccc_my_favorite_select_button post_id="119969"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ.. ಓರ್ವ ಸಾವು.. ಮತ್ತೊರ್ವನ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ಸ್ಥಳದಲ್ಲಿಯೇ ಸಾವನಪ್ಪಿ, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ***** ಬಳಿ ಸಂಭವಿಸಿದೆ

[ccc_my_favorite_select_button post_id="119977"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!