ಮತ್ತೆ BPL ಕಾರ್ಡ್ ರದ್ದು ಆತಂಕ..!: ಸಚಿವ ಕೆಹೆಚ್.ಮುನಿಯಪ್ಪ ಹೇಳಿದ್ದೇನು ನೋಡಿ| Winter session

ಬೆಳಗಾವಿ (Winter session): ಇತ್ತೀಚೆಗಷ್ಟೇ ಬೇಕಾಬಿಟ್ಟಿ ಬಿಪಿಎಲ್ ಕಾರ್ಡ್ ರದ್ದು ಮಾಡಿ ತೀವ್ರ ವಿರೋಧ ಎದುರಿಸಿದ ರಾಜ್ಯ ಸರ್ಕಾರ ಯೂಟರ್ನ್ ಹೊಡೆದಿತ್ತು. ಆದರೆ ಮತ್ತೆ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾತು ಕೇಳಿಬಂದಿದ್ದು ರಾಜ್ಯದ ಬಡ ಜನತೆ ಮತ್ತೊಂದು ಸುತ್ತಿನ ಆತಂಕಕ್ಕೆ ಕಾರಣವಾಗಿದೆ.

ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತç ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು. ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು.

ಇದನ್ನೂ ಓದಿ: ಅತಿಥಿ ಶಿಕ್ಷಕರಿಗೆ ಗುಡ್‌ನ್ಯೂಸ್ ನೀಡಿದ ಸಚಿವ ಮಧು ಬಂಗಾರಪ್ಪ| Winter session

ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಅರ್ಹರ ಬಿಪಿಎಲ್ ಪಡಿತರ ಕಾರ್ಡ್ ದಾರರ ಯಾವುದೇ ಕಾರ್ಡ್ ಗಳು ರದ್ದಾಗದಂತೆ ಅಧಿಕಾರಿಗಳಿಗೆ ಸೂಚಿಸಿ ರದ್ದಾದ ಬಿಪಿಎಲ್ ಕಾರ್ಡ್ ಗಳನ್ನು ಪುನರ್ ಸ್ಥಾಪಿಸಲಾಯಿತು.

ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ.

ಇದನ್ನೂ ಓದಿ: ಸಭಾಪತಿ ಕೌಂಟರ್ಗೆ ಶಾಸಕ ಸುನಿಲ್ ಕುಮಾರ್ ಶಾಕ್..!| Winter session

ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.

ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು.

ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ರಾಜಕೀಯ

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್ ಸಿಗ್ನಲ್

ಕನ್ನಡಿಗರ ಆಕ್ರೋಶಕ್ಕೆ‌ ಮಣಿದ ಮೋದಿ ಸರ್ಕಾರ: ಪ್ರಿಯಾಂಕ್ ಖರ್ಗೆ ಅಮೇರಿಕಾ ತೆರಳಲು ಗ್ರೀನ್

ಅಮೆರಿಕದ ಬಾಸ್ಟನ್ ನಗರದಲ್ಲಿ ನಡೆಯುತ್ತಿರುವ 'ಬಯೋ-2025' ಸಮಾವೇಶದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge)

[ccc_my_favorite_select_button post_id="109689"]
ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: ಕುಡಿಯುವ ನೀರಿಗೆ ಆದ್ಯತೆ, ಕಸಕ್ಕೂ ಮುಕ್ತಿ – ಡಿಕೆ ಶಿವಕುಮಾರ್ ಭರವಸೆ

ದೊಡ್ಡಬಳ್ಳಾಪುರ: “ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯಲು 14 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ತಾಲೂಕಿಗೆ ನೀಡಬೇಕು. ಇದಾದ ನಂತರ ನಾವು ಕೆರೆ ತುಂಬಿಸಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="109700"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಬೈಕ್ಗೆ ಟ್ಯಾಂಕರ್ ಡಿಕ್ಕಿ.. ಸವಾರನ ಸ್ಥಿತಿ ಗಂಭೀರ

ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ

[ccc_my_favorite_select_button post_id="109301"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]