ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದಕ್ಕೆ ರಾಜ್ಯ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ: ಬಸವರಾಜ ಬೊಮ್ಮಾಯಿ| 2A reservation

ದೆಹಲಿ: ಪಂಚಮಸಾಲಿ ಸಮುದಾಯದವರು 2 ಎ ಮೀಸಲಾತಿಗಾಗಿ (2A reservation) ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಮೇಲೆ ರಾಜ್ಯ ಸರ್ಕಾರ ಪೋಲಿಸರ ಮೂಲಕ ಲಾಠಿಚಾರ್ಜ್ ಮಾಡಿಸುವ ಮೂಲಕ ಕ್ಷಮಿಸಲಾರದ ತಪ್ಪು ಮಾಡಿದ್ದು, ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಜನ ವಿರೋಧಿ ಸರ್ಕಾರ ಅಂತ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ವಿಶೇಷವಾಗಿ ರೈತರ ವಿರುದ್ದ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ಕಾಲಕಾಲಕ್ಕೆ ಪ್ರವಾಹ, ಬರಗಾಲದ ಪರಿಹಾರ ಕೊಟ್ಟಿಲ್ಲ, ನಾವು ಜಾರಿ ತಂದ ಯೋಜನೆಗಳಿಗೆ ತಿಲಾಂಜಲಿ ಇಟ್ಟಿದ್ದಾರೆ. ರಾಜ್ಯ ಸರ್ಕಾರ ನೀಡುತ್ತಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತಗೊಳಿಸಿದ್ದಾರೆ.

ನಾನು ಸಿಎಂ ಆಗಿದ್ದಾಗ ರೈತರ ಮಕ್ಕಳಿಗಾಗಿ ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆ ನಿಲ್ಲಿಸಿದ್ದಾರೆ. ಒಂದು ರೀತಿಯಲ್ಲಿ ರೈತ ವಿರೋಧಿ ಮತ್ತು ಜನ ವಿರೋಧಿ ಸರ್ಕಾರ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಅದೇ ಹಿಂದುಳಿದ ವರ್ಗ ಹೆಚ್ಚಿನ ಮೀಸಲಾತಿ ಕೇಳುತ್ತಿರುವ ಸಂದರ್ಭದಲ್ಲಿ ಸಮಾಧಾನದಿಂದ ನ್ಯಾಯಸಮ್ಮತ ತೀರ್ಮಾನ ಮಾಡಬೇಕಿತ್ತು.

ಪಂಚಮಸಾಲಿ ಪೀಠದ ಸ್ವಾಮೀಜಿವರು ತಮ್ಮನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಈಗ ಪ್ರತಿಭಟನೆ ಮಾಡುವವರ ಮೇಲೆ ಲಾಠಿ ಚಾರ್ಜ್ ಮಾಡಿ ರಕ್ತ ಬರುವಂತೆ ಮಾಡಿದ್ದು, ಕ್ಷಮಿಸಲಾರದಂತಹ ಅಪರಾಧ, ಇದಕ್ಕೆ ರಾಜ್ಯ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ. ಪೋಲಿಸ್ ಆಡಳಿತ, ದೌರ್ಜನ್ಯ ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಸಿದರು.

ಓಲೈಕೆ ರಾಜಕಾರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಫಿಡವಿಟ್ ಬಗ್ಗೆ ಮಾತನಾಡಿದ್ದಾರೆ. ಮೀಸಲಾತಿ ಹೆಚ್ಚಳದ ಬಗ್ಗೆ ನಾವೇ ಆದೇಶ ಮಾಡಿದ್ದೇವೆ.

ವೀರಶೈವ ಲಿಂಗಾಯತ ಸಮುದಾಯದ ಮೀಸಲಾತಿ 5% ರಿಂದ 7 ಕ್ಕೆ ಹೆಚ್ಚಿಸಿದ್ದೇವೆ. ಒಕ್ಕಲಿಗ ಸಮುದಾಯದ ಮೀಸಲಾತಿಯನ್ನು 4%.ರಿಂದ 6% ಕ್ಕೆ ಹೆಚ್ಚಳ ಮಾಡಿದ್ದೇವೆ.

ನಾವೇ ಆದೇಶ ಮಾಡಿ, ನಾವೇ ಯಾಕೆ ತಡೆಯಾಜ್ಞೆ ತರುತ್ತೇವೆ. ಸಿದ್ದರಾಮಯ್ಯ ಅವರ ಬೆಂಬಲಿಗರೇ ಹಿನ್ನೆಲೆಯಲ್ಲಿ ನಿಂತು ಕೋರ್ಟ್ ಗೆ ಹೋದವರು. ಆಗ ನಾವು ಪೂರ್ಣ ವಾದ ಮಾಡಲು ಸಿದ್ದರಿದ್ದೇವೆ ಎಂದು ಹೇಳಿದ್ದೇವು. ಆಗ ಸುಪ್ರೀಂ ಕೋರ್ಟ್ ಇದನ್ನು ಸಂಪೂರ್ಣ ವಾದ ಆಲಿಸಿ ತೀರ್ಪು ಕೊಡುತ್ತೇವೆ‌.

ಅಲ್ಲಿಯವರೆಗೂ ರಾಜ್ಯ ಸರ್ಕಾರ ಈ ಆದೇಶ ಜಾರಿ ಮಾಡಬಾರದು ಅಂತ ಹೇಳಿತ್ತು. ನಾವು ಮುಂದಿನ ವಿಚಾರಣೆವರೆಗೂ ನಾವು ಈ ಆದೇಶ ಜಾರಿ ಮಾಡುವುದಿಲ್ಲ ಎಂದು ಹೇಳಿದ್ದೇವು. ಅದು ಬಿಟ್ಟು ನಾವು ಶಾಸ್ವತವಾಗಿ ನಮ್ಮ ಆದೇಶ ಹಿಂಪಡೆಯುತ್ತೇವೆ ಅಂತ ಹೇಳಿರಲಿಲ್ಲ.

ಇದೆಲ್ಲ ಗೊತ್ತಿದ್ದರೂ ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದ ಪ್ರತಿ ಓದುತ್ತೇನೆ ಅಂತ ಹೇಳಿದ್ದಾರೆ‌. ಆದರೆ, ಸುಪ್ರೀಂ ಕೋರ್ಟ್ ಆದೇಶವನ್ನೇ ಮಾಡಿಲ್ಲ. 2023 ರ ಜೂನ್ ತಿಂಗಳಲ್ಲಿ ವಿಚಾರಣೆ ಮುಂದೂಡಿದ್ದರು.

ಈ ಸರ್ಕಾರಕ್ಕೆ ಕಾಳಜಿ ಇಲ್ಲ. ಈ ಸರ್ಕಾರ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಈ ಸರ್ಕಾರದ ನಿಲುವು ಏನು ಅಂತ ಕೂಡ ಹೇಳುತ್ತಿಲ್ಲ ಎಂದು ಆರೋಪಿಸಿದರು.
ನಾವು ಮುಂದಿನ ವಿಚಾರಣೆವರೆಗೆ ಮಾತ್ರ ಅಂತ ಸ್ಪಷ್ಟವಾಗಿ ಹೇಳಿದ್ದೇವೆ. ಇವರು ಓಲೈಕೆ ರಾಜಕಾರಣ ಮಾಡಲು ಪಂಚಮಸಾಲಿ ಸಮುದಾಯದ ನ್ಯಾಯಯುತ ಬೇಡಿಕೆಗೆ ಅನ್ಯಾಯ ಮಾಡುತ್ತಿದೆ.

ಇದನ್ನು ಪ್ರತಿಪಕ್ಷಗಳು ಈಗಾಗಲೇ ಹೇಳಿವೆ. ಮುಖ್ಯಮಂತ್ರಿಗಳು ನಾವು ಸಲ್ಲಿಸಿದ್ದ ಅಫಿಡವಿಟನ್ನು ಪೂರ್ಣಪ್ರಮಾಣದಲ್ಲಿ ಸರಿಯಾದ ಅರ್ಥದಲ್ಲಿ ಓದಿದರೆ ಬಹಳ ಸ್ಪಷ್ಟವಾಗುತ್ತದೆ. ದಾರಿ ತಪ್ಪಿಸುವ ಕೆಲಸ ಆಗಬಾರದು ಎಂದು ಹೇಳಿದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]