SM Krishna ವಿಧಿವಶ: ದೊಡ್ಡಬಳ್ಳಾಪುರದಲ್ಲಿ ಜಕ್ಕಲಮೊಡಗು ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ್ದ ಮಾಜಿ ಸಿಎಂ

ದೊಡ್ಡಬಳ್ಳಾಪುರ: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ (SM Krishna) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಕೃಷ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಐಸಿಯುಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

ಸದಾಶಿವನಗರದಲ್ಲಿರುವ ನಿವಾಸದಲ್ಲಿ ಎಸ್‌ಎಂ ಕೃಷ್ಷ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

60 ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ವಿಧಾನಸಭೆ, ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸ್ಪೀಕರ್, ಮತ್ತು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಎಸ್​ಎಂ ಕೃಷ್ಣ ಅವರು ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004ರವರೆಗೆ ಕರ್ನಾಟಕದ 16 ನೇ ಸಿಎಂ ಆಗಿದ್ದರು. ಈ ಸಂದರ್ಭದಲ್ಲಿ (2004) ದೊಡ್ಡಬಳ್ಳಾಪುರ ನಗರಕ್ಕೆ ಕುಡಿಯುವ ನೀರನ್ನು ಪೂರೈಸುವ ಜಕ್ಕಲಮೊಡಗು ಕುಡಿಯುವ ನೀರಿನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು, ಅಲ್ಲದೆ ನಗರದ ಬಸ್ ನಿಲ್ದಾಣದ ಬಳಿಯ ಡಾ.ಅಂಬೇಡ್ಕರ್ ಪುತ್ಥಳಿಯನ್ನು ಎಸ್‌ಎಂ ಕೃಷ್ಣ ಉದ್ಘಾಟನೆ ಮಾಡಿದ್ದರು.

ಈ ಸಂದರ್ಭದಲ್ಲಿ ಶಾಸಕರಾಗಿ ವಿ ಕೃಷ್ಣಪ್ಪ, ಸಂಸದರಾಗಿ ಜಾಲಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಿಎಂ ಸಿದ್ದರಾಮಯ್ಯ ಸಂತಾಪ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಪಾ ಸೂಚಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು.
ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.

ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ.

ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ ಎಂದಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ ಸಂತಾಪ: ರಾಜ್ಯದ ವಿಧಾನಸಭಾಧ್ಯಕ್ಷರು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ದಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಬಹಳ ದುಃಖ ಉಂಟು ಮಾಡಿದೆ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ರಾಜ್ಯದ ಜನತೆಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಸಂತಾಪ; ಧೀಮಂತ ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಶ್ರೀ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ಒಬ್ಬ ಹಿರಿಯಣ್ಣನನ್ನು ಕಳೆದುಕೊಂಡ ನೋವು ನನಗಾಗಿದೆ ಎಂದು ಮಾಜಿ‌ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಸಂತಾಪ ಸೂಚಿಸಿ ಟ್ವಿಟ್ ಮಾಡಿರುವ ಅವರು, ಶ್ರೀ ಎಸ್.ಎಂ.ಕೃಷ್ಣ ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಾ, ಅಗಲಿದ ಆ ಹಿರಿಯ ಚೇತನಕ್ಕೆ ದೇವರು ಉತ್ತಮ ಸದ್ಗತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು, ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ 🙏

ಡಾ.ಕೆ.ಸುಧಾಕರ್‌ ಸಂತಾಪ: ನನ್ನ ರಾಜಕೀಯ ಗುರುಗಳು, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಎಸ್.ಎಂ.ಕೃಷ್ಣ ಅವರ ಇನ್ನಿಲ್ಲ ಎನ್ನುವ ಸುದ್ದಿ ತಿಳಿದು ತೀವ್ರ ದುಃಖಿತನಾಗಿದ್ದೇನೆ ಎಂದು ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಈ ಕುರಿತು ಸಂತಾಪ ಸೂಚಿಸಿ ಟ್ವಿಟ್ ಮಾಡಿದ್ದು, ಕರ್ನಾಟಕದ ಮತ್ತು ಬೆಂಗಳೂರಿನ ಅಭಿವೃದ್ಧಿಯಲ್ಲಿ ಅವರ ಪಾತ್ರ ಬಹಳ ದೊಡ್ಡದು. ಅವರು ಇನ್ನಷ್ಟು ಕಾಲ ಮಾರ್ಗದರ್ಶಕರಾಗಿ ನಮ್ಮ ಜೊತೆ ಇರಬೇಕಿತ್ತು.

ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ನೋವಿನಲ್ಲಿ ನಾನೂ ಕೂಡ ಭಾಗಿ ಎಂದಿದ್ದಾರೆ.

ನಿಖಿಲ್ ಸಂತಾಪ: ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ವಿದೇಶಾಂಗ ಸಚಿವರು ಹಾಗೂ ಕರ್ನಾಟಕ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಹಿರಿಯರು, ಮುತ್ಸದ್ದಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಬಹಳ ನೋವುಂಟಾಯಿತು ಎಂದು ಯುವ ಜನತಾ ದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.

ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಅಭಿಮಾನಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!