ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (SM Krishna) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ವಯೋಸಹಜ ಅನಾರೋಗ್ಯದ ಕಾರಣ ಅವರನ್ನು ಅಕ್ಟೋಬರ್ 19ರಂದು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರೇಮಾ ಅವರನ್ನು ವಿವಾಹವಾಗಿದ್ದ ಎಸ್ಎಂ ಕೃಷ್ಣಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ವಯೋಸಹಜ ಅನಾರೋಗ್ಯ ಮತ್ತು ಇತರ ಕಾರಣಗಳಿಂದಾಗಿ 2023 ರ ಜನವರಿ 7 ರಂದು ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದರು.