SM ಕೃಷ್ಣ ಆಗಲಿಕೆಯಿಂದ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ: ಬಸವರಾಜ ಬೊಮ್ಮಾಯಿ| SM Krishna

ಬೆಂಗಳೂರು: ಕರ್ನಾಟಕ ಕಂಡಂತಹ ಅತ್ಯಂತ ಧೀಮಂತ, ಹಿರಿಯ ರಾಜಕಾರಣಿ, ಸ್ವಾತಂತ್ರ್ಯ ಪೂರ್ವದ ತಲೆಮಾರು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಡಳಿತಾತ್ಮಕ ಅನೇಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಎಸ್.ಎಂ.ಕೃಷ್ಣ (SM Krishna) ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖ ಹಾಗೂ ದಿಗ್ಧಮೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಎಸ್.ಎಂ.ಕೃಷ್ಣ ಅವರ ಅಗಲಿಕೆಯಿಂದ ದೇಶ ಒಬ್ಬ ಹಿರಿಯರು, ಮಾರ್ಗದರ್ಶಕರನ್ನು ಕಳೆದುಕೊಂಡು ಬಡವಂತಾಗಿದೆ. ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪರಿಶುದ್ಧವಾದ ಬದುಕು ನಡೆಸಿ, ಆದರ್ಶ ಮಯ ಜೀವನ ನಡೆಸಿ, ಇಡೀ ಭಾರತಕ್ಕೆ ಪ್ರಿಯರಾಗಿರುವಂತಹವರು.

ಎಸ್.ಎಂ ಕೃಷ್ಣ, ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದ ನಂತರ ತಮ್ಮ ಸೊಸಿಯಲಿಸ್ ಮನೋಭಾವನೆ ಬಿಟ್ಟುಕೊಡದೇ ಪಥಮ ಬಾರಿಗೆ ಸ್ವತಂತವಾಗಿ ಸ್ಪರ್ಧೆ ಮಾಡಿ ಗೆದ್ದು ಬಂದಿದ್ದರು.

ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ರಾಜ್ಯಸಭೆ ನಾಲ್ಕೂ ಸದನಗಳಲ್ಲಿ ಸೇವೆ ಮಾಡಿದ್ದಾರೆ. ರಾಜ್ಯದ ಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ದೇಶದ ಸೇವೆ ಹಾಗೂ ರಾಜ್ಯದ ಸೇವೆ ಮಾಡಿದ್ದಾರೆ.

ರಾಜಕಾರಣಿಗಳಿಗೆ ಆದರ್ಶವಾಗಿರುವ, ಆಡಳಿತಗಾರರಿಗೆ ಮಾರ್ಗದರ್ಶನವಾಗಿರುವ ಅವರ ಭಾಷೆ, ಮಿತವ್ಯಯದ ಮಾತು, ಅವರ ನಡವಳಿಗೆ ನಮ್ಮ ಯುವ ರಾಜಕಾರಣಿಗಳಿಗೆ ಅತ್ಯಂತ ಅವಶ್ಯವಿದೆ. ಅವರು ಕರ್ನಾಟಕದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

ಬೆಂಗಳೂರಿನ ಬೆಳವಣಿಗೆ, ಐಟಿ ಬಿಟಿ ವಿಚಾರದಲ್ಲಿ ಅವರು ನೀಡಿದ ಕೊಡುಗೆ ಅಪಾರ, ಅವರು ಜಾರಿಗೆ ತಂದಿರುವ ಮಿಡ್ ಡೆ ಮೀಲ್ ಯೋಜನೆ ಯಶಸ್ವಿಯಾಗಿದೆ. ಅವರು ರಾಜಕಾರಣದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ಕೂಡ ತಮ್ಮ ವ್ಯಕ್ತಿತ್ವವನ್ನು ಬಿಟ್ಟುಕೊಡದೇ ಅತ್ಯಂತ ಸ್ವಾಭಿಮಾನದ ಬದುಕು ನಡೆಸಿದರು.

ಅವರು ಬಿಜೆಪಿ ಸೇರಿ ನಮ್ಮ ಪಧಾನ ಮಂತ್ರಿಗಳಿಗೆ ಅತ್ಯಂತ ಹತ್ತಿರದ ನಾಯಕರಾಗಿದ್ದರು. ಹಿಂದಿನ ಪೀಳಿಗೆಯ ಮಹತ್ವದ ಘಟ್ಟ ಕಳೆದುಕೊಂಡಂತಾಗಿದೆ. ಬರುವಂತಹ ದಿನಗಳಲ್ಲಿ ಅವರ ಬದುಕು ನಮಗೆ ಆದರ್ಶವಾಗಲಿ, ಎಸ್.ಎಂ.ಕೃಷ್ಣ ಅವರು ನನಗೆ ವಯಕ್ತಿಕವಾಗಿ ಅತ್ಯಂತ ಹತ್ತಿರವಾಗಿದ್ದ ನಾಯಕರು, ನಮ್ಮ ತಂದೆಯ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದ ನಾಯಕರಾಗಿದ್ದರು.

ಕೃಷ್ಣ ಅವರ ಅಗಲಿಗೆ ನನಗೆ ಬಹಳ ನೋವು ತಂದಿದೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!