ದೊಡ್ಡಬಳ್ಳಾಪುರ: ನಿನ್ನೆ ನಿಧನರಾದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ವಿದೇಶಾಂಗ ಸಚಿವರಾದ ಎಸ್ಎಂ ಕೃಷ್ಣ (SM Krishna) ಅವರಿಗೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಕನ್ನಡ ಜಾಗೃತ ಭವನದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ
ಕಾರ್ಯಕ್ರಮದಲ್ಲಿ ಎಸ್‌ಎಂ ಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಬಿಎಸ್ ಚಂದ್ರಶೇಖರ್, ನಮ್ಮ ರಾಜ್ಯ ಕಂಡ ಅಪರೂಪದ ರಾಜಕಾರಣೀಯಾಗಿದ್ದ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತೆಗೆದುಕೊಂಡಿರುವ ನಿರ್ಧಾರಗಳು ಹಾಗೂ ಯೋಜನೆಗಳು ರಾಜ್ಯದ ಅಭಿವೃದ್ಧಿಯಲ್ಲಿ ಶಾಶ್ವತವಾಗಿ ಉಳಿದಿವೆ.
ಐಟಿ ಕ್ಷೇತ್ರದಲ್ಲಿ ಬೆಂಗಳೂರು ವಿಶ್ವ ಭೂಪಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ ಕೀರ್ತಿ ಎಸ್.ಎಂ.ಕೃಷ್ಣ ಅವರಿಗೆ ಸಲ್ಲುತ್ತದೆ.
ಮುತ್ಸದ್ದಿ ರಾಜಕಾರಣಿ ಜಾಲಪ್ಪ ಅವರ ದೂರದೃಷ್ಠಿಯ ನಗರಕ್ಕೆ ಶಾಶ್ವತ ಕುಡಿಯುವ ನೀರಿನ ಜಕ್ಕಲಮೊಡಗು ಯೋಜನೆಗೆ ಮಂಜೂರಾತಿ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದರು. ಇದರಿಂದ ನಗರದ ಜನರ ಕುಡಿಯುವ ನೀರಿನ ಭವಣೆ ನೀಗಿದೆ ಎಂದು ಸ್ಮರಿಸಿದರು.
ಈ ವೇಳೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಯ ಆರ್ ರಮೇಶ್, ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ, ಪ್ರೋ.ಕೆಆರ್ ರವಿಕಿರಣ್, ಸದಸ್ಯರಾದ ಅಂಬರೀಶ್, ಶಿವಣ್ಣ, ವಿನಯ್ ಕುಮಾರ್, ನರೇಂದ್ರ, ಉದಯಕುಮಾರ್ ಮತ್ತಿತರರಿದ್ದರು.