ಸದನಕ್ಕೆ ಅಡ್ಡಿ: ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದ ಹೆಚ್.ಡಿ.ದೇವೇಗೌಡ| Video ನೋಡಿ| HD Deve Gowda

ನವದೆಹಲಿ; ರಾಜ್ಯಸಭೆ ಸಭಾಪತಿಗಳಾದ ಜಗದೀಪ್ ಧನಕರ್ ಅವರ ವಿರುದ್ಧ ಕಾಂಗ್ರೆಸ್ ಮೈತ್ರಿಕೂಟದ ಸದಸ್ಯರು ಅವಿಶ್ವಾಸ ಗೊತ್ತುವಳಿ ಮಂಡಿಸಲು ನೀಡಿರುವ ನೋಟಿಸ್ ವಿರುದ್ಧ ಹರಿಹಾಯ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು (HD Deve Gowda), ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ದೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸಭೆಯಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದ ಸದಸ್ಯರ ವರ್ತನೆಯನ್ನು ಉಗ್ರವಾಗಿ ಖಂಡಿಸಿದ ಮಾಜಿ ಪ್ರಧಾನಿಗಳು; ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ದೂಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಭಾಪತಿ ಜಗದೀಪ್ ಧನಕರ್ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಸಂಸದರ ನಡವಳಿಕೆಯನ್ನು ಕಟುವಾಗಿ ಟೀಕಿಸಿದ ಮಾಜಿ ಪ್ರಧಾನಿಗಳು; ಸಭಾಪತಿಗಳು ಸದನವನ್ನು ಅತ್ಯುತ್ತಮವಾಗಿ ಮುನ್ನಡೆಸುತ್ತಿದ್ದಾರೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಶೈಲಿಯನ್ನು ಸಮರ್ಥಿಸಿಕೊಂಡರು,

ಸಂಸತ್ತಿನ ಘನತೆಯನ್ನು ಎತ್ತಿಹಿಡಿಯಬೇಕು ಮತ್ತು ಕಲಾಪಕ್ಕೆ ಅಡ್ಡಿಪಡಿಸುವುದನ್ನು ನಿಲ್ಲಿಸಬೇಕು ಎಂದು ಪ್ರತಿಪಕ್ಷಗಳನ್ನು ಮಾಜಿ ಪ್ರಧಾನಿಗಳು ಒತ್ತಾಯಿಸಿದರು.

ರಾಜ್ಯಸಭೆಯ ಸಭಾಪತಿಗಳ ವಿರುದ್ಧ ಇಂತಹ ನಿರ್ಣಯವನ್ನು ಮಂಡಿಸಲು ಹೊರಟಿರುವುದು ಇತಿಹಾಸದಲ್ಲಿ ಇದೇ ಮೊದಲು. ಇದು ಒಳ್ಳೆಯ ಸಂಪ್ರದಾಯ ಅಲ್ಲ. ಇದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಮಾಜಿ ಪ್ರಧಾನಿಗಳು ಎಚ್ಚರಿಕೆ ನೀಡಿದರು.

ಸದನದ ಕಾರ್ಯವೈಖರಿಯನ್ನು ಹಾಳು ಮಾಡುವ ಉದ್ದೇಶದಿಂದಲೇ ಕಾಂಗ್ರೆಸ್‌ನ ಕೆಲವು ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ದೇವೇಗೌಡರು; ಇಲ್ಲಿರುವ ಕೆಲ ಸದಸ್ಯರು ಈ ಸದನಧ ಕಲಾಪ ಸುಗಮವಾಗಿ ನಡೆಯಲು ಅಡ್ಡಿ ಮಾಡುತ್ತಿದ್ದಾರೆ. ಕೇವಲ ರಾಜಕೀಯ ಹಿತಾಸಕ್ತಿಗಾಗಿ ಗದ್ದಲ ಸೃಷ್ಟಿಸುತ್ತಿದ್ದಾರೆ ಎಂದು ಅವರು ದೂರಿದರು.

ಮೊದಲ ಕಾಂಗ್ರೆಸ್ ಸದಸ್ಯರು ಇಂತಹ ಕೆಟ್ಟ ಸಂಪ್ರದಾಯವನ್ನು ಆರಂಭ ಮಾಡಿದ್ದಾರೆ. ಇದು ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಲಿದೆ. ನಾವು ಇದನ್ನು ಸಹಿಸುವುದಿಲ್ಲ ಹಾಗೂ ಇದಕ್ಕೆ ಅವಕಾಶವನ್ನು ಕೊಡಬಾರದು ಎಂದು ಅವರು ದೃಢ ಮಾತುಗಳಲ್ಲಿ ಹೇಳಿದರು.

ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೇರ ಮನವಿ ಮಾಡಿದ ಮಾಜಿ ಪ್ರಧಾನಿಗಳು; ನಿಮ್ಮ ಸದಸ್ಯರು ಸದನದ ಗೌರವ ಹಾಳು ಮಾಡುತ್ತಿದ್ದಾರೆ. ಅವರನ್ನು ತಡೆಯುವ ಜವಾಬ್ದಾರಿ ನಿಮ್ಮದು. ಸಂಸದೀಯ ಸೌಹಾರ್ದತೆಯನ್ನು ಎತ್ತಿಹಿಡಿಯುವುದು ನಿಮ್ಮ ಮತ್ತು ನಿಮ್ಮ ಪಕ್ಷದ ಹೊಣೆಗಾರಿಕೆ ಆಗಿದೆ ಎಂದು ಒತ್ತಾಯ ಮಾಡಿದರು ಹಾಗೂ “ನಾನು, ನನ್ನ ಸ್ನೇಹಿತ ಖರ್ಗೆ ಅವರಿಗೆ ಹೇಳಲು ಬಯಸುತ್ತೇನೆ. ಅವರು ತಮ್ಮ ಸಹೋದ್ಯೋಗಿಗಳು ಈ ರೀತಿ ವರ್ತಿಸಲು ಬಿಡಬಾರದು. ಸದನ ಕಾರ್ಯ ನಿರ್ವಹಿಸಲು ಅವಕಾಶ ನೀಡುವಂತೆ ಪ್ರಾಮಾಣಿಕವಾಗಿ ವಿನಂತಿಸುತ್ತೇನೆ” ಎಂದು ದೇವೇಗೌಡ ಹೇಳಿದರು.

ಪ್ರತಿಪಕ್ಷಗಳ ಸದಸ್ಯರ ನಡವಳಿಕೆ ಪ್ರಧಾನಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಎರಡಕ್ಕೂ ಮಾಡಿದ ಅವಮಾನ ಎಂದು ಬಣ್ಣಿಸಿದ ಮಾಜಿ ಪ್ರಧಾನಿಗಳು; ಸದಸ್ಯರು ಪ್ರಧಾನಿಯನ್ನು ಅವಮಾನಿಸುತ್ತಿದ್ದಾರೆ, ಆ ಭರದಲ್ಲಿ ಮಾತ್ರವಲ್ಲದೆ ಪ್ರಜಾಪ್ರಭುತ್ವವನ್ನು ಕೂಡ ಅವಮಾನಿಸುತ್ತಿದ್ದಾರೆ. ಈ ನಡವಳಿಕೆಯನ್ನು ಸಹಿಸಲಾಗುವುದಿಲ್ಲ. ಈ ಬಗ್ಗೆ ನನಗೆ ಬಹಳ ನಿರಾಶೆ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು

ರಾಜ್ಯಸಭೆಯಲ್ಲಿ ಪರಸ್ಪರ ಗೌರವ ಮತ್ತು ಸುಗಮ ಕಲಾಪದ ಅಗತ್ಯವನ್ನು ಒತ್ತಿ ಹೇಳಿದ ಮಾಜಿ ಪ್ರಧಾನಿಗಳು; ತಮ್ಮ ಭಾಷಣದಲ್ಲಿ ಸಭಾಪತಿ ಧನಕರ್ ಅವರ ನಿಷ್ಪಕ್ಷಪಾತತೆಯನ್ನು ಪ್ರಸ್ತಾಪಿಸಿ ಕಲಾಪವನ್ನು ಉತ್ತಮವಾಗಿ ನಡೆಸುವ ಅವರ ಭದ್ಧತೆಯನ್ನು ಶ್ಲಾಘಿಸಿದರು.

“ನೀವು ಪಕ್ಷಪಾತಿಯಲ್ಲ, ನೀವು ನಿಷ್ಪಕ್ಷಪಾತಿ. ಅವರು ಈ ಸದನದಲ್ಲಿ ಈ ರೀತಿ ವರ್ತಿಸಬಾರದು. ಕೆಲವು ಸದಸ್ಯರು ನಿಮ್ಮನ್ನು ಅವಮಾನಿಸಲು ಉದ್ದೆಗೈಸಿದ್ದಾರೆ” ಎಂದು ಅವರು ಪೀಠವನ್ನು ಉದ್ದೇಶಿಸಿ ಹೇಳಿದರು.

ಕಾಂಗ್ರೆಸ್ ಸಂಸದರಿಗೆ ಎಚ್ಚರಿಕೆ ನೀಡಿದ ಅವರು, ಕಲಾಪಕ್ಕೆ ಅಡ್ಡಿಪಡಿಸುವುದನ್ನು ಕೂಡಲೇ ನಿಲ್ಲಿಸುವಂತೆ ಕಾಂಗ್ರೆಸ್ ಸದಸ್ಯರನ್ನು ಒತ್ತಾಯಿಸಿದರು. “ಸದನದ ಕಲಾಪ ನಿರಾತಂಕವಾಗಿ ನಡೆಯಬೇಕು. ಕೆಲ ಸದಸ್ಯರು ಇಡೀ ವ್ಯವಸ್ಥೆಯನ್ನೇ ಅಪಹಾಸ್ಯ ಮಾಡುತ್ತಿದ್ದಾರೆ. ಅವರು ಎಷ್ಟು ದಿನ ಇದನ್ನು ಮಾಡುತ್ತಾರೆ?” ಎಂದು ಕಿಡಿಕಾರಿದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!