ದೊಡ್ಡಬಳ್ಳಾಪುರ (Doddaballapura): ಹುಣಸೆ ವ್ಯಾಪಾರಿಗಳ ಸೋಗಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ವೃದ್ಧೆಯ ಮಾಂಗಲ್ಯ ಸರ ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಕೆಸ್ತೂರು ಸಮೀಪ ಬಳಿ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ವರದಿಯಾಗಿದೆ.
63 ವರ್ಷದ ಸರಸ್ವತಮ್ಮ ಮಾಂಗಲ್ಯ ಸರ ಕಳೆದುಕೊಂಡ ವೃದ್ಧೆಯಾಗಿದ್ದು, ಹಸು ಮೇಸಲು ತೆರಳಿದ್ದ ವೇಳೆ, ಹುಣಸೆ ಮರ ವ್ಯಾಪಾರಿಗಳು ಎಂಬಂತೆ ಬಂದ ಅಪರಿಚಿತ ಇಬ್ಬರು ದುಷ್ಕರ್ಮಿಗಳು, ವೃದ್ಧೆಯ ಮಾತಿಗೆಳೆದು, ಆಕೆಯ ಕುತ್ತಿಗೆಯಲ್ಲಿದ್ದ ಸುಮಾರು 52 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆಂದು ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ತಿಳಿಸಿದ್ದಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.