ವಿಜಯೇಂದ್ರಗೆ ತಿರುಗುಬಾಣವಾದ ವಕ್ಫ್ ವಿವಾದ..!: CBI ತನಿಖೆಗೆ ಸಿಎಂ‌ ಆಗ್ರಹ

ಬೆಂಗಳೂರು: ವಕ್ಫ್ ಆಸ್ತಿ ವಿವಾದ ಕುರಿತು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದ್ದ ಬಿಜೆಪಿಗೆ ಶಾಕ್ ಎದುರಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧವೇ CBI ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ‌.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ, ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ. ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿದ್ದಾರೆ‌.

‘’ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ’’ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು.

‘’ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ..?

ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ.

ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ.

ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ.

ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ.

ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ತಿರುಗೇಟು ನೀಡಿದ್ದಾರೆ‌.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!