ದೊಡ್ಡಬಳ್ಳಾಪುರ: ಜೆಡಿಎಸ್ (JDS)ಹಿರಿಯ ಮುಖಂಡ, ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಹಾಡೋನಹಳ್ಳಿ ಅಪ್ಪಯ್ಯಣ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ಮೃತರು ಇಬ್ಬರು ಹೆಣ್ಣು, ಓರ್ವ ಗಂಡು ಮಗನನ್ನು ಅಗಲಿದ್ದಾರೆ.
ಅಪ್ಯಯ್ಯಣ್ಣ ಅವರು ಹಾಡೋನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ, ಬೆಂಗಳೂರು ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಅಪ್ಪಯ್ಯಣ್ಣ ಅಗಲಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಹಿರಿಯ ಮುಖಂಡ ಹರೀಶ್ ಗೌಡ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಜೆಡಿಎಸ್ ಯೂತ್ ಜಿಲ್ಲಾ ಅಧ್ಯಕ್ಷ ಸುನಿಲ್ ಕುಮಾರ್, ವಕ್ತಾರ ಕುಂಟನಹಳ್ಳಿ ಮಂಜುನಾಥ್ ಸಂತಾಪ ಸೂಚಿಸಿದ್ದಾರೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)