ನಿದ್ರೆಯಲ್ಲೇ ಇಹಲೋಕ ತ್ಯಜಿಸಿದ ಹೆಚ್.ಅಪ್ಪಯ್ಯಣ್ಣ..!; ಇಂದು ಅಂತ್ಯಕ್ರಿಯೆ.. ಗಣ್ಯರ ಸಂತಾಪ| JDS

ದೊಡ್ಡಬಳ್ಳಾಪುರ: ತಾಲೂಕಿನ ರಾಜಕೀಯ ಮುತ್ಸದ್ದಿ, JDS ಹಿರಿಯ ಮುಖಂಡರಾದ ಹೆಚ್.ಅಪ್ಪಯ್ಯಣ್ಣ ಅವರು ನಿದ್ರೆಯಲ್ಲಿಯೇ ಇಹಲೋಕವನ್ನು ತ್ಯಜಿಸಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಶುಕ್ರವಾರ ರಾತ್ರಿ ಊಟದ ನಂತರ ಮೇಲಿನ ಕೋಣೆಯಲ್ಲಿ ಮಲಗಿದ ಅವರು, ನಿದ್ರೆಯಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ರೂಮಿಗೆ ತೆರಳಿ ನೋಡಿದಾಗ ಅಪ್ಪಯ್ಯಣ್ಣ ನಿಧನರಾಗಿರುವುದು ಬೆಳಕಿಗೆ ಬಂದಿದೆ‌.

ಮೃತರ ಅಂತ್ಯಕ್ರಿಯೆ ಇಂದು (ಶನಿವಾರ) ಮಧ್ಯಾಹ್ನ 3ಗಂಟೆಗೆ ಹಾಡೋನಹಳ್ಳಿಯ ಸ್ವಂತ ಜಮೀನಿನ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಗರಸಭೆ ಉಪಾಧ್ಯಕ್ಷ ಮಲ್ಲೇಶ್ ಸಂತಾಪ

ಹಿಂದುಳಿದ ವರ್ಗಗಳಿಗೆ ಅವಕಾಶ ನೀಡಿ, ಯುವ ಸಮುದಾಯಕ್ಕೆ ಮಾರ್ಗದರ್ಶಿಯಾಗಿದ್ದ ಅಪ್ಪಯ್ಯಣ್ಣ ಅವರು ಇನ್ನಿಲ್ಲ ಎಂಬುದನ್ನು ಅರಿಗಿಸಿಕೊಳ್ಳಲಾಗುತ್ತಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುವುದಾಗಿ ನಗರಸಭೆ ಉಪಾಧ್ಯಕ್ಷ ಮಲ್ಲೇಶ್ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೂರು ಬೈರೇಗೌಡ ಸಂತಾಪ

ಸ್ನೇಹ ಜೀವಿ, ಸಜ್ಜನ, ಅಜಾತಶತ್ರುವಾಗಿ ಅಪ್ಪಯ್ಯಣ್ಣ ಅಗಲಿಕೆ ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕಿಗೆ ತುಂಬಲಾರದ ನಷ್ಟವಾಗಿದೆ. ಹಿರಿಯ ರಾಜಕೀಯ ಮುತ್ಸದ್ದಿಯಾಗಿ ಅನೇಕರಿಗೆ ಮಾರ್ಗದರ್ಶನ ನೀಡಿದ್ದ ಅವರ ಅಗಲಿಕೆ ಮನಸ್ಸಿಗೆ ನೋವನ್ನು ತಂದಿದೆ ಎಂದು ಕಾಂಗ್ರೆಸ್ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ ತಿಳಿಸಿದ್ದಾರೆ.

ತೆಂಗು ನಾರು ಮಂಡಳಿ ರಾಜ್ಯಾಧ್ಯಕ್ಷ ಗಂಟಿಗಾನಹಳ್ಳಿ ಬಾಬು ಸಂತಾಪ

ರಾಜಕೀಯ ಗುರುಗಳು, ಆತ್ಮೀಯ ಒಡನಾಡಿಯಾಗಿದ್ದ ಅಪ್ಪಯ್ಯಣ್ಣ ಅವರ ಅಗಲಿಕೆಯ ನೋವನ್ನು ತಡೆಯಲಾಗುತ್ತಿಲ್ಲ. ಅಪ್ಪಯ್ಯಣ್ಣರ ಅಗಲಿಕೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಿರಿಯ ರಾಜಕೀಯ ಮುತ್ಸದ್ದಿಯನ್ನು ಕಳೆದುಕೊಂಡಂತಾಗಿದೆ ಎಂದು ತೆಂಗು ನಾರು ಮಂಡಳಿ ರಾಜ್ಯಾಧ್ಯಕ್ಷ ಗಂಟಿಗಾನಹಳ್ಳಿ ಬಾಬು ತಿಳಿಸಿದ್ದಾರೆ.

ನಗರಸಭೆ ಸದಸ್ಯ ವಡ್ಡರಹಳ್ಳಿ ರವಿಕುಮಾರ್ ಸಂತಾಪ

ಜೆಡಿಎಸ್ ಪಕ್ಷದ ಹಿರಿಯ ಮುತ್ಸದ್ದಿ ರಾಜಕಾರಣಿ ಅಪ್ಪಯ್ಯಣ್ಣ ಅವರ ಅಗಲಿಕೆ ದಿಗ್ಭ್ರಮೆಯನ್ನು ತಂದಿದೆ ಎಂದು ನಗರಸಭೆ ವಡ್ಡರಹಳ್ಳಿ ರವಿಕುಮಾರ್ ತಿಳಿಸಿದ್ದಾರೆ.

ರಾತ್ರಿ ಮಲಗಿದವರು ಇಂದು ನಮ್ಮೊಂದಿಗಿಲ್ಲ ಎಂಬುದು ನಂಬಲಾಗುತ್ತಿಲ್ಲ. ಅವರ ಅಗಲಿಕೆಗೆ ಪಕ್ಷಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ. ಅವರ ಸಮಾಜಮುಖಿ ಕಾರ್ಯ ಮುಂದಿಗೂ ಅವರನ್ನು ಜನಮಾನಸದಲ್ಲಿ ಉಳಿಸಲಿದೆ ಎಂದು ರವಿಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

ರಾಜಕೀಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊನೆ ಉಸಿರಿರುವವರೆಗೂ ರಾಜ್ಯದ ಸೇವೆ ಮಾಡುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="118625"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಇಂಡೋಮಿಮ್ ಉದ್ಯೋಗಿ ಆತ್ಮಹತ್ಯೆ..!

ರೈಲಿಗೆ ಸಿಲುಕಿ ಇಂಡೋಮಿಮ್ (Indomim) ಕಂಪನಿಯ ಉದ್ಯೋಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ಶ್ರೀರಾಮನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="118633"]
ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಅಪಘಾತ: ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ತಾಯಿ, ಮಗು ದುರ್ಮರಣ..!

ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದ ವಿವೇಕನಗರ ಮುಖ್ಯ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.

[ccc_my_favorite_select_button post_id="118614"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!