ಜನಪ್ರಿಯ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರಿಗೆ ದೊಡ್ಡಬಳ್ಳಾಪುರದಲ್ಲಿ ಅಂತಿಮ ನಮನ| j narasimha swamy

ದೊಡ್ಡಬಳ್ಳಾಪುರ: ತಾಲ್ಲೂಕಿನ ಹಿರಿಯ ರಾಜಕಾರಣಿ ದಿವಂಗತ ಆರ್.ಎಲ್.ಜಾಲಪ್ಪ ಅವರ ಹಿರಿಯ ಪುತ್ರ ಮಾಜಿ ಶಾಸಕ ಜೆ.ನರಸಿಂಹಸ್ವಾಮಿ (j narasimha swamy) ಭಾನುವಾರ ಬೆಳಿಗ್ಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಕಾರಣ ಚಿಕಿತ್ಸೆಗೆ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ

ಇಂದು ನಗರಕ್ಕೆ ಬಂದ ಜೆ.ನರಸಿಂಹಸ್ವಾಮಿ (j narasimha swamy) ಅವರ ಪಾರ್ಥಿವ ಶರೀರವನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ಸಾರ್ವಜನಿಕರ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ರೈಲ್ವೇ ಸ್ಟೇಷನ್ ಬಳಿ ಅಂತಿಮ ನಮನಕ್ಕೆ ಅವಕಾಶ ಕಲ್ಲಿಸಿ ನಂತರ ಡಿ ಕ್ರಾಸ್, ಗಾಂಧಿ ವೃತ್ತ, ಡಾ.ರಾಜ್ ಕುಮಾರ್ ವೃತ್ತ, ಬಸ್ ನಿಲ್ದಾಣ, ಸೌಂದರ್ಯ ಮಹಲ್ ಚಿತ್ರಮಂದಿರ, ಚೌಕ ವೃತ್ತ, ತಾಲೂಕು ಕಚೇರಿ ವೃತ್ತ, ಒಕ್ಕಲಿಗರ ಸಮುದಾಯ ಭವನ, ಜಿ.ರಾಮೇಗೌಡ ವೃತ್ತ ಬಳಿ ಟಿಬಿ ವೃತ್ತದ ಬಳಿಯಿರುವ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ಸಮಯ ಅಂತಿಮ ನಮನಕ್ಕೆ ಅವಕಾಶ ನೀಡಲಾಯಿತು.

ನರಸಿಂಹಸ್ವಾಮಿ ಅವರ ಅಭಿಮಾನಿಗಳು, ಬೆಂಬಲಿಗರು ದ್ವಿಚಕ್ರ ವಾಹನಗಲ್ಲಿ ಸಾಥ್ ನೀಡಿದರು.

ಈ ವೇಳೆ ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪುಷ್ಪ ಹಾರವನ್ನು ಅರ್ಪಿಸಿ ತಾಲೂಕಿನ ಜನಪ್ರಿಯ ಮಾಜಿ ಶಾಸಕರಿಗೆ ಅಂತಿಮ ನಮನ ಸಲ್ಲಿಸಿದರು.

ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಅವರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ,ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಶಾಸಕರಾಗಿ ಹಾಗೂ ರಾಜ್ಯ ಕೊಳಚೆ ನಿರ್ಮೂಲನ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

2008 ರಲ್ಲಿ ಅಪರೇಷನ್ ಕಮಲದಿಂದ ಬಿಜೆಪಿಗೆ ಸೇರ್ಪಡೆಗೊಂಡು ಉಪಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ರಾಜ್ಯ ಕೊಳಚೆ ನಿರ್ಮೂಲನ ಮಂಡಳಿಯ ಅಧ್ಯಕ್ಷರಾಗಿದ್ದರು.

2013 ಹಾಗೂ 2018ರಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಸೋಲುಕಂಡಿದ್ದರು.
ಮೃತರಿಗೆ ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ.

ತೂಬಗೆರೆ ಸ್ವಗೃಹದ ಬಳಿ ಅಂತಿಮ ನಮನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಇಂದು ಸಂಜೆ ನಾಲ್ಕು ಗಂಟೆಯ ಬಳಿಕ ತೂಬಗೆರೆಯ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಾಜಿ ಶಾಸಕ‌ ಜೆ.ನರಸಿಂಹಸ್ವಾಮಿ ನಿಧನಕ್ಕೆ ದೊಡ್ಡಬಳ್ಳಾಪುರ ತಾಲ್ಲೂಕು  ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ಸೂಚಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಿದ್ದ ಜೆ.ನರಸಿಂಹಸ್ವಾಮಿ  ತಮ್ಮ ಪತ್ನಿ ಗಂಗಮ್ಮ ಅವರ ಹೆಸರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ದತ್ತಿ ನಿಧಿ‌ ನೀಡಿದ್ದಾರೆ.

ಶ್ರೀಮತಿ ಗಂಗಮ್ಮ ಜೆ.ನರಸಿಂಹಸ್ವಾಮಿ ದತ್ತಿ ಎಂಬ ಹೆಸರಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ‌ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾಹಿತ್ಯ ಕಾರ್ಯಕ್ರಮ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ನಡೆಯುತ್ತಿದ್ದ ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಸಹಕಾರ ಮತ್ತು ಪ್ರೋತ್ಸಾಹ ನೀಡಿದ್ದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡಪರ ಸಂಘಟನೆಗಳು ನಾಡು, ನುಡಿ, ಜಲ ಮುಂತಾದ ವಿಚಾರಗಳ ನಡೆಸುತ್ತಿದ್ದ ಸಭೆ, ಸಮಾರಂಭ ಮತ್ತು ಪ್ರತಿಭಟನಾ ಕಾರ್ಯಕ್ರಮಗಳಲ್ಲೂ ಜೆ.ನರಸಿಂಹಸ್ವಾಮಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ಮತ್ತು ಪದಾಧಿಕಾರಿಗಳು ಸ್ಮರಿಸಿದ್ದಾರೆ.

ಜೆ.ನರಸಿಂಹಸ್ವಾಮಿ ಅವರ ಅಗಲಿಕೆಗೆ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಆರ್‌ಜಿ ವೆಂಕಟಾಚಲಯ್ಯ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಹಿರಿಯ ಮುಖಂಡ ಹರೀಶ್ ಗೌಡ, ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ಹೆಚ್‌ಎಸ್ ಅಶ್ವಥ್ ನಾರಾಯಣ ಕುಮಾರ್, ನಗರಸಭೆ ಸದಸ್ಯ ಹೆಚ್.ಎಸ್.ಶಿವಶಂಕರ್, ಶಿವು, ಕರವೇ ರಾಜಘಟ್ಟ ರವಿ, ಬಿಎಸ್ ಚಂದ್ರಶೇಖರ್, ಹಮಾಮ್ ವೆಂಕಟೇಶ್, ಲಾವಣ್ಯ ನಾಗರಾಜ್, ರಾಮಕೃಷ್ಣಪ್ಪ, ಮುತ್ತಣ್ಣ, ಶಾಂತಿನಗರ ಪ್ರವೀಣ್, ಸೂಲುಕುಂಟೆ ಕದಿರೇಗೌಡ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!