ಇತಿಹಾಸ ಪ್ರಸಿದ್ಧ ಘಾಟಿ ದನಗಳ ಜಾತ್ರೆಗೆ ಭರಪೂರ ಸಿದ್ದತೆ| Video cattle fair

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವದ ಅಂಗವಾಗಿ ಭಾರಿ ದನಗಳ ಜಾತ್ರೆಗೆ (cattle fair) ಸಿದ್ದತೆ ನಡೆಯುತ್ತಿದ್ದು, ಡಿ.20ರಂದು ದನಗಳ ಜಾತ್ರೆ ಆರಂಭವಾಗಲಿದೆ.

ಜಾತ್ರೆಗೆ ಮಾರಾಟಕ್ಕೆ ಬರುವ ಹೋರಿಗಳಿಗೆ ಟೋಲ್ ಸುಂಕು ವಸೂಲಿಯಿಂದ ವಿನಾಯಿತಿ ನೀಡಬೇಕು ಎನ್ನುವ ಒತ್ತಾಯಗಳು ರೈತರಿಂದ ಕೇಳಿ ಬರುತ್ತಿವೆ.

ಪೆಂಡಾಲ್‍ಗಳು ಸಿದ್ದ: ರಾಸುಗಳನ್ನು ಆಕರ್ಷಣೀಯವಾಗಿಸಲು ಸಹಸ್ರಾರು ರೂ ಖರ್ಚು ಮಾಡಿ ಪೆಂಡಾಲ್‍ಗಳನ್ನು ಸಿದ್ದಡಿಸಲಾಗುತ್ತಿದೆ. ಪೆಂಡಾಲ್‍ಗಳ ಮುಂದೆ ಯಾವ ಊರಿನ ಹಗೂ ರಾಸುಗಳ ಮಾಲೀಕರ ವಿವರದ ಬೃಹತ್ ಪ್ಲೆಕ್ಸ್‍ಗಳನ್ನು ಸಹ ಹಾಕಲಾಗುತ್ತದೆ.

ಅಂತೆಯೇ ದನಗಳ ಜಾತ್ರೆಯಲ್ಲಿ ರೈತರು ಆಯಕಟ್ಟಿನ ಸ್ಥಳಗಳಲ್ಲಿ ತಾವು ಸಾಕಿರುವ ಹೋರಿಗಳನ್ನು ಕಟ್ಟಲು ಹೈಟೆಕ್ ಮಾದರಿಯಲ್ಲಿ ಪೆಂಡಾಲ್‍ಗಳ ನಿರ್ಮಾಣ ಪ್ರಾರಂಭಿಸಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾಗುತ್ತಿದ್ದಂತೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನಡೆಯುವ ಘಾಟಿಸುಬ್ರಹ್ಮಣ್ಯ ದನಗಳ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

ರಾಜ್ಯದ ಬಳ್ಳಾರಿ, ದಾವಣಗೆರೆ, ರಾಯಚೂರು, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ಹೊರ ರಾಜ್ಯಗಳಾದ ತಮಿಳುನಾಡಿನ ಸೇಲಂ, ಹೊಸೂರು. ಆಂಧ್ರಪ್ರದೇಶದ ಹಿಂದೂಪುರ,ಅನಂತಪುರ. ಮಹಾರಾಷ್ಟ್ರದ ಕೊಲ್ಲಾಪುರ,ಸಾಂಗ್ಲಿ ಸೇರಿದಂತೆ ವಿವಿಧ ಕಡೆಗಳಿಂದಲು ರೈತರು ಬರುತ್ತಾರೆ.

ವಿವಿಧೆಡೆಗಳಿಂದ ದನಗಳ ಜಾತ್ರೆಗೆ ಬರುವ ರೈತರಿಗೆ ದೇವಾಲಯ ಆಡಳಿತ ಮಂಡಳಿ ವತಿಯಿಂದ ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜಾತ್ರೆಯಲ್ಲಿ ಅಮೃತ ಮಹಲ್, ಹಳ್ಳಿಕಾರ್ ಸೇರಿದಂತೆ ಸ್ಥಳೀಯ ನಾಟಿ ಹೋರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಕ್ಕೆ ಬರಲಿವೆ.

ಜ.5ರಂದು ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ

ಬ್ರಹ್ಮರಥೋತ್ಸವ ಹಾಗೂ ಜಾತ್ರೆ ಕುರಿತಂತೆ ಜಿಲ್ಲಾಕಾರಿಗಳ ಸಭೆ ನಡೆದಿದ್ದು, ಡಿ.20 ರಿಂದ 30 ವರೆಗೆ ದನಗಳ ಜಾತ್ರೆಗೆ ವಿವಿಧ ಭಾಗಗಳಿಂದ ಸಾಕಷ್ಟು ಜಾನುವಾರುಗಳು ಆಗಮಿಸಲಿದ್ದು ರಾಸುಗಳಿಗೆ ಕುಡಿಯುವ ನೀರು, ಮೇವು, ಲಸಿಕೆ, ದನಗಳ ಕಟ್ಟಿಹಾಕುವ ಶೆಡ್ ಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ, ರೈತರಿಗೆ ಉಚಿತ ಊಟದ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಜಾತ್ರಾ ಮಹೋತ್ಸವದಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಷೇಸುವಂತೆ ಜಿಲ್ಲಾಕಾರಿ ಸಂಬಂತ ಅಕಾರಿಗಳಿಗೆ ಸೂಚಿಸಿದ್ದಾರೆ.

ಟೋಲ್ ಸುಂಕ ಬೇಡ: ನಡೆದುಕೊಂಡು ಕರೆ ತರುವ ರಾಸುಗಳಿಗೆ ಟೋಲ್ ಸುಂಕದಿಂದ ವಿನಾಯಿತಿ ದೊರೆಯುತ್ತಿದೆ. ಆದರೆ ವಾಹನಗಳಲ್ಲಿ 50ಗಳವರೆಗೂ ಟೋಲ್ ಸುಂಕ ವಸೂಲಿ ಮಾಡಲಾಗುತ್ತದೆ. ಈ ಬಗ್ಗೆ ರೈತರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಅಂತರ ರಾಜ್ಯ ದನಗಳ ಜಾತ್ರೆಯಲ್ಲಿ ಪಾಲ್ಗೊಳ್ಳುವ ರಾಸುಗಳನ್ನು ಸಾಗಿಸುವ ವಾಹನಗಳಿಗೆ ಯಾವುದೇ ಸುಂಕ ವಿಸಬಾರದು ಹಾಗೂ ಗೌರಿಬಿದನೂರು ರಸ್ತೆಯಲ್ಲಿ ಬರುವ ಗುಂಜೂರು ಟೋಲ್ ಉಚಿತವಾಗಿ ಪ್ರವೇಶ ನೀಡಬೇಕು. ಜಾತ್ರೆಗೆ ಮಾರಾಟಕ್ಕೆ ಬರುವ ಹೋರಿಗಳಿಗೆ ಟೋಲ್ ಸುಂಕು ವಸೂಲಿಯಿಂದ ವಿನಾಯಿತಿ ನೀಡಬೇಕು’ ಎಂದು ತೂಬಗೆರೆ ಗ್ರಾಮದ ಯುವ ಮುಖಂಡ ಉದಯ ಆರಾಧ್ಯ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಜಾಗಕ್ಕೆ ವ್ಯವಸ್ಥೆ ಮಾಡಿ: ಜಾತ್ರೆಗೆ ಮಾರಾಟಕ್ಕೆ ಬರುವ ಒಂದು ಜೋಡಿ ಹೋರಿಗಳಿಗೆ ಹೋರಿಗಳನ್ನು ಸಾಕಾಣಿಕೆ ಮಾಡುವ ರೈತರ ಸಂಖ್ಯೆಯೇ ಕಡಿಮೆಯಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಜಾತ್ರೆಗೆ ಬರುವ ಹೋರಿಗಳ ಸಂಖ್ಯೆಯು ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ಟೋಲ್ ವಿನಾಯಿತಿ ನೀಡಬೇಕು.

ಖಾಸಗಿಯವರು ಜಾತ್ರೆ ನಡೆಯುವ ಸ್ಥಳಗಳಲ್ಲಿ ಕಾಂಪೌಂಡ್ ಮಾಡಿಕೊಂಡಿರುವುದರಿಂದ, ರಾಸುಗಳ ಪ್ರದರ್ಶನಕ್ಕೆ ಸೂಕ್ತ ಸ್ಥಳಾವಕಾಶದ ಕೊರತೆಯಾಗುತ್ತಿದೆ. ಆದ್ದರಿಂದ ತಾವುಗಳು ಕಾಂಪೌಂಡ್ ತೆರವುಗೊಳಿಸಬೇಕು ಎಂದು ರೈತರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]