Video: ಅಂಬೇಡ್ಕರ್ ಕುರಿತು ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ..!; ದೇಶಾದ್ಯಂತ ಆಕ್ರೋಶ.. ವಿಪಕ್ಷಗಳು ಕಿಡಿ| Amit Shah

ದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ನೀಡಿದ ಆಕ್ಷೇಪಾರ್ಹ ಹೇಳಿಕೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

video courtesy PTI

ಸದನದಲ್ಲಿ ಮಾತಾನಾಡುವ ವೇಳೆ ಅಮಿತ್ ಶಾ ಅವರು, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್. ಇಷ್ಟು ಸಲ ದೇವರ ನಾಮಸ್ಮರಣೆ ಮಾಡಿದ್ದರೆ ಏಳೇಳು ಜನ್ಮಕ್ಕೂ ಸ್ವರ್ಗಕ್ಕೆ ಹೋಗುತ್ತಿದ್ದರು ಎಂದು ಲೇವಡಿ ರೀತಿ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ.

ಈ ಕುರಿತ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಸಂಸದರು ಸಂಸತ್ತಿನ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಹಿಡಿದುಕೊಂಡು ಸಂಸತ್ತಿನ ಹೊರಗೆ ಸಂಸದರು ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್, ಡಿಎಂಕೆ, ಆರ್‌ಜೆಡಿ, ಎಡಪಕ್ಷಗಳು ಹಾಗೂ ಆಪ್ ಸೇರಿದಂತೆ ವಿವಿಧ ಪಕ್ಷಗಳು ಸಂಸದರು ಭಾಗವಹಿಸಿದ್ದರು.

ರಾಜ್ಯಸಭೆಯಲ್ಲಿ ಮಧ್ಯಾಹ್ನ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಸಭಾತ್ಯಾಗ ಮಾಡಿತ್ತು.

ಪ್ರತಿಭಟನೆ ಬಳಿಕ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಅಮಿತ್ ರಾಜೀನಾಮೆ ಪಡೆಯುವಂತೆ ಮನವಿ ಮಾಡಿದರು.

ಟಿಎಂಸಿ ಹಕ್ಕುಚ್ಯುತಿ ನೋಟಿಸ್‌: ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಜ್ಯ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒಬ್ರಯಾನ್ ಅವರು ಹಕ್ಕು ಚ್ಯುತಿ ನೋಟಿಸ್‌ ನೀಡಿದ್ದಾರೆ.

ಅಮಿತ್ ಶಾ ಹೇಳಿಕೆ ಹಾಗೂ ಅವರು ಹೇಳಿದ ರೀತಿ ಎರಡೂ ಅವಮಾನಕಾರಿಯಾಗಿತ್ತು ಎಂದು ಬುಧವಾರ ಮಧ್ಯಾಹ್ನದ ಬಳಿಕ ನೀಡಿರುವ ಹಕ್ಕುಚ್ಯುತಿ ನೋಟಿಸ್‌ನಲ್ಲಿ ಹೇಳಲಾಗಿದೆ.

ದಿಢೀರ್ ಸುದ್ದಿಗೋಷ್ಠಿ: ಅಮಿತ್ ಶಾ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಅಮಿತ್ ಶಾ ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ನನ್ನ ಹೇಳಿಕೆಯನ್ನು ಕಾಂಗ್ರೆಸ್ ತಿರುಚುತ್ತಿದೆ ಎಂದು ದೂರಿದ್ದಾರೆ.

ಅಂಬೇಡ್ಕರ್ ಅವರಿಗೆ ಎಂದಿಗೂ ಅವಮಾನ ಮಾಡದ ಪಕ್ಷದಿಂದ ನಾನು ಬಂದಿದ್ದೇನೆ. ಸಮಾಜದಲ್ಲಿ ಗೊಂದಲ ಮೂಡಿಸಲು ಮತ್ತು ಜನರ ದಾರಿ ತಪ್ಪಿಸಲು ಕಾಂಗ್ರೆಸ್ ಈ ಹಿಂದೆಯೂ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ತಿರುಚಿತ್ತು ಎಂದು ಹೇಳಿದರು.

ಪ್ರಧಾನಿ ಮೋದಿ ಸಮರ್ಥನೆ: ಕಾಂಗ್ರೆಸ್ ಆರೋಪವನ್ನು ತಳ್ಳಿ ಹಾಕಿರುವ ಪ್ರಧಾನಿ ಮೋದಿ, ಸಂವಿಧಾನ ಶಿಲ್ಪಿಯನ್ನು ಸದಾ ಅವಮಾನಿಸುತ್ತಲೇ ಇರುವ ಕಾಂಗ್ರೆಸ್‌ನ ಕರಾಳ ಇತಿಹಾಸವನ್ನು ಗೃಹ ಸಚಿವರು ಬಹಿರಂಗಪಡಿಸಿದ್ದಾರೆ.

ಶಾ ಹೇಳಿದ ಸತ್ಯಗಳಿಂದ ಕಾಂಗ್ರೆಸ್‌ನವರು ಸ್ಪಷ್ಟವಾಗಿ ದಿಗ್ದಮೆ ಗೊಂಡಿದ್ದಾರೆ. ಅದಕ್ಕಾಗಿಯೇ ಈಗ ಡ್ರಾಮಾ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಕಿಡಿ: ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿ ರುವ ಸಂಸತ್‌ ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದಿದ್ದೀರಿ. ಆದರೆ ವಾಸ್ತವವಾಗಿ ನಿಮ್ಮ ಪಕ್ಷದವರು ಮೋದಿ..ಮೋದಿ..ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ.

ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು ಎಂದು ಸಿಎಂ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರಿಗೆ ತಿರುಗೇಟು ನೀಡಿದ್ದಾರೆ.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!