ಕ್ಯಾನ್ಸರ್‌ಗೆ ಲಸಿಕೆ ಅಭಿವೃದ್ಧಿ..!; ಕ್ಲಿನಿಕಲ್ ಟ್ರಯಲ್ ಯಶಸ್ವಿ.. ಉಚಿತ ಹಂಚಿಕೆಗೆ ಘೋಷಣೆ| cancer vaccine

ಮಾಸ್ಕೊ: ಮಾರಣಾಂತಿಕ ರೋಗ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಶುಭಸುದ್ದಿ (cancer vaccine) ದೂರದ ರಷ್ಯಾದಿಂದ ಹೊರಬಿದ್ದಿದೆ.

ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ನೋವಿಲ್ಲದಂತೆ ಸುಲಭದಲ್ಲಿ ನಡೆಯುವಂತೆ ಮಾಡುವಂತಹ ಔಷಧ ಯಾವಾಗ ಬರುವುದೋ ಎಂದು ಇಡೀ ವಿಶ್ವದ ಕ್ಯಾನ್ಸ‌ರ್ ರೋಗಿ ಗಳ ಕಾಯುವಿಕೆ ಕೊನೆಗೊಳ್ಳುವ ಸಮಯ ಬಂದಿದೆ. ರೋಗಿಗಳನ್ನು ಇನ್ನಿಲ್ಲದಂತೆ ನೋಯಿಸಿ, ಪೀಡಿಸಿ ಸಾವು ತರುತ್ತಿದ್ದ ಕ್ಯಾನ್ಸರ್‌ನ ಚಿಕಿತ್ಸೆಗೆ ಲಸಿಕೆ ಅಭಿವೃದ್ಧಿಯಾಗಿದೆ.

ಕ್ಯಾನ್ಸ‌ರ್ ಕೋಶಗಳನ್ನು ಪೂರ್ಣವಾಗಿ ನಾಶಪಡಿಸುವಂತಹ ‘ಎಂಆರ್‌ಎನ್‌ಎ’ ಆಧಾರಿತ ಚಿಕಿತ್ಸಕ ಲಸಿಕೆ ಅಭಿವೃದ್ಧಿಪಡಿಸಿರುವುದಾಗಿ ರಷ್ಯಾ ಬುಧವಾರ ಪ್ರಕಟಿಸಿದೆ.

ಮಹತ್ವದ ಈ ಲಸಿಕೆ 2025ರಲ್ಲಿ ಚಿಕಿತ್ಸೆಗೆ ಲಭ್ಯವಾಗಲಿದೆ. ಎಲ್ಲ ಕ್ಯಾನ್ಸ‌ರ್ ರೋಗಿಗಳಿಗೂ ಉಚಿತವಾಗಿ ಸಿಗಲಿದೆ ಎಂದು ರಷ್ಯಾ ಸರಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ‘ಟಿಎಎಸ್‌ಎಸ್‌’ ಪ್ರಕಟಿಸಿದೆ.

ರಷ್ಯಾ ವಿಜ್ಞಾನಿಗಳು ಕ್ಯಾನ್ಸರ್ ಕೋಶಗಳನ್ನು ಪೂರ್ಣವಾಗಿ ನಾಶಪಡಿಸುವಂತಹ ‘ಎಂಆ‌ರ್ ಎನ್‌ಎ’ ಲಸಿಕೆ ಅಭಿವೃದ್ಧಿಪಡಿಸಿದ್ದಾರೆ. ಈ ಲಸಿಕೆಯು ರೋಗಿಯ ದೇಹದಲ್ಲಿ ಪ್ರತಿರಕ್ಷಣಾ ಪ್ರಕ್ರಿಯೆ ನಡೆಯುವುದಕ್ಕೆ ಅತ್ಯಗತ್ಯವಾದ ಮೆಸೆಂಜರ್ ಆರ್ ಎನ್‌ಎ(ಎಂಆರ್‌ಎನ್‌ಎ) ಎಂಬ ಅಣುವಿನ ನಕಲನ್ನು ಬಳಸುತ್ತದೆ ಎಂದು ಲಸಿಕೆಗೆ ಸಂಬಂಧಿಸಿದ ವರದಿಯಲ್ಲಿ ವಿವರಿಸಲಾಗಿದೆ.

ಟ್ರಯಲ್ ಯಶಸ್ವಿ

ಲಸಿಕೆಯ ಕ್ಲಿನಿಕಲ್ ಟ್ರಯಲ್ ಬಗ್ಗೆ ಗಮಾಲೆಯ ‘ನ್ಯಾಷನಲ್ ರಿಸರ್ಚ್ ಸೆಂಟರ್ ಫಾರ್ ಎಪಿಡೆಮಿಯಾಲಜಿ ಮತ್ತು ಮೈಕ್ರೋಬಯಾಲಜಿ’ ಸಂಸ್ಥೆ ನಿರ್ದೇಶಕ ಅಲೆಕ್ಸಾಂಡರ್ ಗಿಂಟ್ಸಂಬರ್ಗ್ ವಿವರಿಸಿದ್ದಾರೆ.

‘ಲಸಿಕೆಯು ಕ್ಯಾನ್ಸರ್ ಗಡ್ಡೆಯ(ಟ್ಯೂಮರ್) ಬೆಳವಣಿಗೆ ಮತ್ತು ಸಂಭಾವ್ಯ ಮೆಟಾಸ್ಟೇಸ್ ಗಳನ್ನು ಸಮರ್ಥವಾಗಿ ನಿಗ್ರಹಿಸುತ್ತದೆ. ಅ ಅಂಶವನ್ನು ಕ್ಲಿನಿಕಲ್‌ ಟ್ರಯಲ್‌ಗಳಲ್ಲಿ ಕಂಡುಕೊಳ್ಳಲಾಗಿದೆ ಎಂದಿದ್ದಾರೆ.

ಉಚಿತ ಹಂಚಿಕೆ

ಕ್ಯಾನ್ಸರ್ ಚಿಕಿತ್ಸಕ ಲಸಿಕೆಯನ್ನು 2025 ವರ್ಷಾರಂಭದಲ್ಲಿ ಹೊರಬಿಡಲಾಗುವುದು. ಜೀವರಕ್ಷಕವಾದ ಈ ಲಸಿಕೆಯನ್ನು ಸದ್ಯಕ್ಕೆ ಮಾರುಕಟ್ಟೆಗೆ ಬಿಡುಗಡೆ ಮಾಡುವುದಿಲ್ಲ. ಮಾರಕ ಕಾಯಿಲೆ ಕ್ಯಾನ್ಸರ್‌ನಿಂದ ಬಳಲುತ್ತಿರುವವರಿಗೆ ಉಚಿತವಾಗಿ ನೀಡಲಾಗುವುದು.

ರೋಗಿಗಳ ಚಿಕಿತ್ಸೆಗೇ ಆದ್ಯತೆ ಮೇರೆಗೆ ಬಳಸಲಾಗುವುದು ಎಂದು ರಷ್ಯಾ ಆರೋಗ್ಯ ಸಚಿವಾಲಯ ಘೋಷಿಸಿದೆ.

ರಾಜಕೀಯ

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ಪ್ರಜಾಪ್ರಭುತ್ವಕ್ಕೆ ಮಾದರಿಯಾದ ಎಂಕೆ ಸ್ಟಾಲಿನ್‌ ನಡೆ..!

ತಮ್ಮ ಸರ್ಕಾರವನ್ನು ಕೆಳಗಿಳಿಸಿ, ಅನ್ಯ ಪಕ್ಷದ ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ, ಸದಾ ಅವರನ್ನು ಕೆಳಗಿಳಿಸಲು ಸುಳ್ಳು ಪ್ರಚಾರ ಮಾಡುತ್ತಾ, ಸಾಂವಿಧಾನಿಕ ಬಿಕ್ಕಟ ಸೃಷ್ಟಿಸಲು ಕಾಯುವ ಪಕ್ಷಗಳ ನಡುವೆ ಎಂಕೆ ಸ್ಟಾಲಿನ್ (MK Stalin)

[ccc_my_favorite_select_button post_id="121840"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]