ಸಂಘಟನೆಗಳೊಂದಿಗೆ ಜಿಲ್ಲಾಧಿಕಾರಿ ಸಭೆ..!; ಪ್ರಮುಖ ಬೇಡಿಕೆಗಳ ವಿವರ ಇಲ್ಲಿದೆ| DC

ಬೆಂ.ಗ್ರಾ.ಜಿಲ್ಲೆ; ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ, ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ (DC) ಆಗ್ರಹ ಮಾಡಿದರು.

ಸಂಘಟನೆಗಳ ಪ್ರಮುಖ ಬೇಡಿಕೆಗಳು

  • ಭ್ರಷ್ಟಾಚಾರ ರಹಿತ ಆಡಳಿತ
  • ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು
  • ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು
  • ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ
  • ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣುವುದು.
  • ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಲೇವಾರಿ
  • ಸಾಗುವಳಿ ಚೀಟಿ ವಿತರಣೆ
  • ಸರ್ಕಾರಿ ಜಾಗಗಳ ಒತ್ತುವರಿ ತೆರವು
  • ನಿವೇಶನ, ವಸತಿ ಹಂಚಿಕೆ
  • ಬಗರ್ ಹುಕುಂ ಜಮೀನು ವಿವಾದ
  • ಕಡತಗಳ ಶೀಘ್ರ ವಿಲೇವಾರಿ
  • ಇ.ಎಸ್.ಐ ಆಸ್ಪತ್ರೆ ಉದ್ಘಾಟನೆ
  • ಹೊಸಕೋಟೆಯಲ್ಲಿ ಉಪವಿಭಾಗ ಸ್ಥಾಪಿಸುವುದು
  • ಪೌತಿ ಖಾತೆ, ಪೋಡಿ ಇತ್ಯರ್ಥ

ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಂಘಟನೆಗಳ ಮುಖಂಡರಿಗೆ ಕರೆದಿದ್ದ ಸಭೆಯಲ್ಲಿ ಸಂಘಟನೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಈಗಾಗಲೇ ಪೌತಿ ಖಾತೆ ಆಂದೋಲನ ಶುರುವಾಗಿದ್ದು 6000 ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತದೆ. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಶುರು ಮಾಡಲಾಗಿದೆ. ಸೂಕ್ತ ದಾಖಲೆಗಳು ಇರುವ ಜಮೀನುಗಳನ್ನು ಮೊದಲು ಪೋಡಿ ಮಾಡಲಾಗುತ್ತಿದೆ ಎಂದರು.

ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ 200 ರಿಂದ 300 ಎಕರೆ ಸರ್ಕಾರಿ ಜಾಗ ಗುರ್ತಿಸಲಾಗಿದೆ. ಅಂದಾಜು 7000 ನಿವೇಶನಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

4000 ನಿವೇಶನಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ನಿವೇಶನ ರಹಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅರ್ಹರಿಗೆ ಹಂತ ಹಂತವಾಗಿ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದರು.

ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡಬೇಕು.‌ ಅಧಿಕಾರಿಗಳು ಜನಸಾಮಾನ್ಯರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳ ಬರದೇ ಇರೋ ಹಾಗೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಿತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಘಟನೆಗಳ ಮುಖಂಡರಿಗೆ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ನಾಲ್ಕು ತಾಲ್ಲೂಕು ತಹಶೀಲ್ದಾರ್ ಗಳು, ಕನ್ನಡಪರ, ರೈತಪರ, ದಲಿತರಪರ ಸೇರಿದಂತೆ ವಿವಿಧ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!