ಪರಿಷತ್ ಸದಸ್ಯ ಸಿಟಿ ರವಿ ಬಂಧನ..!| CT Ravi

ಬೆಳಗಾವಿ: ಸದನದಲ್ಲಿ ಅಶ್ಲೀಲ ಪದ ಬಳಸಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್​ಸಿ ಸಿಟಿ ರವಿ (CT Ravi) ವಿರುದ್ಧ ಎಫ್​​ಐಆರ್ ದಾಖಲಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ಬರೆದುಕೊಟ್ಟಿದ್ದಾರೆ.

ಈ ದೂರಿನ ಮೇರೆಗೆ ಇದೀಗ ಸಿಟಿ ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ ಎಂದು ವರದಿಯಾಗಿದೆ.

ಈ ಹಿನ್ನೆಲೆಯಲ್ಲಿ ಸದನದ ಬಳಿ ಪ್ರತಿಭಟನೆ ನಡೆಸುತ್ತಿದ್ದ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂದಿಸಿದರು. ಈ ವೇಳೆ ವಿರೋಧ ಪಕ್ಷದ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ ಶಾಸಕರಾದ ಅರವಿಂದ್ ಬೆಲ್ಲದ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಅವರು ಪೊಲೀಸ್ ವ್ಯಾನ್‌ಗೆ ಅಡ್ಡಲಾಗಿ ನಿಂತು ತಡೆಯಲು ಮುಂದಾದರು. ಆದರೆ ಪೊಲೀಸರು ಬದಿಗೆ ಕರೆದೊಯ್ದು, ಸಿಟಿ ರವಿ ಅವರನ್ನು ಠಾಣೆಗೆ ಕರೆದೊಯ್ಯಲಾಗಿದೆ.

ವಿಜಯೇಂದ್ರ ಪ್ರತಿಕ್ರಿಯೆ: ಮಾನ್ಯ C T Ravi ಅವರು ಹಿರಿಯ ಶಾಸಕರಾಗಿ ಸುದೀರ್ಘ ಅನುಭವ ಹೊಂದಿದ ಸುಸಂಸ್ಕೃತ ಭಾಷೆ ಬಳಸುವ ಉತ್ತಮ ವಾಕ್ಪಟು. ಸಭ್ಯತೆಯ ಎಲ್ಲೆಮೀರಿ ಪದ ಸಂಸ್ಕೃತಿ ಇಲ್ಲದವರಂತೆ ಮಾತನಾಡಿದವರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ಇಂದು ವಿಧಾನಪರಿಷತ್ತಿನಲ್ಲಿ ನಡೆದಿರುವ ಘಟನೆಯ ವೇಳೆ ಮಾನ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕುರಿತ ಪದಬಳಕೆಯ ಸಂಬಂಧ ಈಗಾಗಲೇ ಸೂಕ್ತ ಸ್ಪಷ್ಟನೆ ನೀಡಿ ಆರೋಪ ನಿರಾಕರಿಸಿದ್ದಾರೆ.

ಮಾತೆಯನ್ನು ಪೂಜಿಸುವ ಸಂಸ್ಕಾರದ ನೆಲೆಗಟ್ಟಿನ ಸಂಘಟನೆಯಿಂದ ಬೆಳೆದು ಬಂದಿರುವ ಸಿಟಿ ರವಿ ಅವರನ್ನು ಕುರಿತು ಕಾಂಗ್ರೆಸ್ಸಿಗರು ವಿಧಾನಪರಿಷತ್ತಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಬಳಸಿರುವ ‘ಕೊಲೆಗಡುಕ’ ಎಂಬ ಪದ ಸಹಜವಾಗಿಯೇ ಅವರ ಸಹನೆಯನ್ನು ಕೆಣಕಿರಬಹುದು.

ಯಾವುದಾದರೂ ಒಂದು ವಿಷಯವನ್ನು ಸೃಷ್ಟಿಸಿ ಗದ್ದಲವೆಬ್ಬಿಸಿ ತಮಗೆ ಸುತ್ತಿಕೊಂಡಿರುವ ಅಭಿವೃದ್ಧಿ ವಿರೋಧಿ ಆಡಳಿತದ ಅಲೆಯ ವಿರುದ್ಧದ ಹಾಗೂ ಭ್ರಷ್ಟಾಚಾರದ ಹಗರಣಗಳ ಸುರುಳಿಯ ವಿಷಯವನ್ನು ಜನಮಾನಸದ ದಿಕ್ಕು ತಪ್ಪಿಸಲು ಅನಗತ್ಯ ಗೊಂದಲ ಸೃಷ್ಟಿಸುವ ಹೊಸ ವರಸೆಯನ್ನು ಕಾಂಗ್ರೆಸ್ಸಿಗರು ಶುರುವಿಟ್ಟುಕೊಂಡಿದ್ದಾರೆ.

ಇಂದಿನ ಘಟನೆಯ ಹಿನ್ನೆಲೆಯಲ್ಲಿ ವಿಧಾನಮಂಡಲದೊಳಗೆ ಸಿಟಿ ರವಿ ಅವರ ಮೇಲೆ ಮಾರ್ಷಲ್ ಗಳ ಸಮ್ಮುಖದಲ್ಲೇ ಗೂಂಡಾಗಳಿಂದ ಹಲ್ಲೆಗೆ ಯತ್ನ ನಡೆದಿರುವ ಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ನೇರ ದಾಳಿಯಾಗಿದೆ.

ಗೂಂಡಾಗಿರಿ ರಾಜಕಾರಣಕ್ಕೆ ಹೆಸರಾಗಿರುವ ಕಾಂಗ್ರೆಸ್ಸಿಗರು ವಿಧಾನಮಂಡಲದೊಳಗೂ ಕೂಡ ಗೂಂಡಾಗಳನ್ನು ಕರೆತಂದು ದಾಂಧಲೆ ಎಬ್ಬಿಸುವ ಮಟ್ಟಿಗೆ ಪರಿಸ್ಥಿತಿ ಸೃಷ್ಟಿಸುತ್ತಿದ್ದಾರೆ ಎಂದರೆ ಇನ್ನು ಜನಸಾಮಾನ್ಯರ ಪಾಡೇನು ಎಂಬ ಆತಂಕ ರಾಜ್ಯದ ಜನತೆಯನ್ನು ಕಾಡದೇ ಇರದು.

ಪೊಲೀಸ್ ಸರ್ಪಗಾವಲಿನ ಸುವರ್ಣಸೌಧದೊಳಗೆ ಗೂಂಡಾಗಿರಿ ನಡೆಸಲು ಮಾನ್ಯ ಸಿಟಿ ರವಿ ಅವರ ಮೇಲೆ ಹಲ್ಲೆ ನಡೆಸಲು ಪ್ರಚೋದನೆ ನೀಡಿರುವ ಹಿಂದಿನ ಶಕ್ತಿ ಯಾವುದು ಎಂಬುದರ ಬಗ್ಗೆ ಉಭಯ ಸದನಗಳ ಸಭಾಧ್ಯಕ್ಷರು ಮತ್ತು ಸಭಾಪತಿಗಳು ಕೂಡಲೇ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ‌.

ಸಿಟಿ ರವಿ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲಿದೆ ಎಂದಿದ್ದಾರೆ.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!