Use of obscene words.. Trouble for CT Ravi..?

ನಿನಗೆ ಹೆಂಡತಿ ಇಲ್ವೇನೋ..?, ಮಗಳಿಲ್ವೇನೋ..?, ತಾಯಿ ಇಲ್ವೇನೋ..?; ಸಿಟಿ ರವಿ ವಿರುದ್ಧ ಕೆರಳಿದ ಲಕ್ಷ್ಮಿ ಹೆಬ್ಬಾಳ್ಕರ್| CT Ravi

ಬೆಳಗಾವಿ: ಸುವರ್ಣಸೌಧದ ಪರಿಷತ್ ಕಲಾಪದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ (CT Ravi) ಅವರು ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಆರೋಪ ಕೋಲಾಹಲವನ್ನೇ ಎಬ್ಬಿಸಿದೆ.

ಕಲಾಪವು ವಿರಾಮದ ನಂತರ ಆರಂಭವಾಗುತ್ತಿದ್ದಂತೆ ಆಡಳಿತ ರೂಢ ಪಕ್ಷದ ಸದಸ್ಯರು ಸಿಟಿ ರವಿ ವಿರುದ್ಧ ಸಭಾಂಗಣದಲ್ಲಿ ಮುಗಿಬಿದ್ದರು.

ಭಾರತ್ ಮಾತಾಕಿ ಜೈ ಎನ್ನುವ ನೈತಿಕತೆ ನಿಮಗಿಲ್ಲ. ನಿಮಗೆ ಹೆಂಡತಿ, ತಾಯಿ ಮಗಳು ಇಲ್ವೇನ್ರಿ ಎಂದು ಸಿಟಿ ರವಿ, ಬಿಜೆಪಿ ಸದಸ್ಯರ ವಿರುದ್ಧ ಹೆಬ್ಬಾಳ್ಕರ್ ಗುಡುಗಿದರು. ಆಡಳಿತ ಪಕ್ಷದ ಹಾಗೂ ವಿಪಕ್ಷ ನಾಯಕರ ಗದ್ದಲ, ವಾಕ್ಸಮರ ಕಾವು ಮತ್ತೆ ತೀವ್ರಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿದರು.

ಇದಕ್ಕೂ ಮುನ್ನ ಆಡಳಿತರೂಢ ಸದಸ್ಯರು ರವಿ ಅವರು ಕೆಟ್ಟ ಪದಬಳಕೆ ಮಾಡಿದ್ದಾರೆಂದು ಹಾಗೂ ವಿರೋಧ ಪಕ್ಷದ ಸದಸ್ಯರು ಇಲ್ಲ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಎರಡೂ ಪಕ್ಷದ ಸದಸ್ಯರಿಂದ ಆರೋಪ-ಪ್ರತ್ಯಾರೋಪ ದೂರುಗಳು ಬಂದಿವೆ.

ಘಟನೆ ಬಗ್ಗೆ ನೀವೇ ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಸಭಾಪತಿಗಳು ಸಲಹೆ ನೀಡಿದರು. ಇನ್ನು ಪೊಲೀಸ್ ಭದ್ರತೆಯಲ್ಲಿ ಸಿಟಿ ರವಿ ಅವರು ಸದನದಿಂದ ಇದೇ ವೇಳೆ ಹೊರ ನಡೆದರು.

ಪ್ರಕರಣ ದಾಖಲು; ಸದನದೊಳಗೆ ಅಶ್ಲೀಲ ಪದ ಬಳಸಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು ಬರೆದುಕೊಟ್ಟಿದ್ದಾರೆ. ಈ ದೂರಿನ ಮೇರೆಗೆ ಇದೀಗ ಸಿಟಿ ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಎಫ್​ಐಆರ್ ದಾಖಲಾಗಿದೆ.

ಹೀಗಾಗಿ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಗಳಿವೆ.

ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಕೇಸ್ ದಾಖಲಾಗಿದ್ದು. ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆ ವಿರುದ್ಧ ಅಶ್ಲೀಲತೆ ತೋರುವುದು. ಮಹಿಳೆಯ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಲೈಂಗಿಕ ಬಣ್ಣದ ಟೀಕೆ ಎಂದು ಎಫ್​​ಐಆರ್​ನಲ್ಲಿ ಉಲ್ಲೇಖವಾಗಿದೆ ಎಂದು ವರದಿಯಾಗಿದೆ.

ಹಲ್ಲೆ ಯತ್ನ; ಯಾವಾಗ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಗೊತ್ತಾಗುತ್ತಿದ್ದಂತೆಯೇ ಲಕ್ಷ್ಮೀ ಹೆಬ್ಬಾಳ್ಕರ್​ ಬೆಂಬಲಿಗರು ಸಿಟಿ ರವಿ ವಿರುದ್ಧ ಸಿಡಿದೆದ್ದಿದ್ದು, ಅವರ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಸುವರ್ಣ ಸೌಧಕ್ಕೆ ನುಗ್ಗಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!