ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Sahitya sammelana) ಮಂಡ್ಯ ನಗರದ ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು ವಿದ್ಯುತ್ ದೀಪಾಲಂಕಾರಕ್ಕೆ ಕನ್ನಡದ ಬಾವುಟ ಹೋಲುವಂತೆ ಕೆಂಪು ಮತ್ತು ಹಳದಿಯ ಎಲ್‌ಇಡಿ ಬಲ್ಬ್ಗಳನ್ನು ಅಳವಡಿಸಲಾಗಿದೆ.
ಮಂಡ್ಯವನ್ನು ಸ್ವಾಗತಿಸುವ ಕಮಾನಿಂದ ರಸ್ತೆಯ ಎರಡು ಬದಿಯಲ್ಲಿರುವ ಸ್ಥಳಗಳಲ್ಲಿ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು ಸಾಹಿತ್ಯಾಸಕ್ತರು ಜಗಮಗಿಸುವ ಮಂಡ ಕಣ್ತುಂಬಿಕೊಳ್ಳಲು ಸಾಧ್ಯವಾಗಲ್ಲಿದೆ.

ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಶಿ, ಶಾಸಕರಾದ ನರೇಂದ್ರ ಸ್ವಾಮಿ, ರವಿಕುಮಾರ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತನ್ವೀರ್ ಆಸೀಫ್ ಮತ್ತಿತರರು ಉಪಸ್ಥಿತರಿದ್ದರು.