ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ: ಸಿಎಂ| CT Ravi

ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿಟಿ ರವಿಯವರ (CT Ravi) ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಅವರು ಇಂದು ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿಟಿ ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಪದಬಳಕೆಯಾಗಿರುವುದು ಸತ್ಯ

ಸಭಾಪತಿ ಬಸವರಾಜ ಹೊರಟ್ಟಿಯವರು, ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿಟಿ ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ ಎಂದರು.

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ

ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

ಮಂಡ್ಯ ಅಪ್ಪಟ ಕನ್ನಡದ ನೆಲ

ಮಂಡ್ಯದಲ್ಲಿ ನಡೆಯುತ್ತಿರುವ 87 ನೇ ಅಖಿಲ ಭಾರತ ಸಾಹಿತ್ಯ ಸಮ್ಮೆಳನದ ಉದ್್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಅಪ್ಪಟ ಕನ್ನಡ ನೆಲ ಮಂಡ್ಯ. ಮಂಡ್ಯಕ್ಕೆ ಬರುವ ಪರಭಾಷಿಕರು ಸಹ ಕನ್ನಡವನ್ನು ಕಲಿಯುತ್ತಾರೆ. ಕನ್ನಡ ನಾಡಿನ ಭಾಷೆ ,ರಾಜ್ಯಭಾಷೆ ಆಗಿದೆ ಎಂದರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!