ದೊಡ್ಡಬಳ್ಳಾಪುರ: ತಾಲ್ಲೂಕು ವಕೀಲರ ಸಂಘದ ವತಿಯಿಂದ 66ನೇ ಕರ್ನಾಟಕ ರಾಜ್ಯೋತ್ಸವ (rajyotsava) ಮತ್ತು ವಕೀಲರ ದಿನಾಚರಣೆ ಸಮಾರಂಭ ಇಂದು (ಡಿ.20) ರಂದು ಸಂಜೆ 5 ಗಂಟೆಗೆ ನಗರದ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ರವಿಮಾವಿನಕುಂಟೆ ತಿಳಿಸಿದ್ದಾರೆ.
ಕನ್ನಡ ಧ್ವಜಾರೋಹಣವನ್ನು 4ನೇ ಜಿಲ್ಲಾ ಮತ್ತು ಸತ್ರ ನ್ಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ ನೆರವೇರಿಸಲಿದ್ದಾರೆ.
ಸಮಾರಭವನ್ನು ರಾಜ್ಯ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಉದ್ಘಾಟಿಸಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ ವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಂ.ಎಸ್. ನರಸಿಂಹಮೂರ್ತಿ ಮತ್ತು ತಂಡದವರಿಂದ ಹಾಸ್ಯೋತ್ಸವ, ವಕೀಲರಾದ ಕೋಳೂರು ನಾಗರಾಜು,ಎನ್.ಲತಾ ಅವರಿಂದ ರಸ ಮಂಜರಿ ನಡೆಯಲಿದೆ.