87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ| Video ನೋಡಿ.. Kannada sahitya sammelana

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada sahitya sammelana) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.

ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.

ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

ಅಕ್ಷರ ಜಾತ್ರೆಗೆ ಹರಿದು ಬಂದ ಜನಸಾಗರ

ಸಕ್ಕರೆ ನಗರಿ ಮಂಡ್ಯದಲ್ಲಿ ನಡೆಯುತ್ತಿರುವ 87 ನೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ನಿರೀಕ್ಷೆಗೂ ಮೀರಿ ಜನ ಸಾಗರ ಹರಿದು ಬಂತು.

ಬೆಳಗ್ಗೆ 8 ಗಂಟೆಯಿಂದಲೇ ಸ್ಥಳೀಯ ನಾಗರಿಕರು, ಮಹಿಳೆಯರು, ವಿದ್ಯಾ ರ್ಥಿಗಳು ಸಾಹಿತ್ಯ ಸಮ್ಮೇಳನವನ್ನು ಕಣ್ಮನ ತುಂಬಿಕೊಳ್ಳಲು ತಂಡೋಪ ತಂಡವಾಗಿ ಆಗಮಿಸಿದರು. ರಾಜ್ಯದ ನಾನಾ ಜಿಲ್ಲೆಗಳಿಂದ ಕನ್ನಡಾಭಿಮಾನಿ ಗಳು, ಸಾಹಿತಿಗಳು, ಸಾಹಿತ್ಯಾಸಕ್ತರು ಗುರುವಾರವೇ ನಗರಕ್ಕೆ ಆಗಮಿಸಿದರು.

ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸಿದ ಪ್ರತಿನಿಧಿಗಳಿಗೆ ಅಚ್ಚುಕಟ್ಟಾಗಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದ್ದು, ಸಮ್ಮೇಳನದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.

ಮೆರವಣಿಗೆಯಲ್ಲಿ ಹಾಗೂ ಮುಖ್ಯವೇದಿಕೆಯಲ್ಲಿ ಜನಸಾಗರ ಜಮಾಯಿಸಿದ್ದ ಕಾರಣ ಹಾಗೂ ಯಾವುದೇ ಅಹಿತಕರ ಘಟನೆ ನಡೆಯಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಒಟ್ಟು 3,200 ಪೊಲೀಸ್ ಸಿಬ್ಬಂದಿಯನ್ನು ಸಾಹಿತ್ಯ ಸಮ್ಮೇಳನಕ್ಕೆ ನಿಯೋಜಿಸಲಾಗಿದೆ.

ಮಂಡ್ಯ ನಗರದಲ್ಲಿ ನಗರ ಸಾರಿಗೆ ಬಸ್ ಉಚಿತವಾಗಿ ಬಿಟ್ಟಿರುವುದರಿಂದ ನಗರದ ಜನತೆಯೂ ಸಹಸ್ರಾರು ಸಂಖ್ಯೆಯಲ್ಲಿ ಭಾಗವ ಹಿಸಿದರು.

ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ಜಿಲ್ಲೆಯ ಬಹುತೇಕ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ವೇದಿಕೆಗೆ ಆಗಮಿಸುತ್ತಿದ್ದಂತೆ ಅಭೂತಪೂರ್ವ ಸ್ವಾಗತ ಕೋರಲಾಯಿತು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!