87ನೇ ಕನ್ನಡ ಸಾಹಿತ್ಯ ಸಮ್ಮೇಳನ| ಬಹುತ್ವದ ಸಂಸ್ಕೃತಿ ಮುಂದುವರೆಯಲಿ; ಗೊ.ರು.ಚನ್ನಬಸಪ್ಪ| Kannada sahitya sammelana

ಮಂಡ್ಯ (Kannada sahitya sammelana): ಭಾರತ ಬಹು ಭಾಷಾ, ಬಹು ಸಂಸ್ಕ್ರತಿ, ಬಹು ಪದ್ಧತಿಗಳ ದೇಶ. ಇದನ್ನು ಉಳಿಸಿಕೊಂಡು ಹೋಗಬೇಕು. ಒಂದೊಂದು ಜನಾಂಗಕ್ಕೂ ಭಾಷೆಯಿದೆ, ಸೊಗಸಿದೆ, ಸೊಗಡಿದೆ, ಸತ್ವವಿದೆ. ಬಹುತ್ವದ ಸಂಸ್ಕೃತಿ ಮುಂದುವರೆಯಬೇಕು ಎಂದು ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರು ಹೇಳಿದರು.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಾಜಮಾತೆ ಕೆಂಪನಂಜಮ್ಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಇಂಗ್ಲಿಷ್ ಕಲಿತರೆ ಮಾತ್ರ ಉದ್ಯೋಗ ಎಂಬ ಭ್ರಮೆ ಪೋಷಕರಲ್ಲಿದೆ. ಸರ್ಕಾರ ಅದನ್ನು ಹೋಗಲಾಡಿಸಬೇಕು. ದ್ವಿಭಾಷಾ ಸೂತ್ರ ಕ್ಷೇಮ, ತ್ರಿಭಾಷಾ ಹೇರುವ ಅಗತ್ಯ ಇಲ್ಲ.

ಬೇರೆ ಜಿಲ್ಲೆಗಳಲ್ಲಿ ನಿರ್ದೇಶನಾಲಯ ಕಚೇರಿಗಳು ಆಗಬೇಕು. ಅಕಾಡೆಮಿ, ಪ್ರಾಧಿಕಾರಗಳು ಇತರೆ ಜಿಲ್ಲೆಗಳಲ್ಲಿ ಇದ್ದರೆ ಭಾವನಾತ್ಮಕ ಸಂಬಂಧ ಬೆಳೆಯುತ್ತದೆ ಎಂದು ಸಮ್ಮೇಳನಾಧ್ಯಕ್ಷರು ಅಭಿಪ್ರಾಯ ವ್ಯಕ್ತಪಡಿಸಿದರು.

12ನೇ ಶತಮಾನದಲ್ಲಿ ಸೃಷ್ಟಿಯಾದ ವಚನ ಸಾಹಿತ್ಯ ಅಂದಿನ ವ್ಯವಸ್ಥೆ ವಿರುದ್ಧದ ಪ್ರತಿಭಟನಾ ಸಾಹಿತ್ಯ. ವಚನ ಸಾಹಿತ್ಯವನ್ನು ವಿಶ್ವವಿದ್ಯಾಲಯಗಳು ಪ್ರಧಾನ ಅಧ್ಯಯನ ವಿಷಯವಾಗಿ ಅಳವಡಿಸಿಕೊಳ್ಳಬೇಕು.

ವಚನ ಸಾಹಿತ್ಯ 20-30 ಅಂತಾರಾಷ್ಟ್ರೀಯ ಭಾಷೆಗಳಿಗೆ ಅನುವಾದ ಆಗಿದ್ದು, ವಚನ ಸಾಹಿತ್ಯದ ಪ್ರಸಾರ ವ್ಯಾಪಕವಾಗಬೇಕು. ಸಮಕಾಲೀನ ಸಮಸ್ಯೆಗಳಿಗೆ ವಚನದಲ್ಲಿ ಉತ್ತರವಿದೆ ಎಂದು ಹೇಳಿದರು.

ಜನಪದ ಸಂಸ್ಕೃತಿಯನ್ನು ಸಂರಕ್ಷಣೆ ಮಾಡಬೇಕು. ಜನಪದ ಕಲೆಗಳ ಪ್ರದರ್ಶನಕ್ಕೆ ಅವಕಾಶ ನೀಡಬೇಕು. ಜನಪದ ಕಲೆಗಳಿಗೆ ಮನ್ನಣೆ ಸಿಗಬೇಕು ಎಂದ ಅವರು, ಹಾವೇರಿಯ ಜಾನಪದ ವಿಶ್ವ ವಿದ್ಯಾಲಯ ಜಗತ್ತಿನ ಏಕಮಾತ್ರ ಜಾನಪದ ವಿಶ್ವವಿದ್ಯಾಲಯ. ಇದು ಪ್ರತಿಷ್ಠೆಯ ಸಂಸ್ಥೆ ಆಗಬೇಕು ಎಂದು ಹೇಳಿದರು.

ನನ್ನ ಆರೋಗ್ಯದ ಗುಟ್ಟಿನ ಬಗ್ಗೆ ಬಹಳಷ್ಟು ಜನರು ಕೇಳುತ್ತಾರೆ. ನನಗೆ ಸಾವಿನ ಬಗ್ಗೆ ಚಿಂತೆಯಿಲ್ಲ. ನಾನು 100 ವರ್ಷ ಬದುಕುತ್ತೇನೆ ಎಂದು ಜ್ಯೋತಿಷಿಯೊಬ್ಬರು ಹೇಳಿದ್ದಾರೆ. 3 ರನ್ ಬಾರಿಸಿದರೆ ಅದು ನಿಜವಾಗುತ್ತದೆ ಎಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ನುಡಿದರು.

ಈ ವೇಳೆ ವಿವಿಧ ಕ್ಷೇತಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಡಾ.ಬಸವರಾಜ್ ನೆಲ್ಲೀಸರ, ಮಾರುತಿ ಶಿಡ್ಲಾಪುರ, ಪ್ರೊ. ಟಿ.ವಿ.ಸುರೇಶ ಗುಪ್ತ, ಡಾ.ಅನಸೂಯಾ ಹೊಂಬಾಳೆ, ಶಂಕರ ಮಲ್ಲಪ್ಪ ಬೈಚಬಾಳ, ಶಾಂತಲಾ ಧರ್ಮರಾಜ್, ಡಾ. ಪಿ.ನಾಗರಾಜು, ಡಾ.ಕುರುವ ಬಸವರಾಜ್, ಪ್ರೊ. ಎಂ.ವೈ.ಶಿವರಾಂ, ಡಾ.ಸಂತೋಷ್ ಹಾನಗಲ್ ಅವರು ಭಾಗವಹಿಸಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!