ದೇವನಹಳ್ಳಿ; ರೂ.49 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ..!| Devanahalli

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಇಂದು ದೇವನಹಳ್ಳಿ (Devanahalli) ಹಾಗೂ ವಿಜಯಪುರ (Vijayapura) ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಗುದ್ದಲಿಪೂಜೆ ನೇರವೇರಿಸಿದರು.

ದೇವನಹಳ್ಳಿ ಟೌನ್ ನಲ್ಲಿ 25 ಕೋಟಿ, ವಿಜಯಪುರದಲ್ಲಿ 14 ಕೋಟಿ ಹಾಗೂ ತಾಲ್ಲೂಕಿನಾದ್ಯಂತ ರಸ್ತೆ ಅಭಿವೃದ್ಧಿಗೆ 04 ಕೋಟಿ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಹಾಗೂ ನವೀಕರಣಕ್ಕಾಗಿ 04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.

ನಂತರ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮಾತನಾಡಿ, ಈಗಾಗಲೇ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್ ನಿಂದ ರಾಣಿ ಸರ್ಕಲ್ ವರೆಗೆ 3.5 ಕಿ.ಮೀ ನಷ್ಟು 4 ಪಥದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 25 ಕೋಟಿ ನೀಡಿದ್ದಾರೆ. ಅದರ ಗುದ್ದಲಿಪೂಜೆ ಇಂದು ನೆರವೇರಿಸಲಾಗಿದೆ.

ವಿಜಯಪುರ ಪಟ್ಟಣದಲ್ಲಿ ಕೋಲಾರ ಜಿಲ್ಲೆಗೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರುವ 5.2 ಕಿ.ಮೀ ರಸ್ತೆಗೆ 25 ಕೋಟಿ ಮಂಜೂರು ಮಾಡಲಾಗಿದ್ದು ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಗೆ ಹೆಚ್ಚುವರಿಯಾಗಿ 15 ಕೋಟಿ ಅವಶ್ಯಕತೆ ಇದ್ದು ಮಂಜೂರು ಮಾಡಲು, ದೇವನಹಳ್ಳಿ ಟೌನ್ ನಲ್ಲಿ ರಸ್ತೆಗಳಿಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲು 04 ಕೋಟಿ ರೂಗಳ ಅವಶ್ಯಕತೆ ಇದೆ ಹಾಗೆಯೇ ತಾಲ್ಲೂಕಿನಾದ್ಯಂತ ರಸ್ತೆಗಳ ಅಭಿವೃದ್ಧಿಗೆ 40 ಕೋಟಿ ರೂಪಾಯಿಗಳ ಅವಶ್ಯಕತೆ ಇದ್ದು, ಮಂಜೂರು ಮಾಡಲು ಲೋಕೋಪಯೋಗಿ ಸಚಿವರಲ್ಲಿ ಮನವಿ ಮಾಡಿದರು.

ಇದಕ್ಕೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸ್ಪಂದಿಸಿ ವಿಜಯಪುರ ರಸ್ತೆಗೆ ತುರ್ತಾಗಿ ಅವಶ್ಯಕತೆ ಇರುವ ಹಣವನ್ನು ಇದೇ ಬಜೆಟ್ ನಲ್ಲಿ ನೀಡಲಾಗುವುದು, ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ ಅವಶ್ಯಕತೆಯಿರುವ 40 ಕೋಟಿ ಪ್ರಸ್ತಾವನೆಯಲ್ಲಿ 20 ಕೋಟಿ ಮೊದಲ ಹಂತದಲ್ಲಿ ನೀಡಲಾಗುವುದು.

2 ನೇ ಹಂತದಲ್ಲಿ 20 ಕೋಟಿ ನೀಡಲಾಗುವುದು ಎಂದರು. ಮುಂದಿನ ದಿನಗಳಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.

ಕಾಮಗಾರಿಗಳ ಶಂಕುಸ್ಥಾಪನೆ ವಿವರ

ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್ ನಿಂದ ರಾಣಿ ಸರ್ಕಲ್ ವರೆಗೆ 25 ಕೋಟಿ ರೂ. ರಸ್ತೆ ಕಾಮಗಾರಿ, ವಿಜಯಪುರ ಪಟ್ಟಣದ ಶಿವನ ಸರ್ಕಲ್ ನಿಂದ ಕಾಂಕ್ರೀಟ್ ರಸ್ತೆ ಶಿಡ್ಲಘಟ್ಟ ಕ್ರಾಸ್ ವರೆಗೆ 5 ಕೋಟಿ ರೂ. (4 ಪಥ)ಕಾಂಕ್ರೀಟ್ ರಸ್ತೆ ಕಾಮಗಾರಿ, ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 207 ರಿಂದ ಕಾರಹಳ್ಳಿ ಸೇರುವ ರಸ್ತೆ ಮರು ಡಾಂಬರೀಕರಣ 157 ಲಕ್ಷ ರೂ. ಕಾಮಗಾರಿ.

ದೇವನಹಳ್ಳಿ ತಾಲೂಕಿನ ನಂದಿ ಗ್ರಾಮದಿಂದ ಆಂದ್ರ ಪ್ರದೇಶ ಗಡಿಯವರೆಗೂ 9 ಕೋಟಿ ಅನುದಾನದ ಕಾಂಕ್ರೀಟ್ ರಸ್ತೆ, ದೇವನಹಳ್ಳಿ ತಾಲೂಕು ಬೆಂಗಳೂರು-ನಂದಿ 4 ಪಥದ (ರಾಜ್ಯ ಹೆದ್ದಾರಿ 104) 5 ಕೋಟಿ ರೂ. ಡಾಂಬರೀಕರಣ ರಸ್ತೆ, ದೇವನಹಳ್ಳಿ ತಾಲೂಕು ರಾಷ್ಟ್ರೀಯ ಹೆದ್ದಾರಿ-7 ಮಾಯಸಂದ್ರ ಸೇರುವ ರಸ್ತೆ 1 ಕೋಟಿ ರೂ. ಕಾಮಗಾರಿ, ದೇವನಹಳ್ಳಿ ತಾಲೂಕು ಬೆಂಗಳೂರು-ನಂದಿ ರಸ್ತೆ 4 ಕೋಟಿ ರೂ. ರಸ್ತೆ ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಗಳಿಗೆ ಲೋಕೋಪಯೋಗಿ ಚಾಲನೆ ನೀಡಿದರು.

ಸಭೆಯಲ್ಲಿ 5 ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಬಯಪ ಅಧ್ಯಕ್ಷ ಶಾಂತ ಕುಮಾರ್, ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್, ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!