ಬೆಂಗಳೂರು: ಅಶ್ಲೀಲ ಪದ ಬಳಕೆ ಕುರಿತು ಸಿಟಿ ರವಿ (CT Ravi) ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ನಡುವಿನ ವಾಗ್ವಾದ ನಿಲ್ಲುವ ಲಕ್ಷಣಗಳೆ ಕಾಣುತ್ತಿಲ್ಲ.
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ನಡೆದ ಘಟನೆಯನ್ನ ಇಬ್ಬರು ವೈಯಕ್ತಿಕವಾಗಿ ತೆಗೆದುಕೊಂಡಿದ್ದು, ಸಿಟಿ ರವಿಗೆ ಲಕ್ಷ್ಮೀ ಹೆಬ್ಬಾಳಕರ್ ಸವಾಲನ್ನು ಹಾಕಿದ್ದಾರೆ.
ರಾಮಾಯಣ, ಮಹಾಭಾರತ ಆಗಿದ್ದು ಮಹಿಳೆಯನ್ನ ಅಪಮಾನ ಮಾಡಿದ್ದಕ್ಕೆ ಅಲ್ಲಿ ಅಪಮಾನ ಮಾಡಿದ ಎಲ್ಲರಿಗೂ ಶಿಕ್ಷೆ ಆಗಿದೆ. ಇಲ್ಲಿಯೂ ಆಗುತ್ತೆ. ಸಿಟಿ ರವಿ ಅವರು ಆ ರೀತಿ ಹೇಳಿಲ್ಲ ಅನ್ನೋದಾದ್ರೆ, ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ. ಆಣೆ ಮಾಡಲಿಕ್ಕೆ ನಾನೂ ನನ್ನ ಕುಟುಂಬ ಸಮೇತವಾಗಿ ಬರ್ತೀನಿ ಎಂದು ಪಂಥಾಹ್ವಾನ ನೀಡಿದ್ದಾರೆ.
ಸಿಟಿ ರವಿ ಈ ರೀತಿ ಅಂದಿದ್ದಾರೆ ಅಂತಾ ನಾನು ನಾಟಕ ಮಾಡೋದಕ್ಕೆ ಆಗುತ್ತಾ? ಸದನದಲ್ಲಿ ನಿಂತು ಸುಳ್ಳು ಆರೋಪ ಮಾಡೋದಕ್ಕೆ ಆಗುತ್ತಾ? ಸುಳ್ಳು ಹೇಳೋದಕ್ಕೆ ನನಗೇನು ಹುಚ್ಚಾ? ನಾಟಕವಾಡಿ ರಾಜಕಾರಣದಲ್ಲಿ ನಾನು ಏನಾದ್ರೂ ಗಳಿಸೋದು ಇದ್ಯಾ? ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆಗಳ ಸುರಿ ಮಳೆಗೈದಿದ್ದಾರೆ.