
ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ (Ghati Subrahmanya) ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆ ಸಾರಿಗೆ ಮತ್ತು ಮುಜರಾಯಿ ಸಚಿವ ಹಾಗೂ ಪ್ರಾಧಿಕಾರದ ಅಧ್ಯಕ್ಷ ರಾಮಲಿಂಗರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.
ಜನವರಿ 5ರಂದು ನಡೆಯಲಿರುವ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಒತ್ತು ನೀಡಲು ಸಚಿವರು ಸೂಚಿಸಿದರು.
ಸಭೆಯಲ್ಲಿ ಧಾಮಿಕ ದತ್ತಿ ಆಯುಕ್ತ ವೆಂಕಟೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎನ್.ಶಿವಶಂಕರ, ಉಪ ಕಾರ್ಯದರ್ಶಿ ಸತ್ಯವತಿ, ಪ್ರಾಧಿಕಾರದ ಕಾರ್ಯದರ್ಶಿ ಎಂ.ನಾರಾಯಣಸ್ವಾಮಿ, ಪ್ರಧಾನ ಅರ್ಚಕ ಆರ್.ಸುಬ್ರಹ್ಮಣ್ಯ ಮತ್ತಿತರರಿದ್ದರು.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						