ಸೇನಾ ವಾಹನ Accident..!; ಕರ್ನಾಟಕದ 3 ಯೋಧರು ಹುತಾತ್ಮ

ನವದೆಹಲಿ: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಚಲಿಸುತ್ತಿದ್ದ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಬಿದ್ದ (Accident) ಪರಿಣಾಮ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಈ ದುರಂತದಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ 25 ವರ್ಷ ಮಹೇಶ್ ಮರಿಗೊಂಡ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್ (32 ವರ್ಷ), ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದಯಾನಂದ ತಿರಕಣ್ಣನವರ (45 ವರ್ಷ) ಮೃತಪಟ್ಟಿದ್ದಾರೆ.

11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ಸೋಮವಾರ (ಡಿ.24)ರ ಸಂಜೆ 5.30ರ ಸುಮಾರಿಗೆ ನಿಲಂ ಪ್ರಧಾನ ಕಚೇರಿಯಿಂದ ಎಲ್‌ಒಸಿ ಮೂಲಕ ಪೂಂಚ್​ ಜಿಲ್ಲೆಯ ಬನೋಯ್‌ ಘರೋವಾ ಪೋಸ್ಟ್‌ಗೆ ತೆರಳುತ್ತಿತ್ತು.

ಮಾರ್ಗ ಮಧ್ಯೆ ಘರೋವಾ ಪ್ರದೇಶದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದರು. ಆ ವಾಹನವು ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿತ್ತು.

ಘಟನೆಯಲ್ಲಿ ಕರ್ನಾಟಕದ ಮೂವರು ಸೇರಿದಂತೆ ಒಟ್ಟು ಐವರು ಹುತಾತ್ಮರಾಗಿದ್ದಾರೆ. 12 ಜನ ಸೈನಿಕರಿಗೆ ಗಂಭೀರ ಗಾಯಗಳಾಗಿವೆ.

ಸೇನಾ ವಾಹನವು ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಪೋಸ್ಟ್‌ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ ಯೋಧರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಸಂತಾಪ;
ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಜಮ್ಮು ಕಾಶ್ಮೀರದ ಪೂಂಚ್​ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕರ್ನಾಟಕದ ಯೋಧರಾದ ಧರ್ಮರಾಜ ಸುಭಾಷ ಖೋತ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.

ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ.

ಎಲ್ಒಪಿ ಆರ್.ಅಶೋಕ್ ಸಂತಾಪ; ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಒಟ್ಟು ಐವರು ಯೋಧರು ಮೃತಪಟ್ಟಿರುವ ಸುದ್ದಿ ತೀವ್ರ ನೋವುಂಟು ಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಕರ್ನಾಟಕದ ಯೋಧರು ಹುತಾತ್ಮರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ಈ ದುಃಖವನ್ನ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!