ಬೆಂಗಳೂರು: ಅತ್ಯಾಚಾರ, ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಎದುರಿಸಿ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿ ರಿಲೀಫ್ ಬಿಜೆಪಿ ಶಾಸಕ ಮುನಿರಾತ್ನ (Munirathna) ಅವರ ಮೇಲೆ ಇಂದು ಮೊಟ್ಟೆ ಎಸೆಯಲಾಗಿದೆ.
ಇಂದು 42ಮೇ ವಾರ್ಡ್ ಲಕ್ಷ್ಮೀದೇವಿ ನಗರದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮುನಿರತ್ನ ಅವರ ಮೇಲೆ ಬೆಂಗಳೂರಿನಲ್ಲಿ ಮೊಟ್ಟೆ ಎಸೆಯಲಾಗಿದೆ.
ಈ ಘಟನೆಯಿಂದಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಮುನಿರತ್ನ ಬೆಂಬಲಿಗರು ತಮ್ಮ ಕಾರಿಗೆ ಹಾನಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಡ ಆರೋಪಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಇದೀಗ ಈ ಪ್ರಕರಣ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ.