
ಕೋಲಾರ (Kidnap case): ಮಕ್ಕಳನ್ನು ಕಿಡ್ನಾಪ್ ಮಾಡಿ, ಹಣಕ್ಕೆ ಬೇಡಿಕೆ ಇಟ್ಟಿದ್ದ ದೂರಿನ ಕುರಿತು ಕಾರ್ಯಾಚರಣೆ ನಡೆಸಿದ ಪೊಲೀಸರು ಓರ್ವ ಜ್ಯೋತಿಷಿ ಬಂಧಿಸಿ, 4 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ.
ಬಂಗಾರಪೇಟೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದಾಗಿ ಅಪಹರಣಗೊಂಡಿದ್ದ ನಾಲ್ಕು ಮಕ್ಕಳನ್ನು ರಕ್ಷಿಸಲಾಗಿದ್ದು, ರಾಯಚೂರು ಮೂಲದ ಜ್ಯೋತಿಷಿ ವಿಷ್ಣು ರಾವ್ ಎಂಬಾತನನ್ನು ಬಂಧಿಸಲಾಗಿದೆ.
ಬಂಗಾರಪೇಟೆಯ ದೇಶಿಹಳ್ಳಿಯ ನಾಲ್ವರು ಬಾಲಕರನ್ನು ವಿಷ್ಣು ರಾವ್ ಕಿಡ್ನಾಪ್ ಮಾಡಿ, ಮಕ್ಕಳನ್ನು ಲಾಡ್ಜ್‌ನಲ್ಲಿ ಕೂಡಿ ಹಾಕಿ ಪೋಷಕರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದನು.
ಅಪಹರಣಗೊಂಡ ಬಾಲಕ ಲಿಖಿತ್ ತಾಯಿ ಸುಮಂಗಲಿ ಎನ್ನುವವರು ತನ್ನ ಮಗ ಲಿಖಿತ್ ಹಾಗೂ ಮೂವರು ಬಾಲಕರು ಅಪಹರಣಗೊಂಡಿರುವ ಕುರಿತು ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಬಂಗಾರಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ರಕ್ಷಿಸಿದ್ದಾರೆ.
ರಾಯಚೂರು ಮೂಲದ ಜ್ಯೋತಿಷಿ ವಿಷ್ಣು ರಾವ್, ನಿಮ್ಮ ಟೈಂ ಸರಿಯಿಲ್ಲ ಎಂದು ವಾಮಾಚರಕ್ಕೆ ಮುಂದಾಗಿದ್ದ ಎಂದು ತಿಳಿದುಬಂದಿದೆ.
ಸ್ವಾಮೀಜಿ ಬಳಿಯಿದ್ದ ನಿಂಬೆ ಹಣ್ಣು ಮೂಳೆ ಸೇರಿದಂತೆ ವಾಮಾಚರಕ್ಕೆ ಬಳಸಿದ್ದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						