Christmas 2024: ಇಂದು ಶಾಂತಿ, ಸೌಹಾರ್ದತೆ ಸಾರುವ ಕ್ರಿಸ್‌ಮಸ್​ ಹಬ್ಬ

Christmas 2024: ಇಂದು ವಿಶ್ವದಾದ್ಯಂತ ಕ್ರಿಸ್​ಮಸ್​​ ಹಬ್ಬವನ್ನು ಆಚರಿಸಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

ಎಲ್ಲೆಲ್ಲೂ ಕ್ರಿಸ್‌ಮಸ್‌ನ ಸಂಭ್ರಮ ಜೋರಾಗಿದೆ. ಪ್ರತಿವರ್ಷ ಪ್ರಪಂಚದಾದ್ಯಂತ ಕ್ರಿಸ್‌ಮಸ್‌ ಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕ್ರಿಸ್‌ಮಸ್ ಎಂದರೆ ಎಲ್ಲರೂ ಒಟ್ಟಾಗಿ ಸಂತೋಷ, ಖುಷಿಯ ಕ್ಷಣಗಳನ್ನು ಕಳೆಯುವುದು. ಕ್ರಿಸ್‌ಮಸ್‌ ಹಳೆಯ ವರ್ಷಕ್ಕೆ ಅಂತ್ಯ ಹಾಡಿ, ಹೊಸ ವರ್ಷವನ್ನು ಸ್ವಾಗತಿಸುವ ಸಮಯವೂ ಹೌದು.

ಡಿ.24 ರಂದು ರಾತ್ರಿ ಮಧ್ಯರಾತ್ರಿಯಿಂದಲೇ ಜಿಲ್ಲೆಯಾದ್ಯಂತ ಎಲ್ಲ ಚರ್ಚ್​ಗಳಲ್ಲಿ ಪವಿತ್ರ ದಿವ್ಯ ಬಲಿಪೂಜೆ, ಪ್ರಾರ್ಥನೆ ನಡೆಯಿತು. ವಿವಿಧ ಚರ್ಚ್​ಗಳ ಉಸ್ತುವಾರಿ ಹೊಂದಿರುವ ಆಯಾ ಪ್ರದೇಶಗಳ ಬಿಷಪ್​ಗಳು ಹಾಗೂ ಧರ್ಮಗುರುಗಳ ನೇತೃತ್ವದಲ್ಲಿ ಕ್ರಿಸ್​ಮಸ್​​​ ವಿಶೇಷ ಪೂಜೆಗಳು ನೆರವೇರಿದವು.

ಏಸುಕ್ರಿಸ್ತ ಹುಟ್ಟಿದ ದಿನವೇ ಕ್ರಿಸ್​ಮಸ್​ ಹಬ್ಬ. ಈ ದಿನವನ್ನು ಕ್ರಿಸ್ತ ಜಯಂತಿ ಎಂದೂ ಆಚರಿಸಲಾಗುತ್ತದೆ. ಜಗತ್ತಿನಾದ್ಯಂತ ಪ್ರತಿ ವರ್ಷ ಡಿಸೆಂಬರ್​ 25 ರಂದು ಈ ಹಬ್ಬ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ.

ಕ್ರೈಸ್ತ ಧರ್ಮದ ಪವಿತ್ರ ಗ್ರಂಥ ಬೈಬಲ್​ನ ಪ್ರಕಾರ ಯೇಸುಕ್ರಿಸ್ತ, ಮೇರಿ ಹಾಗೂ ಜೋಸೆಫರ ಮಗನಾಗಿ ಜೆರುಸಲೇಮ್​ ಪಟ್ಟಣದ ಬೆತ್ಲಹೆಮ್​​ ಎಂಬ ಊರಿನಲ್ಲಿ ಜನಿಸಿದರು. ರೋಮನ್​ ಜನಗಣತಿಯ ಪ್ರಕಾರ ಮೇರಿ ಹಾಗೂ ಜೋಸೆಫ್​ ದಂಪತಿ ತಮ್ಮ ಹೆಸರನ್ನು ನೋಂದಾಯಿಸಲು ಹೋಗುತ್ತಿದ್ದ ವೇಳೆ ಮೇರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅಲ್ಲೇ ಇದ್ದ ಗೋದಲಿಯೊಂದರಲ್ಲಿ ಆಶ್ರಯ ಪಡೆದು, ಯೇಸುಕ್ರಿಸ್ತನಿಗೆ ಜನ್ಮ ನೀಡಿದ್ದರು.

ಯಹೂದ್ಯ ಧರ್ಮದ ಪ್ರಕಾರ ಪ್ರವಾದನೆಗಳನ್ನು ನೆರವೇರಿಸಲು ಡೇವಿಡ್‌ನ ವಂಶದಲ್ಲಿ ಮಿಸಿಹಾ ಅಥವಾ ಮೆಸ್ಸಾಯ ಎನ್ನುವ ಅರ್ಥದ ದೇವರ ದೂತ, ರಕ್ಷಕ ಬರುವನೆಂಬ ನಂಬಿಕೆಯಿತ್ತು. ಈ ದೇವರ ದೂತನೇ ಯೇಸುಕ್ರಿಸ್ತ ಎಂದು ಕ್ರೈಸ್ತರು ಭಾವಿಸುತ್ತಾರೆ.

ಗ್ರೀಕ್ ಲಿಪಿಯಲ್ಲಿ ಕ್ರಿಸ್ತನ ಮೊದಲ ಅಕ್ಷರವು ಇಂಗ್ಲಿಷಿನ ಎಕ್ಸ್​ನಂತೆ ತೋರುವುದರಿಂದ ಕೆಲವರು ಎಕ್ಸ್​ಮಸ್ ಎಂದು ಬರೆಯುತ್ತಿದ್ದರು. ಅದು ಮುಂದುವರೆದು ಕ್ರಿಸ್ಮಸ್ ಆಗಿದೆ ಎನ್ನಲಾಗಿದೆ.

ಕ್ರಿಸ್​ಮಸ್​​ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ಸಾಮಾನ್ಯವಾಗಿ ಎಲ್ಲಾ ಮನೆಗಳಲ್ಲೂ ಕ್ರಿಸ್​ಮಸ್​ ವೃಕ್ಷವನ್ನು ತಂದು ನಿಲ್ಲಿಸುವುದು ವಾಡಿಕೆಯಾಗಿದೆ. ಕ್ರಿಸ್​ಮಸ್​​ ವೃಕ್ಷಕ್ಕೆ ದೀಪಗಳು ಹಾಗೂ ಇತರ ವಸ್ತುಗಳಿಂದ ಅಲಂಕಾರ ಮಾಡಲಾಗುತ್ತದೆ.

ಅನೇಕ ಕಡೆಗಳಲ್ಲಿ ಮನೆಯ ಹೊರಗಡೆ ಕ್ರಿಸ್ತನ ಜನನ ಸಮಯದಲ್ಲಿ ಗೊಲ್ಲರಿಗೆ ಮಾರ್ಗದರ್ಶಿಯಾಗಿ ಗೋಚರಿಸಿದ ನಕ್ಷತ್ರದ ಆಕೃತಿಗಳನ್ನು, ನಕ್ಷತ್ರ ದೀಪಗಳನ್ನು ಕಟ್ಟುವುದು ಪಾರಂಪರಿಕೆಯಾಗಿ ಮುಂದುವರಿದುಕೊಂಡು ಬಂದಿದೆ. ಅದಷ್ಟೇ ಅಲ್ಲದೆ ಕ್ರಿಸ್​ಮಸ್​​ ಹಬ್ಬಕ್ಕೆ ಚರ್ಚ್​ಗಳು ಹಾಗೂ ಮನೆಗಳ ಮುಂದೆ ಗೋದಲಿಗಳ ನಿರ್ಮಾಣ ಮಾಡಲಾಗುತ್ತದೆ.

ಹಬ್ಬಕ್ಕೆ ಇನ್ನೇನು ಒಂದು ತಿಂಗಳ ಇರುವಾಗಲೇ ಇದರ ತಯಾರಿ ಪ್ರಾರಂಭವಾಗುತ್ತದೆ. ಇದರ ಜೊತೆಗೆ ಕ್ರಿಸ್ಮಸ್​ ಪ್ರಯುಕ್ತ ಡಿಸೆಂಬರ್​ ತಿಂಗಳ ಆರಂಭದಿಂದಲೇ ವೃತಾಚರಣೆ ಆರಂಭವಾಗುತ್ತದೆ.

ಡಿಸೆಂಬರ್​ ತಿಂಗಳ ಕೊನೆಯ ವಾರದಲ್ಲಿ ಮನೆ ಮನೆಗೆ ತೆರಳಿ ಕ್ರಿಸ್​ಮಸ್​​ ಸಂದೇಶ ಸಾರುವ ಕ್ಯಾರಲ್​ ಹಾಡುಗಳನ್ನು ಹಾಡಲಾಗುತ್ತದೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]