Dr.Shivarajkumar: ಶಿವಣ್ಣನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ; Video ನೋಡಿ

ವಾಷಿಂಗ್ಟನ್; ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ನಟ, ಡಾ.ಶಿವರಾಜ್‌ಕುಮಾರ್ (Dr.Shivarajkumar) ಅವರಿಗೆ ಅಮೇರಿಕಾದಲ್ಲಿ ಶಸ್ತ್ರಚಿಕಿತ್ಸೆ ಪೂರ್ಣಗೊಂಡಿದೆ.

ಸ್ಥಳೀಯ ಕಾಲಮಾನ ಬೆಳಗ್ಗೆ 8 ಗಂಟೆ, ಭಾರತೀಯ ಕಾಲಮಾನದ ಪ್ರಕಾರ ಸಂಜೆ 6 ಗಂಟೆಗೆ ಶಿವಣ್ಣ ಅವರನ್ನು ಅಪರೇಷನ್ ಥಿಯೇಟರ್‌ಗೆ ಕರೆದುಕೊಂಡು ಹೋಗಲಾಗಿತ್ತು.

ಅಮೇರಿಕಾದ ಫ್ಲೋರಿಡಾದ ಮಿಯಾಮಿ ಕ್ಯಾನ್ಸ‌ರ್ ಇನ್ಸಿಟ್ಯೂಟ್‌ಗೆ ದಾಖಲಾಗಿದ್ದ ಶಿವರಾಜ್ ಕುಮಾರ್ ಅವರಿಗೆ ಸತತ 6 ಗಂಟೆಗಳ ಕಾಲ ಪಿತ್ತಕೋಶ ಸರ್ಜರಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಮೆರಿಕದಿಂದ ವೈದ್ಯರು ಮಾಹಿತಿ ನೀಡಿದ್ದಾರೆ.

ಡಾ.ಮುರುಗೇಶ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅಮೇರಿಕಾ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಆಪರೇಷನ್ ಮುಗಿದಿದೆ. ದೇವರ ಆಶೀರ್ವಾದ, ಎಲ್ಲರ ಹಾರೈಕೆಯಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಎಂದು ಆಮರಿಕದಿಂದ ಡಾ.ಮುರುಗೇಶ್ ಮಾಹಿತಿ ನೀಡಿದ್ದಾರೆ.

ಶಸ್ತ್ರಚಿಕಿತ್ಸೆ ಬಳಿಕ ವೀಡಿಯೋ ಮೂಲಕ ಮಾತನಾಡಿದ ಅವರು, ದೇವರ ದಯೆಯಿಂದ ಹಾಗೂ ಹಲವರ ಆಶೀರ್ವಾದ ಹಾಗೂ ಪ್ರಾರ್ಥನೆಯಿಂದ ಸರ್ಜರಿ ಯಶಸ್ವಿಯಾಗಿದೆ. ಪ್ರಮುಖ ಹಂತ ಪೂರ್ಣಗೊಂಡಿದೆ. ಶಿವಣ್ಣ ಚೆನ್ನಾಗಿ ಸ್ಪಂದಿಸಿದ್ದಾರೆ. ಸರ್ಜರಿ ನಂತರವೂ ಆರಾಮಾಗಿದ್ದಾರೆ. ಅವರು ಶೀಘ್ರವೇ ಸಂಪೂರ್ಣ ಚೇತರಿಕೆ ಕಾಣಲಿದ್ದಾರೆ. ನಿಮ್ಮ ಬೆಂಬಲಕ್ಕೆ ಧನ್ಯವಾದ ಎಂದು ಹೇಳಿದ್ದಾರೆ.

ಸದ್ಯ ಐಸಿಯುನಲ್ಲಿರುವ ಶಿವರಾಜ್ ಕುಮಾರ್‌ಗೆ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ. 10 ದಿನಗಳ ಕಾಲ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಇರಲಿದ್ದಾರೆ. ಶಿವರಾಜ್ ಕುಮಾರ್ ಆರೋಗ್ಯದ ಕುರಿತು ತೀವ್ರ ನಿಗಾವಹಿಸಲಾಗುತ್ತದೆ. ಬಳಿಕ ಶಿವರಾಜ್‌ಕುಮಾರ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಆಪರೇಷನ್ ಗೆ ತೆರಳುವ ಮುನ್ನ ತನ್ನೆಲ್ಲಾ ಆಪ್ತರೊಂದಿಗೆ ಶಿವರಾಜ್ ಕುಮಾರ್ ಮಾತುಕತೆ ನಡೆಸಿದ್ದಾರೆ. ತಮ್ಮ ಆತ್ಮೀಯ ಗೆಳೆಯರು, ಸಂಬಂಧಿಕರು, ಅಭಿಮಾನಿಗಳ ಜೊತೆಗೆ ಫೋನ್‌ನಲ್ಲಿ ಮಾತನಾಡಿದರು.

ತಾವು ಅಮೆರಿಕದಲ್ಲಿರುವಾಗ ಬೆಂಗಳೂರಿನಲ್ಲಿರುವ ತಮ್ಮ ಮನೆಯನ್ನು ನೋಡಿಕೊಳ್ಳುತ್ತಿರುವ ಮ್ಯಾನೇಜ‌ರ್ ಹಾಗೂ ಮನೆಯ ಕೆಲಸದವರೊಂದಿಗೂ ವಿಡಿಯೋ ಕಾಲ್ ಮಾಡಿ ಮಾತುಕತೆ ನಡೆಸಿದರು. ಎಲ್ಲರಿಗೂ ತಾವು ಇನ್ನು ಕೆಲವೇ ನಿಮಿಷಗಳಲ್ಲಿ ಆಪರೇಷನ್ ಗೆ ಹೋಗುತ್ತಿದ್ದು, ಶೀಘ್ರವೇ ಗುಣಮುಖರಾಗಿ ಬೆಂಗಳೂರಿಗೆ ಮರಳುವುದಾಗಿ ತಿಳಿಸಿದರು.

ಸಿಎಂ ಕರೆ

ಆಪರೇಷನ್‌ಗೂ ಮುನ್ನ ನಿನ್ನೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿವರಾಜ್‌ ಕುಮಾರ್ ಅವರಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಆನಂತರ ಟ್ವಿಟ್ ಮಾಡಿರುವ ಸಿಎಂ, ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ ಎಂದು ತಿಳಿಸಿದ್ದರು.

ನನಗೆ ತಿಳಿದಂತೆ ಶಿವರಾಜ್‌ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಡಾ.ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ.ಶಿವರಾಜ್‌ ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ ಎಂದು ತಿಳಿಸಿದ್ದಾರೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]