Daily story: ಹರಿತಲೇಖನಿ ದಿನಕ್ಕೊಂದು ಕಥೆ: ಶಿಕ್ಷೆ

Daily story: ಈ ಪ್ರಪಂಚದಲ್ಲಿ ಅನೇಕ ಜನರು ತಪ್ಪು ಮಾಡಿದಾಗ ಶಿಕ್ಷೆಗೆ ಒಳಗಾಗುವುದುಂಟು. ಶಿಕ್ಷೆಯ ಉದ್ದೇಶ-ಶಿಕ್ಷ ಣವೇ ಆಗಿದೆ. ಒಮ್ಮೆ ತಪ್ಪು ಮಾಡಿದವನು ಮುಂದಕ್ಕೆಂದೂ ಅಂತಹ ತಪ್ಪು ಮಾಡದಿರುವಂತಹ ಶಿಕ್ಷಣ ನೀಡುವುದಕ್ಕಾಗಿ ನಮ್ಮ ಆಡಳಿತ ವ್ಯವಸ್ಥೆಯಲ್ಲಿ

ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಗಳಿವೆ. ಇದರಿಂದ ನಮ್ಮ ಸಮಾಜವನ್ನು, ಜನಜೀವನವನ್ನು ಸರಿ ಮಾರ್ಗದಲ್ಲಿ ಮುನ್ನಡೆಸುವಂತಹ ಕೆಲಸ ಸಾಧ್ಯ. ಈ ಬಗೆಯ ನ್ಯಾಯಾಂಗ ಮಹತ್ವವನ್ನು ನಿರೂಪಿಸುವ ಒಂದು ಪ್ರಸಂಗ ಇಲ್ಲಿದೆ.

ಚೀನಾ ದೇಶದಲ್ಲಿ ಒಬ್ಬ ಚಿಂತಕರ ಪ್ರಸಿದ್ಧಿಯನ್ನು ಕೇಳಿ ಅಲ್ಲಿಯ ಅರಸನು ಅವರನ್ನು ತನ್ನ ರಾಜ್ಯದ ನ್ಯಾಯಾಧೀಶರನ್ನಾಗಿ ನೇಮಕ ಮಾಡಿದನು. ಈ ನ್ಯಾಯಾಧೀಶರು ಸೂಕ್ತ ನ್ಯಾಯ ತೀರ್ಪುಗಳಿಂದಾಗಿ ಬಹು ವಿಖ್ಯಾತರಾದರು.

ಅಲ್ಲಿಯ ರಾಜಧಾನಿಯಲ್ಲಿ ಒಬ್ಬ ಶ್ರೀಮಂತ ವ್ಯಾಪಾರಿಯ ಬಳಿ ಸಾಕಷ್ಟು ಸಂಪತ್ತು ಇತ್ತು. ಇದೆಲ್ಲವೂ ಬಡ ಜನರ ಶೋಷಣೆಯಿಂದ ಸಂಗ್ರಹಿಸಿದ್ದು, ಅದರ ರಕ್ಷ ಣೆಗಾಗಿ ಬಲಿಷ್ಠ ರಕ್ಷ ಕರನ್ನೂ ನೇಮಿಸಿಕೊಂಡಿದ್ದ. ಹಾಗಿದ್ದರೂ ಒಮ್ಮೆ ಕಳ್ಳತನ ನಡೆದೇ ಬಿಟ್ಟಿತು ಹಾಗೂ ಕಳ್ಳನನ್ನು ಬಂಧಿಸಲಾಯಿತು.

ಈ ಕಳ್ಳನನ್ನು ಸುಪ್ರಸಿದ್ಧ ನ್ಯಾಯಾಧೀಶರೆದುರು ಹಾಜರುಪಡಿಸಿದಾಗ ಆತನು ತನ್ನ ಕಳ್ಳತನದ ಅಪರಾಧವನ್ನು ಒಪ್ಪಿಕೊಂಡದ್ದಲ್ಲದೆ, ಈ ಹಿಂದೆ ಮಾಡಿದ್ದ ಕಳ್ಳತನಗಳನ್ನೂ ಒಪ್ಪಿಕೊಂಡನು. ಆ ಕಳ್ಳನಿಗೆ ಒಂದು ವರ್ಷದ ಜೈಲು ಶಿಕ್ಷೆಯನ್ನು ವಿಧಿಸಿದ ನ್ಯಾಯಾಧೀಶರು ಶ್ರೀಮಂತ ವ್ಯಾಪಾರಿಯನ್ನು ಕರೆಸಿ, ಆತನು ಧನ ಸಂಗ್ರಹ ಮಾಡಿದ ವಿಧಾನದ ಬಗ್ಗೆ ಪ್ರಶ್ನಿಸತೊಡಗಿದರು. ಆದರೆ ತನ್ನ ಗುಟ್ಟು ಬಿಡಲೊಪ್ಪದ ಆ ವ್ಯಾಪಾರಿ ‘ಎಲ್ಲವೂ ನನ್ನ ವ್ಯಾಪಾರದ ಫಲವಾಗಿದೆ’ ಎಂದು ವಾದಿಸಿದನು. ಬಡವರ ಶೋಷಣೆಯ ತಪ್ಪನ್ನು ಒಪ್ಪಿಕೊಳ್ಳಲೇ ಇಲ್ಲ.

ನ್ಯಾಯಾಧೀಶರು ವ್ಯಾಪಾರಿಗೆ ಎರಡು ವರ್ಷಗಳ ಶಿಕ್ಷೆಯನ್ನು ವಿಧಿಸಿದರು. ಸಿಟ್ಟುಗೊಂಡ ವ್ಯಾಪಾರಿ ಪ್ರಶ್ನಿಸಿದ- ‘ನೀವು ಕಳ್ಳನಿಗೆ ಒಂದು ವರ್ಷ ಶಿಕ್ಷೆ ವಿಧಿಸಿದರೆ, ನನಗೇಕೆ ಎರಡು ವರ್ಷ ವಿಧಿಸುತ್ತೀರಿ?’. ನ್ಯಾಯಾಧೀಶರು ಸಮಾಧಾನದಿಂದ ಉತ್ತರಿಸಿದರು- ‘ಆ ಕಳ್ಳನು ತಪ್ಪನ್ನು ಒಪ್ಪಿಕೊಂಡನು. ಆದ್ದರಿಂದ ಅವನಲ್ಲಿ ಹೃದಯ ಪರಿವರ್ತನೆ ಸಾಧ್ಯತೆ ಇದೆ. ಆದರೆ ನೀವು ಒಪ್ಪಿಕೊಳ್ಳಲೇ ಇಲ್ಲ. ಆದ್ದರಿಂದ ಈ ಶಿಕ್ಷೆಯಿಂದ ನಿಮಗಾವ ಶಿಕ್ಷ ಣವೂ ಸಿಗಲಾರದು’ ಎಂದಾಗ ವ್ಯಾಪಾರಿ ತಲೆ ತಗ್ಗಿಸಿದ.

ಈ ಪ್ರಪಂಚದಲ್ಲಿ ಮಾನವನು ಶಾಲಾ-ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಪಡೆಯುವ ಶಿಕ್ಷ ಣಕ್ಕಿಂತ ಬದುಕೆಂಬ ವಿದ್ಯಾಲಯದಲ್ಲಿ ಪಡೆಯುವ ಶಿಕ್ಷ ಣವು ಹೆಚ್ಚು ಮೌಲ್ಯಯುತವಾದುದೇ ಆಗಿದೆ. ಕಾನೂನು ಕಟ್ಟಳೆ, ರೀತಿ-ರಿವಾಜು, ನೀತಿ- ನಿಯಮಗಳನ್ನು ಮೀರಿದವರಿಗೆ ಸರಕಾರ ಇಲ್ಲವೇ ಸಮಾಜವು ನೀಡುವ ಶಿಕ್ಷೆಯೆಂದರೆ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟು, ಭವಿಷ್ಯದಲ್ಲೆಂದೂ ಅಂತಹ ತಪ್ಪು ಮಾಡದೆ ಸಭ್ಯ ನಾಗರಿಕರಾಗಿ ಬದುಕೆಂಬ ಪ್ರೇರಣೆ ನೀಡುವ ಹಾಗೆ ಪರಿವರ್ತನೆ ಮಾಡುವ ಉಜ್ವಲ ಶಿಕ್ಷ ಣವೇ ಆಗಿದೆ. ಇಂತಹ ವ್ಯಕ್ತಿತ್ವ ಪರಿವರ್ತನೆಯ ಬಗ್ಗೆ ಅಭಿಮಾನ ಪಡಬೇಕಾಗಿದೆ.

ಕೃಪೆ: ಡಾ.ಡಿ.ವೀರೇಂದ್ರ ಹೆಗ್ಗಡೆ. (ಸಾಮಾಜಿಕ ಜಾಲತಾಣದಲ್ಲಿನ ಸಂಗ್ರಹ ಚಿತ್ರ ಬಳಸಲಾಗಿದೆ)

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!