
ದೊಡ್ಡಬಳ್ಳಾಪುರ (Doddaballapura); ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ವಿ.ಎಸ್.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ನಗರಸಭೆ ಸಭಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯಲ್ಲಿ ವಿ.ಎಸ್.ರವಿಕುಮಾರ್ ಅವರು, ಎರಡನೇ ಬಾರಿಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದರು.
ಇದನ್ನೂ ಓದಿ: Doddaballapura; ಮಿತಿಮೀರಿದ ಭ್ರಷ್ಟಾಚಾರ..!: ಅಧಿಕಾರಿಗಳ ಗ್ರಹಚಾರ ಬಿಡಿಸಿದ ಸಚಿವ ಕೃಷ್ಣ ಬೈರೇಗೌಡ.. Video ನೋಡಿ
ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಹಿರಿಯ ಮುಖಂಡ ಹರೀಶ್ ಗೌಡ, ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ತನ ಪ್ರಭುದೇವ, ವಕ್ತಾರ ಕುಂಟನಹಳ್ಳಿ ಮಂಜುನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						