
ಬೆಂಗಳೂರು Weather today: ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.26ರಂದು ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಾಗಲ ಕೋಟೆ, ಗದಗ, ಬಳ್ಳಾರಿ, ಚಿತ್ರದುರ್ಗ, ಚಾಮರಾ ಜನಗರ, ಮೈಸೂರು, ರಾಮನಗರ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿ.27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಾಮರಾಜನಗರ, ಕೊಡಗು, ದಾವಣಗೆರೆ, ಮೈಸೂರು, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆ ಹೊರತು ಪಡಿಸಿ, ರಾಜ್ಯದಾದ್ಯಂತ ಒಣ ಹವಾಮಾನ ಇರಲಿದೆ.
ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು/ ದಟ್ಟ ಮಂಜು ಇರುವ ಸಾಧ್ಯತೆಯಿದೆ.
ಡಿ.28, 29, 30 ಹಾಗೂ 31ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						