Manmohan Singh: ಡಾ.ಮನಮೋಹನ್ ಸಿಂಗ್ ಅವರನ್ನು ನಾನು ಬಹಳ ಟೀಕೆ ಮಾಡಿದ್ದೆ. ಆದರೆ‌‌‌.. ಹೆಚ್.ಡಿ.ದೇವೇಗೌಡ ಗುಣಗಾನ

ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ (Manmohan Singh) ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಮರ್ಪಣೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದು ಅತ್ಯಂತ ದುಃಖದ ದಿನ. ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ನಾನು ಮನಮೋಹನ್ ಸಿಂಗ್ ಅವರನ್ನು ನೋಡಿದ್ದು 1991ರಲ್ಲಿ, ಲೋಕಸಭೆಯಲ್ಲಿ. ನಾನು ಕೂಡ ಮೊದಲ ಬಾರಿಗೆ ಲೋಕಸಭೆಗೆ ಹೋಗಿದ್ದೆ. ಅವರು ಪಿ.ವಿ.ನರಸಿಂಹ ರಾವ್ ಸರಕಾರದಲ್ಲಿ ಆರ್ಥಿಕ ಸಚಿವರಾಗಿದ್ದರು.

ನಮ್ಮ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಅನೇಕ ಪ್ರಯತ್ನಗಳನ್ನು ಮಾಡಿದರು. ಆ ಸಂದರ್ಭದಲ್ಲಿ ಆರ್ಥಿಕವಾಗಿ ದೇಶದ ಸ್ಥಿತಿ ಬಹಳ ಹದಗೆಟ್ಟಿತ್ತು. ಅದಕ್ಕೂ ಹಿಂದೆ 130 ಟನ್ ಚಿನ್ನವನ್ನು ಒತ್ತೆ ಇಡಲಾಗಿತ್ತು. ಅಂತಹ ಭೀಕರ ಪರಿಸ್ಥಿತಿ ಇತ್ತು. ಆ ಸನ್ನಿವೇಶದಲ್ಲಿ ಮನಮೋಹನ್ ಸಿಂಗ್ ಆರ್ಥಿಕ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದರು ಎಂದು ಮಾಜಿ ಪ್ರಧಾನಿಗಳು ನೆನಪು ಮಾಡಿಕೊಂಡರು.

ಮನಮೋಹನ್ ಸಿಂಗ್ ಅವರನ್ನು ನಾನು ಬಹಳ ಟೀಕೆ ಮಾಡಿದ್ದೆ. ಅವರ ನೀತಿಗಳನ್ನು ಪ್ರಶ್ನೆ ಮಾಡಿದ್ದೆ. ಖಾಸಗೀಕರಣ, ವಿದೇಶದಿಂದ ಹಣ ಬರಲು ನಮ್ಮ ದೇಶದ ಆರ್ಥಿಕ ನೀತಿಗಳನ್ನು ಮಾರ್ಪಾಡು ಮಾಡಿ ಆರ್ಥಿಕ ಸುಧಾರಣೆಗಳನ್ನು ಜಾರಿಗೆ ತಂದರು. ಇದು ಬಹಳ ದೊಡ್ಡ ಬೆಳವಣಿಗೆ ಎಂದು ಮಾಜಿ ಪ್ರಧಾನಿಗಳು ಬಣ್ಣಿಸಿದರು.

ಮನಮೋಹನ್ ಸಿಂಗ್ ಅವರು ಸರಳ ಸಜ್ಜನ ಪ್ರಾಮಾಣಿಕ ವ್ಯಕ್ತಿ ಆಗಿದ್ದವರು. ನಾವು ಪಕ್ಷ ರಾಜಕಾರಣವನ್ನು ಹೊರತುಪಡಿಸಿ ಅವರನ್ನು ನೆನೆಯುತ್ತಿದ್ದೇವೆ. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ನಮ್ಮ ಪಕ್ಷದ ಪರವಾಗಿ, ವೈಯಕ್ತಿಕವಾಗಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ್ದಾರೆ ಎಂದರು ಅವರು.

ನರಸಿಂಹರಾವ್ ಸರಕಾರದಲ್ಲಿ ಈ ದೇಶದ ಗೌರವ ಉಳಿಸಲು ಆರ್ಥಿಕ ತಜ್ಞರಾಗಿ ಮನಮೋಹನ್ ಸಿಂಗ್ ಅವರು ಸೇವೆ ಸಲ್ಲಿಸಿದ್ದರು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದೇಶವನ್ನು ಪಾರು ಮಾಡಿ ಗೌರವ ಉಳಿಸಿದ್ದು ಅವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಹೇಳುತ್ತ ಮಾಜಿ ಪ್ರಧಾನಿಗಳು ಗದ್ಗದಿತರಾದರು.

ದೇಶಕ್ಕೆ ಮನಮೋಹನ್ ಸಿಂಗ್ ಅವರು ಸುಧೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ. ಮುತ್ಸದಿ ರಾಜಕಾರಣಿ ಹಿರಿಯ ರಾಜಕಾರಣಿ 92 ವಯಸ್ಸಲ್ಲಿ ಅಗಲಿದ್ದಾರೆ. ವಯಕ್ತಿಕ ನನಗೆ ತುಂಬಾ ಬೇಸರವಾಗಿದೆ. ಅವರ ಆತ್ಮಕ್ಕೆ ಭಗವಂತ ಮೋಕ್ಷ ಕೊಡಲಿ, ಪರಮಾತ್ಮ ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಭಾವುಕರಾದರು.

ದೇಶದಲ್ಲಿ ಯಾವುದೇ ಸರಕಾರಿ ಕಾರ್ಯಕ್ರಮ ಮಾಡಬಾರದು. ಶೋಕಾಚರಣೆ ಇದೆ. ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಕೊಡಬೇಕು. ಅವರು ನಮ್ಮ ದೇಶಕ್ಕೆ ಸುಧೀರ್ಘ ಸೇವೆ ಸಲ್ಲಿಸಿದ್ದಾರೆ. ಮುತ್ಸದಿ ರಾಜಕಾರಣಿ ಹಿರಿಯ ರಾಜಕಾರಣಿ ತಮ್ಮ 92ನೇ ವಯಸ್ಸಿನಲ್ಲಿ ನಮ್ಮನ್ನೆಲ್ಲಾ ಅಗಲಿದ್ದಾರೆ ದೇವೇಗೌಡರು ಹೇಳಿದರು.

ಅವರು ಜಾರಿ ಮಾಡಿದ ಉದಾರೀಕರಣ, ಖಾಸಗೀಕರಣ ಮತ್ತು ಜಾಗತೀಕರಣ ನೀತಿಗಳ ಮೂಲಕ ದೇಶಕ್ಕೆ ವಿದೇಶಿ ನೇರ ಬಂಡವಾಳ ದೊಡ್ಡ ಪ್ರಮಾಣದಲ್ಲಿ ಹರಿದು ಬಂತು. ಹಣಕಾಸು ಸಚಿವರಾಗಿ ಬರುವುದಕ್ಕೆ ಮೊದಲು ಅವರು ಜಾಗತಿಕ ಮಟ್ಟದಲ್ಲಿ ಕೆಲಸ ಮಾಡಿದ್ದರು. ಹೀಗಾಗಿ ಅಲ್ಲಿ ಬಹಳ ದೊಡ್ಡ ಅನುಭವ ಗಳಿಸಿಕೊಂಡರು. ಆರ್ಥಿಕ ವಿಚಾರದಲ್ಲಿ ಅವರು ತುಂಬಾ ಬುದ್ದಿವಂತರಾಗಿದ್ದರು ಎಂದು ದೇವೇಗೌಡರು ಮನಮೋಹನ್ ಸಿಂಗ್ ಅವರನ್ನು ಸ್ಮರಿಸಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮಾಜಿ ಶಾಸಕ ಲಿಂಗೇಶ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!