ನವದೆಹಲಿ: ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ (Manmohan Singh) ಅವರು ಅನಾರೋಗ್ಯದ ಕಾರಣ ಗುರುವಾರ ರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್‌ನಲ್ಲಿ ದಾಖಲಿಸಲಾಗಿತ್ತು.
ಸಿಂಗ್ ಅವರು 2004 ರಿಂದ 2014ರವರೆಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದರು.
ರಜೆ ಘೋಷಣೆ: ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಇಂದು (ಶುಕ್ರವಾರ) ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಎಲ್ಲ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
						 
						 
						 
						