Manmohan Singh: ಮನಮೋಹನ್‌ ಸಿಂಗ್‌ ನಿಧನ: ದೊಡ್ಡಬಳ್ಳಾಪುರದ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ

ದೊಡ್ಡಬಳ್ಳಾಪುರ: ಮಾಜಿ ಪ್ರಧಾನಿ, ದಾರ್ಶನಿಕ ಅರ್ಥಶಾಸ್ತ್ರಜ್ಞ ಮತ್ತು ಮಾಜಿ ಆರ್‌ಬಿಐ ಗವರ್ನರ್‌ ಡಾ.ಮನಮೋಹನ್‌ ಸಿಂಗ್‌ (Manmohan Singh) ಅವರ ನಿಧನದ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಡಾ.ಮನಮೋಹನ್‌ ಸಿಂಗ್‌ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮುಖಂಡರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು ಎಂದು ಸ್ಮರಿಸಿದರು.

ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು.

2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆಮಾಡಲಾಗುತ್ತದೆ.

ಹತ್ತು ವರ್ಷಗಳ ಕಾಲ ಪ್ರಧಾನಿ ಮಂತ್ರಿಯಾಗಿ ದೇಶದ ಅಧಿಕಾರದ ಚುಕ್ಕಾಣಿಯನ್ನು ಹಿಡಿದ ಮನಮೋಹನ್ ಸಿಂಗ್ ಅವರು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿಗೊಳಿಸಿದರು. ದೇಶ ಕಂಡ ಪ್ರಾಮಾಣಿಕ ಪ್ರಧಾನಮಂತ್ರಿಗಳಲ್ಲಿ ಒಬ್ಬರು.

ರಾಜಕಾರಣದಲ್ಲಿ ಪ್ರಾಮಾಣಿಕತೆ ಕಾಣಸಿಗುವುದು ವಿರಳ. ಆದರೆ ತಮ್ಮ ಅಧಿಕಾರವಧಿಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ, ದೇಶದ ಆರ್ಥಿಕತೆಯಲ್ಲಿ ತಮ್ಮ ಹೆಜ್ಜೆಗುರುತನ್ನು ಬಿಟ್ಟುಹೋಗಿದ್ದಾರೆ.

ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಹಾಗೂ ಸ್ಪೂರ್ತಿ ನೀಡುತ್ತಿದೆ. ದೀರ್ಘಾವಧಿಯವರೆಗೆ ಅಧಿಕಾರದಲ್ಲಿದ್ದರೂ ಅತ್ಯಂತ ಸರಳ, ವಿನಯವಂತರಾಗಿದ್ದ ಅವರು ದೇಶದ ಗೌರವಯುತ ವ್ಯಕ್ತಿಯಾಗಿದ್ದರು. ಇಂದು ಅವರು ನಮ್ಮನ್ನು ಅಗಲಿದ್ದು, ಭಾರತಕ್ಕೆ ಆದ ದೊಡ್ಡ ನಷ್ಟ ಎಂದರು.

ಈ ವೇಳೆ ಕೆಪಿಸಿಸಿ ಸದಸ್ಯ ಹೇಮಂತ್ ರಾಜ್, ಕಸಬ ಅಧ್ಯಕ್ಷ ಅಪ್ಪಿ ವೆಂಕಟೇಶ್, ದೊಡ್ಡಬಳ್ಳಾಪುರ ಪ್ರಾಧಿಕಾರದ ಅಧ್ಯಕ್ಷ ಆನಂದ ಮೂರ್ತಿ, ನಗರಸಭೆ ಸದಸ್ಯರಾದ ಆನಂದ್, ಮಂಜುನಾಥ್, ವಾಣಿ, ನಾಗವೇಣಿ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ನಿರ್ದೇಶಕ ಶ್ರೀನಗರ ಬಶೀರ್, ಶ್ರೀನಿವಾಸ್, ಮುಖಂಡರಾದ ಕೆಂಪಣ್ಣ, ದೊಡ್ಡಯ್ಯ, ಕೆವಿ ನಾಗೇಶ್, ರಾಘವ, ನಾಗರಾಜು, ನಾಗಸಂದ್ರ ಶಿವಕುಮಾರ್, ಮುನಿರಾಜು, ವೆಂಕಟೇಶ್, ಲಕ್ಷ್ಮೀಪತಿ ಇದ್ದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!