ದಾಬಸ್‌ಪೇಟೆ: ಸೋಂಪುರ ಹೋಬಳಿ ರಾಮದೇವರ ಬೆಟ್ಟದ ತಪ್ಪಲಿನಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಕರಡಿ (Bear attack) ದಾಳಿ ನಡೆಸಿದೆ.
ಘಟನೆಯಲ್ಲಿ ವಿಜಯನಗರ ಜಿಲ್ಲೆ ಅಮ್ಮನಕೇರಿ ಗ್ರಾಮದ 49 ವರ್ಷದ ಸೇವಾನಂದ್ ಎಂಬಾತ ತೀವ್ರ ಗಾಯಗೊಂಡಿದ್ದಾರೆ.
ಗಾಯಾಳುವನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ರಾಮದೇವರ ಬೆಟ್ಟದ ಕಾಡಿಗೆ ಹೊಂದಿಕೊಂಡಂತೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ಸೇವಾನಂದ್ ಶುಕ್ರವಾರ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಕರಡಿ ದಾಳಿ ನಡೆಸಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)