Manmohan Singh: ಡಾ.ಮನಮೋಹನ ಸಿಂಗ್ ನಿಧನಕ್ಕೆ ಕಂಬನಿ ಮಿಡಿದ ದೇಶ: ಜಾಗತಿಕ ನಾಯಕರ ಸಂತಾಪ| ಇಂದು ಅರ್ಧ ದಿನ ರಜೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ (Manmohan Singh) ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ. ಶುಕ್ರವಾರ ದೆಹಲಿ ಸಂಸತ್ ಭವನ, ಎಲ್ಲಾ. ರಾಜ್ಯದ ವಿಧಾನಸೌಧಗಳು ಸೇರಿದಂತೆ ಸರಕಾರಿ ಕಚೇರಿಗಳಲ್ಲಿ ತ್ರಿವರ್ಣ ಧ್ವಜವನ್ನು ಅರ್ಧ ಧ್ವಜಸ್ತಂಭದವರೆಗೆ ಮಾತ್ರ ಏರಿಸಿ ಧ್ವಜಾ ಲೋಹಣ ಮಾಡುವ ಮೂಲಕ ಶೋಕಾಚರಣೆ ಆಚರಿಸಲಾಯಿತು.

ಮನಮೋಹನ ಸಿಂಗ್ ಅವರ ಪಾರ್ಥೀವ ಶರೀರವನ್ನು ವಿಮ್ಸ್ ನಿಂದ ಗುರುವಾರ ತಡರಾತ್ರಿ ಮೋತಿಲಾಲ್ ನೆಹರು ಮಾರ್ಗ ದಲ್ಲಿರುವ ಅವರ ನಿವಾಸಕ್ಕೆ ತರಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.

ರಾಷ್ಟ್ರಪತಿ ಬ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಕಾಂಗ್ರೆಸ್‌, ಜೆಡಿಎಸ್‌ನ ಹಿರಿಯ ನಾಯಕರು ಅಂತಿಮ ದರ್ಶನ ನಡೆದಿದ್ದಾರೆ.

ಮನಮೋಹನ ಸಿಂಗ್ ಅವರ ಪಾರ್ಥಿವ ಶರೀರದ ದರ್ಶನಕ್ಕಾಗಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಜಾಗತಿಕ ನಾಯಕರ ಸಂತಾಪ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಅಮೆರಿಕ, ಕೆನಡಾ, ಫ್ರಾನ್ಸ್ ಮತ್ತು ಶ್ರೀಲಂಕಾ ಸೇರಿದಂತೆ ವಿಶ್ವದಾದ್ಯಂತ ನಾಯಕರು ಸಂತಾಪ ಸೂಚಿಸಿದ್ದಾರೆ.

ನೇಪಾಳ, ಮಾಲ್ಡೀವ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ ನೆರೆಯ ದೇಶಗಳ ನಾಯಕರು ಸಿಂಗ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತವಡಿಸಿದ್ದು, ಅವರ ಕೊಡುಗೆಗಳು ಮತ್ತು ತಮ್ಮ ರಾಷ್ಟ್ರಗಳೊಂದಿಗಿನ ಆತ್ಮೀಯ ಸಂಬಂಧಗಳನ್ನು ಎತ್ತಿ ತೋರಿಸಿದ್ದಾರೆ.

ಅಮೆರಿಕ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಂಕೆನ್, ಡಾ.ಸಿಂಗ್ ಅವರು ಅಮೆರಿಕ-ಭಾರತ ಕಾರ್ಯತಂತ್ರದ ಪಾಲುದಾರಿಕೆಯ ಶ್ರೇಷ್ಠ ಚಾಂಪಿಯನ್‌ಗಳಲ್ಲಿ ಒಬ್ಬರು. ಅವರ ಕೆಲಸವು ಕಳೆದ ಎರಡು ದಶಕಗಳಲ್ಲಿ ನಮ್ಮ ದೇಶಗಳು ಒಟ್ಟಾಗಿ ಸಾಧಿಸಿದ ಹೆಚ್ಚಿನದಕ್ಕೆ ಅಡಿಪಾಯ ಹಾಕಿತು ಎಂದು ಹೇಳಿದರು.

ಫ್ರಾನ್ಸ್: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಡಾ.ಮನಮೋಹನ್ ಸಿಂಗ್ ಅವರ ನಿಧನದಿಂದ ಭಾರತ ಒಬ್ಬ ಮಹಾನ್ ವ್ಯಕ್ತಿಯನ್ನು ಮತ್ತು ಫ್ರಾನ್ಸ್ ನಿಜವಾದ ಸ್ನೇಹಿತನನ್ನು ಕಳೆದುಕೊಂಡಿದೆ. ಅವರು ತಮ್ಮ ಜೀವನವನ್ನು ತಮ್ಮ ದೇಶಕ್ಕಾಗಿ ಮುಡಿಪಾಗಿಟ್ಟಿದ್ದರು. ನಮ್ಮ ಆಲೋಚನೆಗಳು ಅವರ ಕುಟುಂಬ ಮತ್ತು ಭಾರತದ ಜನರೊಂದಿಗೆ ಇವೆ ಎಂದು ಎಕ್ಸ್‌ನಲ್ಲಿ ಪೋಸ್ ಮಾಡಿದ್ದಾರೆ.

ನೇಪಾಳ: ನೇಪಾಳದ ಮಾಜಿ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ದೂರದೃಷ್ಟಿಯ ನಾಯಕ ಮತ್ತು ಅಸಾಧಾರಣ ರಾಜನೀತಿಜ್ಞ ಡಾ.ಮನಮೋಹನ್ ಸಿಂಗ್ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಕುಟುಂಬಕ್ಕೆ ಮತ್ತು ಭಾರತದ ಜನರಿಗೆ ನನ್ನ ಹೃತ್ತೂರ್ವಕ ಸಂತಾಪಗಳು, ಅವರ ಜೀವನ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತದೆ.

ಮಾಲ್ಡೀವ್ಸ್: ಮಾಲ್ಡೀವ್ಸ್‌ನ ಮಾಜಿ ಅಧ್ಯಕ್ಷ ಮೊಹಮ್ಮದ್ ನಶೀದ್ ಅವರು ಮಾಜಿ ಪ್ರಧಾನಿಯನ್ನು ತಂದೆಯಂತಹ ಕರುಣಾಮಯಿ ವ್ಯಕ್ತಿ ಮತ್ತು ಮಾಲ್ಮೀವ್‌ನ ಉತ್ತಮ ಸ್ನೇಹಿತ ಎಂದು ಬರೆದಿದ್ದಾರೆ.

ಆಫ್ಘನ್: ಆಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ಅವರು ಎಕ್ಸ್ ಪೋಸ್ಟ್ ನಲ್ಲಿ ಭಾರತವು ತನ್ನ ಅತ್ಯಂತಶ್ರೇಷ್ಠ ಪುತ್ರರಲ್ಲಿ ಒಬ್ಬರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

ಆಫ್ಘಾನಿಸ್ತಾನದ ಜನರಿಗೆ ಅಚಲ ಮಿತ್ರ ಮತ್ತು ಸ್ನೇಹಿತ ಎಂದು ಕರೆದ ಕರ್ಜೈ, ಸಿಂಗ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದರು ಮತ್ತು ಅವರ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದರು.

ಮಲೇಷ್ಯಾ; ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ತಮ್ಮ ಗೌರವಾನ್ವಿತ ಮತ್ತು ಪ್ರೀತಿಪಾತ್ರ ಸ್ನೇಹಿತ ಗಾಗಿ ಎಕ್ಸ್ನಲ್ಲಿ ಹೃತ್ಪೂರ್ವಕ ಸಂದೇಶವನ್ನು ಬರೆದಿದ್ದಾರೆ.

ಇಂದು ಅರ್ಧ ದಿನ ರಜೆ

ಮನಮೋಹನ್ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ಕೇಂದ್ರ, ಜನವರಿ 1 ರವರೆಗೆ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದೆ.

ಈ ಸಮಯದಲ್ಲಿ ರಾಷ್ಟ್ರದಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸ ಲಾಗುತ್ತದೆ. ಜತೆಗೆ ಎಲ್ಲ ಭಾರತೀಯ ಮಿಷನ್‌ಗಳು ಮತ್ತು ಹೈಕಮಿಷನ್‌ಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ.

ಎಲ್ಲ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಶನಿವಾರ ಅರ್ಧ ದಿನ ರಜೆ ಘೋಷಿಸಲಾಗಿದೆ.

ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಭಿನ್ನಮತವಿದೆಯಾ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಭಿನ್ನಮತಿಯ ಚಟುವಟಿಕೆ ಇಲ್ಲ: Basavaraj Bommai

[ccc_my_favorite_select_button post_id="111273"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!