ದೊಡ್ಡಬಳ್ಳಾಪುರ ರಾಜಕಾರಣಕ್ಕೆ ಕಿಚ್ಚು ಹಚ್ಚಿದ JDSನ ಹರೀಶ್ ಗೌಡ..!

ದೊಡ್ಡಬಳ್ಳಾಪುರ: ಸದ್ಯದಲ್ಲೇ ನಡೆಯಲಿರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಹಾಗೂ ಮುಂದಿನ ವಿಧಾನ ಸಭಾ ಚುನಾವಣೆಯನ್ನು ದೃಷ್ಠಿಯಲ್ಲಿ ಪಕ್ಷ ಸಂಘಟನೆ ಪ್ರಾರಂಭಿಸಲಾಗಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಜೆಡಿಎಸ್ (JDS) ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳುವ ಮೂಲಕ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಹರೀಶ್ ಗೌಡ ಅವರು ಹೊಸ ವರ್ಷ ಆರಂಭಕ್ಕೆ ಮುನ್ನವೇ ದೊಡ್ಡಬಳ್ಳಾಪುರ ರಾಜಕಾರಣಕ್ಕೆ ಕಿಚ್ಚು ಹಚ್ಚಿದ್ದಾರೆ.

ಅವರು ತಾಲ್ಲೂಕಿನ ಶಾಕಲದೇವನಪುರ ಗ್ರಾಮದಲ್ಲಿ ಭಾನುವಾರ ನಡೆದ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಹಾಗೂ ಪಕ್ಷ ಸಂಘಟನ ಸಭೆಯಲ್ಲಿ ಮಾತನಾಡಿದರು.

ಜೆಡಿಎಸ್ ರಾಜ್ಯದಲ್ಲಿ NDA ಭಾಗವಾಗಿದ್ದರು ಸಹ ನಮ್ಮ ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವುದಕ್ಕೆ ಯಾರ ಅನುಮತಿಯು ಅಗತ್ಯ ಇಲ್ಲ. ನಗರಸಭೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕಾರ ಹಂಚಿಕೆಯಲ್ಲಿ ಬಿಜೆಪಿಯಿಂದ ಅನ್ಯಾಯವಾಗಿದೆ. ಇದು ಮುಂದಿನ ದಿನಗಳಲ್ಲಿ ಸರಿಯಾಗಬೇಕಿದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ತಮ್ಮದೇ ಆದ ಪ್ರಭಾವ ಹೊಂದಿದ್ದು, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಎದುರಿಸಲು ಶಕ್ತಿ ಹೊಂದಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಅವರ ಗೆಲುವಿಗೆ ಜೆಡಿಎಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತರ ಶ್ರಮವೆ ಹೊರತು, ಬಿಜೆಪಿ ಮುಖಂಡರು ಯಾವ ರೀತಿ ನಡೆದುಕೊಂಡರು ಎನ್ನುವ ಸತ್ಯದ ಅರಿವು ಎಲ್ಲರಿಗೂ ತಿಳಿದಿದೆ ಎಂದರು.

ಕ್ಷೇತ್ರದ ಬಿಜೆಪಿ ಶಾಸಕರು ಜೆಡಿಎಸ್ ಪಕ್ಷದ ಬಗ್ಗೆ ಮಾತಾನಾಡುವುದನ್ನು ಬಿಡಬೇಕು. ನಮ್ಮ ಪಕ್ಷಕ್ಕೂ ಒಂದು ಹೈಕಮಾಂಡ್ ಇದೆ, ಅವರು ಹೇಳಿದಂತೆ ಪಕ್ಷವನ್ನು ಮುನ್ನಡೆಸುತ್ತೇವೆ. ನಗರದ ಅಭಿವೃದ್ಧಿ ಕಡೆಗೆ ಆದ್ಯತೆ ನೀಡಬೇಕೆ ವಿನಹ, ಜೆಡಿಎಸ್ ಮುಖಂಡರಿಗೆ ಪಾಠ ಹೇಳುವುದನ್ನು ಹಾಗೂ ನಮ್ಮ ಪಕ್ಷದ ಆತಂರಿಕ ವಿಷಯದಲ್ಲಿ ತಲೆಹಾಕುವುದನ್ನು ಶಾಸಕ ನಿಲ್ಲಿಸಬೇಕು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಆಡಳಿತ ಯಂತ್ರ ಕುಸಿದಿರುವ ಕಾರಣದಿಂದಲೇ ತಾಲ್ಲೂಕು ಕಚೇರಿ ಹಾಗೂ ಎ.ಸಿ ಕಚೇರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಾಲ್ಲೂಕು ಕಚೇರಿಯಲ್ಲಿನ ಅವ್ಯವಸ್ಥೆ ಸಚಿವರವರೆಗೂ ತಲುಪಿದೆ. ಆದರೆ ಕ್ಷೇತ್ರದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ನಗರಸಭೆ ಹಿರಿಯ ಸದಸ್ಯ ಟಿ.ಎನ್.ಪ್ರಭುದೇವ್ ಮಾತನಾಡಿ, ಜೆಡಿಎಸ್ ಅಭ್ಯರ್ಥಿ ಕ್ಷೇತ್ರದಲ್ಲಿ ಸೋಲುಕಂಡಿರಬಹುದು. ಆದರೆ ಪಕ್ಷ ತಳಮಟ್ಟದಿಂದಲೂ ಸದೃಢವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಅಧಿಕಾರದಲ್ಲಿ ಇರುವುದರಿಂದ ಪಕ್ಷದ ಕಾರ್ಯಕರ್ತರಿಗೆ ಅಧಿಕಾರಗಳು ಲಭಿಸಿರಬಹುದು. ಆದರೆ ನಮ್ಮ ಪಕ್ಷದ ಕಾರ್ಯಕರ್ತರು ಅಧಿಕಾರಕ್ಕಾಗಿ ಮಾತ್ರ ಆಸೆಪಟ್ಟು ಕೆಲಸ ಮಾಡುವವರಲ್ಲ.

ಪಕ್ಷದ ತತ್ವ ನಿಷ್ಠೆಗಳಿಗೆ ಬದ್ದರಾಗಿ ಹೈಕಮಾಂಡ್ ಆದೇಶದಂತೆ ಕೆಲಸ ಮಾಡುತ್ತಾರೆ. ದೇಶದ ಪ್ರಗತಿಯ ದೃಷ್ಠಿಯಿಂದ ಜೆಡಿಎಸ್ ಲೋಕಸಭೆಯಲ್ಲಿ ಬಿಜೆಪಿಯೊಂದಿಗೆ ಕೈಜೋಡಿಸಿದೆ. ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಉತ್ತಮ ಸಚಿವ ಸ್ಥಾನ ದೊರೆತಿರುವುದರಿಂದ ರಾಜ್ಯಕ್ಕೂ ಉತ್ತಮ ಯೋಜನೆಗಳು ಬರುವ ಮೂಲಕ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಟಿಎಪಿಎಂಸಿಎಸ್ ನಿರ್ದೇಶಕ ಆನಂದ್, ಜೆಡಿಎಸ್ ಮುಖಂಡರಾದ ಕಾಂತಮಣಿ ಹರೀಶ್ ಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಜಿ.ವಿಜಯಕುಮಾರ್, ಪ್ರಭಾಕರ್, ಎ.ನಾಗರಾಜ್, ಚಿಕ್ಕಣ್ಣಪ್ಪ, ಬಿ.ಕೃಷ್ಣಪ್ಪ, ಚಂದ್ರಣ್ಣ, ಮುನಿರಾಜಪ್ಪ, ಗೌರೀಶ್, ಪ್ರವೀಣ್, ತಳವಾರ್ ನಾಗರಾಜ್, ನಾರಾಯಣಪ್ಪ, ನರಸಿಂಹಗೌಡ, ಜಗನ್ನಾಥಚಾರ್ ಇದ್ದರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!