ಬೆಂಗಳೂರು ಗ್ರಾಮಾಂತರ ಜಿಲ್ಲೆ (breaking news): ನೆಲಮಂಗಲ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿ.ಎಸ್.ಆರ್ ನಿಧಿಯಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಆಸ್ಪತ್ರೆ ಕಾಮಾಗಾರಿ ನಡೆಯುತ್ತಿರುವ ಕಾರಣ ಆಸ್ಪತ್ರೆಗೆ ಬರುವ ತುರ್ತು ಶಸ್ತ್ರ ಚಿಕಿತ್ಸಾ ಪ್ರಕರಣಗಳನ್ನು ಜನವರಿ 01 ರಿಂದ 28 ರವರೆಗೆ ಒಟ್ಟು 28 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನೆಲಮಂಗಲ ತಾಲ್ಲೂಕು ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ಬರುವಂತ ರೋಗಿಗಳಿಗೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಮತ್ತು ತ್ಯಾಮಗೊಂಡ್ಲು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಆಂಬುಲೈನ್ಸ್ ಮೂಲಕ ರವಾನಿಸಿ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ.
ದುರಸ್ತಿ ಕಾರ್ಯ ಮುಗಿಯುವವರೆಗೂ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು ನೆಲಮಂಗಲ ಸಾರ್ವಜನಿಕ ಆಸ್ಪತ್ರೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						