ಮುಂಡಗೋಡ: ಅಂಗನವಾಡಿಗೆ ತೆರಳಿದ್ದ ಬಾಲಕಿ ಹಾವು ಕಚ್ಚಿದ (Snake bite) ಪರಿಣಾಮ ಸಾವನ್ನಪ್ಪಿರುವಂತಹ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಮಾರಿಕಾಂಬಾ ನಗರದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು 5 ವರ್ಷದ ಮಯೂರಿ ಸುರೇಶ ಕುಂಬಳೆಪ್ಪನವರ ಎಂದು ಗುರುತಿಸಲಾಗಿದೆ.
ಬಾಲಕಿ ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಕಲಿಯುತ್ತಿದ್ದಳು. ಅಂಗನವಾಡಿಗೆ ಹೋಗಿದ್ದ ಬಾಲಕಿ ಮೂತ್ರವಿಸರ್ಜನೆಗೆಂದು ಅಂಗನವಾಡಿಯ ಹಿಂಬದಿ ತೆರಳಿದ್ದಳು. ಈ ವೇಳೆ ಹಾವು ಕಚ್ಚಿದೆ.
ನಂತರ ಬಾಲಕಿಗೆ ರಕ್ತ ಸ್ರಾವವಾಗುತ್ತಿರುವುದನ್ನು ಕಂಡ ಅಂಗನವಾಡಿ ಸಿಬ್ಬಂದಿ ತಕ್ಷಣ ಆಕೆಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್‌ಗೆ ಕರೆದೊಯ್ಯುವಾಗ ಮಾರ್ಗದ ಮಧ್ಯೆಯೇ ಬಾಲಕಿ ಮೃತಪಟ್ಟಿದ್ದಾಳೆಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)