Cmsiddaramaiah| ಹಳೆಯ ಪಿಂಚಣಿ ವ್ಯವಸ್ಥೆ ಮರು ಜಾರಿ: ಸಿಎಂ ಭರವಸೆ

ಬೆಂಗಳೂರು: ರಾಜ್ಯ ಸರಕಾರಿ ನೌಕರರ ಬಹುದಿನದ ಬೇಡಿಕೆ ಹಾಗೂ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸರಕಾರದ ಪ್ರಮುಖ ಘೋಷಣೆಯಾಗಿದ್ದ ಒಪಿಎಸ್‌ ಜಾರಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Cmsiddaramaiah) ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾ‌ರ್ ಅವರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳ ನಿಯೋಗ, ಒಪಿಎಸ್ ಮರುಜಾರಿಗೆ ಮನವಿ ಮಾಡಿದ್ದಾರೆ. ಇದರೊಂದಿಗೆ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಬಗ್ಗೆಯೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಪದಾಧಿಕಾರಿಗಳಿಂದ ಸಿಎಂ ಭೇಟಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಸಂಘದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ನಿಯೋಗದೊಂದಿಗೆ ಸಿಎಂರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಇದೇ

ಸಂದರ್ಭದಲ್ಲಿ ರಾಜ್ಯ ಸರಕಾರಿ ನೌಕರ ರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಮರುಸ್ಥಾಪಿ ಸುವ ಸಂಬಂಧ ಸರಕಾರದಿಂದ ರಚಿತವಾಗಿರುವ ಅಧಿಕಾರಿಗಳ ಸಮಿತಿಯಿಂದ ಶೀಘ್ರ ವರದಿ ಪಡೆದು ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಮನವಿ ಮಾಡಲಾಯಿತು. ಈ ವಿಷಯವಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಗಳು ಸಮಿತಿಯಿಂದ ಶೀಘ್ರ ವರದಿ ಪಡೆದು ಈಡೇರಿಸುವ ಭರವಸೆ ನೀಡಿದ್ದಾರೆ.

ಅಲ್ಲದೇ, ರಾಜ್ಯ ಸರಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಉಚಿತ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾ ಗೊಳಿಸುವ ಭರವಸೆ ನೀಡಿದರು.

ಎರಡನೇ ಬಾರಿಗೆ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಿ.ಎಸ್ ಷಡಾಕ್ಷರಿಗೆ ಮುಖ್ಯಮಂತ್ರಿ ಶುಭ ಹಾರೈಸಿದರು. ಅಲ್ಲದೆ, ಸಂಘದ ಬೇಡಿಕೆಗಳನ್ನು ಈಡೇರಿಸುವ ಆಶ್ವಾಸನೆ ನೀಡಿ ರಾಜ್ಯದ ಸಮಸ್ತ ಸರಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ತಿಳಿಸಿದರು.

ಈ ಸಂದರ್ಭದಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾ‌ರ್, ಸಚಿವಾಲಯ ನೌಕರ ಸಂಘದ ಅಧ್ಯಕ್ಷರಾದ ರಮೇಶ್ ಸಂಗಾ, ಕೊಪ್ಪಳ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ರಾಮನಗರ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಕೆಲವು ತಾಲೂಕು ಸಂಘಗಳ ಅಧ್ಯಕ್ಷರು- ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್‌ ಸದಸ್ಯರು ರಾಜ್ಯಾಧ್ಯಕ್ಷರ ನಿಯೋಗದಲ್ಲಿದ್ದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!