
ಬೆಂಗಳೂರು ಗ್ರಾಮಾಂತರ ಜಿಲ್ಲೆ; ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ
ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ (Application Invitation).
ಜಿಲ್ಲೆಯ ಜವಳಿ ಉದ್ದಿಮೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ವೈಯಕ್ತಿಕ ಫಲಾನುಭವಿ/ ಪಾಲುದಾರಿಕೆ ಸಂಸ್ಥೆ / ಕಂಪನಿ/ ಜವಳಿ ಸಹಕಾರ ಸಂಘ / ಸಂಸ್ಥೆಯ ವತಿಯಿಂದ ಸಣ್ಣ ಮತ್ತು ಅತೀ ಸಣ್ಣ (ಎಸ್.ಎಂ.ಇ.) ಘಟಕಗಳನ್ನು ಪ್ರಾರಂಭಿಸಲು ಉತ್ತೇಜಿಸುವ ಸಲುವಾಗಿ ಯೋಜನೆಯನ್ನು ಜಾರಿಗೆ ತರಲಾಗಿದೆ .
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್,
ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ 080-29501945 ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
						 
						 
						 
						