ದೊಡ್ಡಬಳ್ಳಾಪುರ (Doddaballapura): ನೀರಿನ ಟ್ಯಾಂಕರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ, ಕ್ಯಾಂಟರ್ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟಕೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಬಳಿ ಸಂಭವಿಸಿದೆ.
ದಾಬಸ್‌ಪೇಟೆ ಕಡೆಯಿಂದ ಬರುತ್ತಿದ್ದ ಸರಕು ಸಾಗಣೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ, ರಸ್ತೆ ಬದಿಯ ಗಿಡಗಳಿಗೆ ನೀರು ಹಾಯಿಸುತ್ತಿದ್ದ ನೀರಿನ ಟ್ಯಾಂಕರ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಕ್ಯಾಂಟರ್ ಮುಂಭಾಗ ನಜ್ಜುಗುಜ್ಜಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.