Photographs of tourist spots: ಶಕ್ತಿ ಕೇಂದ್ರಗಳ ಕಟ್ಟಡದ ಸೌಂದರ್ಯಕ್ಕೆ ಪ್ರವಾಸಿ ತಾಣಗಳ ಛಾಯಾಚಿತ್ರಗಳ ಮೆರಗು

ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದ್ದು, ಮುಖ್ಯಮಂತ್ರಿ
ಸಿದ್ದರಾಮಯ್ಯ, ಪ್ರವಾಸೋದ್ಯಮ ‌ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್‌ ಕೆ ಪಾಟೀಲ್‌ ಅವರು ವಿಧಾನಸೌಧದ ಕ್ಯಾಬಿನೆಟ್‌ ಹಾಲ್‌ ಮುಂಭಾಗ ಕಳೆದ ವರ್ಷ ಯುನೆಸ್ಕೋ ಪಟ್ಟಿಗೆ ಸೇರಿದ ಚೆನ್ನಕೇಶವ ದೇವಾಲಯ, ಸೋಮನಾಥಪುರ ಹಾಗೂ ವಿಷ್ಣು ಮೂರ್ತಿ, ಗುಹಾಂತರ ದೇವಾಲಯ ಬಾದಾಮಿಯ ಛಾಯಾಚಿತ್ರಗಳನ್ನು (Photographs of tourist spots) ಗುರುವಾರ ಅನಾವರಣಗೊಳಿಸಿದರು.

ವಿಧಾನಸೌಧದಲ್ಲಿ ವಿಜಯಪುರದ ಗೋಲಗುಮ್ಮಟ, ವೀರನಾರಾಯಣ ದೇವಾಲಯ, ಗದಗ, ಪಟ್ಟದಕಲ್ಲು, ಹಂಪಿ, ಮೈಸೂರು ದಸರಾ, ಮೈಸೂರು ಅರಮನೆಯ ದರ್ಬಾರ್‌ ಹಾಲ್‌, ಜೋಗಜಲಪಾತ, ಕಬಿನಿ,ಯಕ್ಷಗಾನ, ಕಂಬಳ ಮತ್ತು ಕರ್ನಾಟಕ ರಾಜ್ಯದ Geographical Indication (G I) ಉತ್ಪನ್ನಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದೆ.

ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡಗಳ ಸೌಂದರ್ಯವನ್ನು ಹೆಚ್ಚಿಸಲು ಹಾಗೂ ನಮ್ಮ ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳು, ಶಿಲ್ಪಕಲೆ, ಪಾಕಶೈಲಿ ಮತ್ತು ಸಂಸ್ಕೃತಿಯನ್ನು ಪ್ರಚಾರಪಡಿಸುವ ಹಿತದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖಾ ವತಿಯಿಂದ ಛಾಯಾಚಿತ್ರಗಳನ್ನು ಅಳವಡಿಸಲಾಗುವುದು.

ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಅನ್ವಯ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ ನೂತನ ವರ್ಷದ ಕ್ಯಾಲೆಂಡರ್‌ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ‌ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್‌ ಕೆ ಪಾಟೀಲ್‌ ಹಾಗೂ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್‌ ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳಾದ ಸಲ್ಮಾ ಕೆ ಫಹೀಂ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ.ಕೆ.ವಿ.ರಾಜೇಂದ್ರ ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!