JDS ಗೆ ಪುಟಿದೇಳುವ, ಫೀನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ಶಕ್ತಿ ಇದೆ: ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಜೆಡಿಎಸ್ (JDS) ಪಕ್ಷಕ್ಕೆ ಪುಟಿದೇಳುವ, ಫೀನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ಶಕ್ತಿ ಇದೆ. ಅನೇಕ ಸಂದರ್ಭದಲ್ಲಿ ಅದು ಸಾಬೀತಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಮೈಸೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು; ಪಕ್ಷ ಸಂಘಟನೆ ಚೆನ್ನಾಗಿದ್ದರೆ ನಾವು ಯಾವುದೇ ಚುನಾವಣೆಯನ್ನು ಗೆಲ್ಲಬಹುದು. ಕಾರ್ಯಕರ್ತರ ಪರಿಶ್ರಮದಿಂದ ನಮ್ಮ ಪಕ್ಷ ಅನೇಕ ಯಶಸ್ಸುಗಳನ್ನು ಗಳಿಸಿದೆ. ಸದಸ್ಯತ್ವ ನೋಂದಣಿ ಸಮರೋಪಾದಿಯಲ್ಲಿ ಮಾಡುವ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಮೈಸೂರು ಜಿಲ್ಲೆಯಿಂದಲೇ ರಣಕಹಳೆ ಮೊಳಗಿಸೋಣ ಎಂದು ಕರೆ ನೀಡಿದರು.

ಜೆಡಿಎಸ್ ವ್ಯಕ್ತಿ ಆಧಾರಿತ ಪಕ್ಷವಲ್ಲ. ಕಾರ್ಯಕರ್ತರು, ರೈತರು ಕಟ್ಟಿರುವ ಪಕ್ಷ. ನಮ್ಮ ಪಕ್ಷ ಬಲವಾಗಿದ್ದರೆ ರೈತರಿಗೆ ಅನುಕೂಲ ಆಗುತ್ತದೆ. ಎಲ್ಲಾ ಸಮಾಜಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಶಕ್ತಿಯನ್ನು ಹೊಂದಿದೆ. ದೇವೇಗೌಡರ ಶ್ರಮ, ದೂರದೃಷ್ಟಿಯಿಂದ ಜೆಡಿಎಸ್ ಇವತ್ತಿಗೂ ಸಶಕ್ತವಾಗಿ ನಿಂತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ದೇವೇಗೌಡರು ಜಾತಿ ಧರ್ಮ ಮೀರಿ ಎಲ್ಲಾ ಸಮಾಜದ ಮುಖಂಡರನ್ನು ಗುರುತಿಸಿ ದೊಡ್ಡ ನಾಯಕರನ್ನಾಗಿ ರೂಪಿಸಿ ಬೆಳೆಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಮ ಸಮಾಜದ ಆಶಯವಾಗಿ ಎಲ್ಲಾ ಸಮುದಾಯಗಳ ನಾಯಕರನ್ನು ಬೆಳೆಸಿದರು. ಅದನ್ನು ಸ್ಮರಿಸಿಕೊಳ್ಳುವ ಹೃದಯ ವೈಶಾಲ್ಯತೆ ಅನೇಕರಿಗೆ ಇಲ್ಲ. ಅದರ ಬಗ್ಗೆ ನನಗೆ ಚಿಂತೆ ಇಲ್ಲ. ಆದರೆ, ಪಕ್ಷ ನಿಷ್ಠೆಯಿಂದ ಪಕ್ಷಕ್ಕಾಗಿ ದುಡಿಯುತ್ತಿರುವವರಿಗೆ ಮನ್ನಣೆ ಯಾವತ್ತೂ ಇದೆ ಎಂದು ಕೇಂದ್ರ ಸಚಿವರು ಹೇಳಿದರು.

ನಾಯಕ ಸಮುದಾಯಕ್ಕೆ ಮೀಸಲು ಕೊಡಬೇಕಾದರೆ ದೇವೆಗೌಡರ ಕೊಡುಗೆ ದೊಡ್ಡದು. ಚಂದ್ರಶೇಖರ್ ಅವರು ಮಂತ್ರಿ ಮಾಡುತ್ತೇನೆ ಎಂದರು. ನನಗೆ ಮಂತ್ರಿ ಸ್ಥಾನ ಬೇಡ. ಅದರ ಬದಲಿಗೆ ನಾಯಕ ಸಮಾಜವನ್ನು ಪರಿಶಿಷ್ಟ ಪ್ರವರ್ಗಕ್ಕೆ ಸೇರಿಸಿ ಎಂದು ಕೇಳಿದರು. ಅವರ ಒತ್ತಾಯದ ಮೇರೆಗೆ ಇವತ್ತು ನಾಯಕ ಸಮಾಜ ಎಸ್ಟಿ ಪ್ರವರ್ಗದಲ್ಲಿದೆ. ಅಷ್ಟೇ ಅಲ್ಲ, ಆ ಸಮುದಾಯದ ಮಠ ಕಟ್ಟಬೇಕಾದರೆ ಅವರ ಕೊಡುಗೆ ಇದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ನಾವು ನಿರಾಶರಾಗಬೇಕಿಲ್ಲ. ನಮ್ಮ ಪಕ್ಷಕ್ಕೆ ಬಹಳ ಒಳ್ಳೆಯ ಭವಿಷ್ಯ ಇದೆ. ಮೈಕೊಡವಿ ಹೋರಾಟ ಮಾಡೋಣ, ಪಕ್ಷ ಕಟ್ಟೋಣ. ನಮ್ಮ ಮಿತ್ರಪಕ್ಷ ಬಿಜೆಪಿ ಜತೆ ಸೇರಿ ಅಧಿಕಾರಕ್ಕೆ ಬಂದೇ ಬರುತ್ತವೆ. ನಾನು ಇಡೀ ದೇಶದಲ್ಲಿಯೇ ರಾಜ್ಯದಲ್ಲಿ ಇರುವಂತಹ ಕೆಟ್ಟ ಸರಕಾರವನ್ನು ನಾನು ಬೇರೆ ಯಾವ ರಾಜ್ಯದಲ್ಲಿಯೂ ನೋಡಿಲ್ಲ.

ಕೇವಲ ಐದು ಗ್ಯಾರಂಟಿ ಕೊಟ್ಟು ಜನರ ಮೇಲೆ ಬರೆಯ ಮೇಲೆ ಬರೆ ಎಳೆಯುತ್ತಿದೆ. ಇವತ್ತು ಮಧ್ಯರಾತ್ರಿಯಿಂದ ಬಸ್ ದರ 15% ಜಾಸ್ತಿ ಆಗುತ್ತಿದೆ. ಕಾಂಗ್ರೆಸ್ ನವರಿಗೆ ಮಧ್ಯರಾತ್ರಿ ಎಂದರೆ ಬಹಳ ಇಷ್ಟ. ದರದ ಮೇಲೆ ದರ ಏರಿಸುತ್ತಾ ಹೋದರೆ ₹2000 ಕೊಡೋದು ದೊಡ್ಡ ವಿಷಯವೇ? ನಾನೇ ಸಿಎಂ ಆಗಿದ್ದಿದ್ದರೆ ₹2000 ಬದಲು ₹5000 ಕೊಡುತ್ತಿದ್ದೆ ಎಂದು ರಾಜ್ಯ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ವಿಪರೀತ ಭ್ರಷ್ಟಾಚಾರದಲ್ಲಿ ಮುಳುಗಿದೆ. ಐದು ಕೋಟಿ, ಹತ್ತು ಕೋಟಿ ಎಂದು ಒಂದೇ ಸಲ ಬಿಡುಗಡೆ ಮಾಡುತ್ತೇವೆ ಎಂದು ಹೇಳುತ್ತಾರೆ. ಆಮೇಲೆ ಐದು ಪರ್ಸೆಂಟ್ ಹತ್ತು ಪರ್ಸೆಂಟ್ ಡಿಮ್ಯಾಂಡ್ ಮಾಡುತ್ತಿದ್ದಾರೆ.

ಮುಸ್ಲಿಮರು ನಮ್ಮವರು ಎಂದು ಈ ಸರ್ಕಾರ ಹೇಳುತ್ತೆ. ಆದರೆ, ಅದೇ ಮುಸ್ಲಿಮ ಗುತ್ತಿಗೆದಾರರಿಂದ ಸುಲಿಗೆ ಮಾಡುತ್ತಿದೆ. ಗುತ್ತಿಗೆದಾರನೊಬ್ಬ ದಯಾಮರಣ ಕೊಡಿ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾನೆ. ಇದಕ್ಕೆ ಏನು ಉತ್ತರ ಕೊಡುತ್ತೀರಿ ಸಿದ್ಧರಾಮಯ್ಯನವರೇ.. ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದರು.

ವಾಲ್ಮೀಕಿ ನಿಗಮದ ಅಕ್ರಮ ಗೊತ್ತೇ ಇದೆ. ಅಲ್ಲಿ ಚಂದ್ರಶೇಖರ್ ಎನ್ನುವ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳದೆ ಇದ್ದಿದ್ದರೆ ಸಿದ್ದರಾಮಯ್ಯ ಅವರ ರಾಮಾಯಣ ಬಯಲಿಗೆ ಬರುತ್ತಿರಲಿಲ್ಲ. ಅಧಿಕಾರಿಗಳು, ಗುತ್ತಿಗೆದಾರರು ನಿರಂತರವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಉದ್ದಗಲಕ್ಕೂ ಬಾಣಂತಿಯರು ಆಸ್ಪತ್ರೆಗಳಲ್ಲಿಯೇ ಜೀವ ಕಳೆದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರೇ ನಿಮಗೆ ಕಿಂಚಿತ್ತಾದರೂ ದುಃಖ ಬೇಡವೇ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ವಿರುದ್ಧ ಸಾ.ರಾ.ಮಹೇಶ್ ಆಕ್ರೋಶ

ಇನ್ನು ಇಪ್ಪತ್ತು ಇಪ್ಪತ್ತೈದು ವರ್ಷದ ನಂತರ ಯೋಚನೆ ಮಾಡಬೇಕಾದ ವಿಷಯವನ್ನು ಈಗಲೇ ಯಾಕೆ ಯೋಚನೆ ಮಾಡುತ್ತಿದ್ದೀರಿ. ಮೈಸೂರು ನಗರ, ಈ ಭಾಗಕ್ಕೆ ರಾಜಮನೆತನ ಕೊಟ್ಟಿರುವ ಕೊಡುಗೆಗಿಂತ ದೊಡ್ಡ ಕೊಡುಗೆ ನೀವು ಕೊಟ್ಟಿದ್ದೀರಾ? ಈ ವಿಷಯದ ಬಗ್ಗೆ ಸಂಕೋಚ ಬೇಡವೇ? ಅಸಹ್ಯ ಅನಿಸುತ್ತಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಒಂದು ಕುಟುಂಬ. ಮನೆ ಎಂದ ಮೇಲೆ ಸಣ್ಣಪುಟ್ಟ ಸಮಸ್ಯೆ ಇದ್ದೇ ಇರುತ್ತದೆ. ಅದನ್ನು ನಾವು ಸರಿ ಮಾಡಿಕೊಳ್ಳುತ್ತೇವೆ ಎಂದ ಅವರು; ನಾವು ಸಂಘಟಿತವಾಗಿ ಕೆಲಸ ಮಾಡಬೇಕು ಹಾಗೂ ಸದಸ್ಯತ್ವ ನೋಂದಣಿಯನ್ನು ದೊಡ್ಡ ಪ್ರಮಾಣದಲ್ಲಿ ಮಾಡಬೇಕು ಎಂದು ಅವರು ಕರೆ ನೀಡಿದರು.

ಶಾಸಕ ಜಿ.ಡಿ.ಹರೀಶ್ ಗೌಡ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಕೆಲಸಗಳಲ್ಲಿಯೇ ನಿರಂತರವಾಗಿ ತೊಡಗಿದೆ. ಜನರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿಲ್ಲ. ಬದಲಾಗಿ ಸಹಕಾರ ಸಂಸ್ಥೆಗಳಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಇಂತಹ ಸರ್ಕಾರದ ವಿರುದ್ಧ ಜನರಿಗೆ ಆಕ್ರೋಶ ಇದೆ. ನಾವು ಜನಪರವಾಗಿ ದನಿಯೆತ್ತಿ ಹೋರಾಟ ನಡೆಸಬೇಕಿದೆ ಎಂದರು.

ಮೈಸೂರು ಭಾಗದಲ್ಲಿ ಬೆಳೆಯಲಾಗುವ ತಂಬಾಕು ಖರೀದಿಗೆ ಕಂಪನಿಗಳು ನಿರ್ಲಕ್ಷ್ಯ ವಹಿಸಿದ್ದವು. ನಮ್ಮ ಪಕ್ಷದ ನಾಯಕರೆಲ್ಲರೂ ಸೇರಿ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ದೆಹಲಿಗೆ ತೆರಳಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಹಾಗೂ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದ್ದೆವು. ಅದರ ಫಲವಾಗಿ ಪ್ರತೀ ಕೆಜಿ ತಂಬಾಕನ್ನು ₹240ರಿಂದ 260 ದರದಲ್ಲಿ ಖರೀದಿ ಮಾಡಲು ಕಂಪನಿಗಳು ಮುಂದೆ ಬಂದಿವೆ. ಇಂತಹ ಒಳ್ಳೆಯ ಪ್ರಯತ್ನಗಳನ್ನು ಮಾಡುತ್ತಾ ಪಕ್ಷವನ್ನು ಕಟ್ಟೋಣ ಎಂದರು ಅವರು.

ಮಾಜಿ ಶಾಸಕ ಮಹದೇವು, ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಮಂಜೇಗೌಡ, ವಿವೇಕಾನಂದ, ಪ್ರೇಮಕುಮಾರಿ ಸೇರಿದಂತೆ ಅನೇಕರು ಮಾತನಾಡಿದರು.

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!